ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಐಸಿಸಿ ಟೆಸ್ಟ್ ಚಾಂಪಿಯನ್ ಫೈನಲ್ ಪೂರ್ವ ನಿಗಧಿಯಂತೆಯೇ ನಡೆಯಲಿದೆ ಎಂದು ಐಸಿಸಿ ಸ್ಪಷ್ಟಪಡಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ದುಬೈ(ಏ.20): ಜೂನ್ 18ರಿಂದ 22ರ ವರೆಗೂ ಸೌಥಾಂಪ್ಟನ್‌ನಲ್ಲಿ ನಡೆಯಬೇಕಿರುವ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಯಾವುದೇ ಆತಂಕವಿಲ್ಲ. ನಿಗದಿತ ದಿನಾಂಕದಂದೇ ಪಂದ್ಯ ಆರಂಭಗೊಳ್ಳಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಸೋಮವಾರ ತಿಳಿಸಿದೆ.
ಭಾರತದಲ್ಲಿ ಕೊರೋನಾ ಸೋಂಕು ದಾಖಲೆಯ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್, ಭಾರತೀಯರ ಪ್ರಯಾಣದ ಮೇಲೆ ಕಣ್ಗಾವಲು ಇರಿಸಲು ನಿರ್ಧರಿಸಿದ್ದು, ಭಾರತೀಯ ಪ್ರಯಾಣಿಕರನ್ನು ‘ಕೆಂಪು ಪಟ್ಟಿ’ಗೆ ಸೇರಿಸಲು ನಿರ್ಧರಿಸಿದೆ. ಅಂದರೆ ಭಾರತಕ್ಕೆ ಕಳೆದ 10 ದಿನಗಳಲ್ಲಿ ಭೇಟಿ ನೀಡಿದ್ದ ಯಾವುದೇ ಪ್ರಯಾಣಿಕರು ಬ್ರಿಟನ್‌ಗೆ ಪ್ರವೇಶಿಸುವಂತಿಲ್ಲ. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಸುರಕ್ಷಿತವಾಗಿ ಪಂದ್ಯ ನಡೆಸಲು ಬೇಕಿರುವ ಸಿದ್ಧತೆಗಳನ್ನು ಈಗಾಗಲೇ ಆರಂಭಿಸಿದ್ದೇವೆ. ನಮ್ಮ ಯೋಜನೆ ಐಸಿಸಿಗೆ ಸಮಾಧಾನ ತಂದಿದೆ ಎಂದು ತಿಳಿಸಿದೆ.
ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಲಾರ್ಡ್ಸ್‌ನಿಂದ ಬೇರೆಡೆಗೆ ಶಿಫ್ಟ್..!
ಐಸಿಸಿ ಟೆಸ್ಟ್ ಚಾಂಪಿಯನ್ ಫೈನಲ್‌ಗೆ ನ್ಯೂಜಿಲೆಂಡ್‌ಗೆ ಮೊದಲು ಅರ್ಹತೆಗಿಟ್ಟಿಸಿಕೊಂಡಿದ್ದು, ಭಾರತ ತಂಡವು ಇಂಗ್ಲೆಂಡ್ ವಿರುದ್ದ ಟೆಸ್ಟ್ ಸರಣಿಯನ್ನು ಜಯಿಸುವ ಮೂಲಕ ಟೆಸ್ಟ್ ವಿಶ್ವಕಪ್ ಫೈನಲ್‌ಗೆ ಅರ್ಹತೆಗಿಟ್ಟಿಸಿಕೊಂಡಿತ್ತು.
