ಸ್ಯಾಂಟ್ನರ್ ದಾಳಿಗೆ ಟೀಂ ಇಂಡಿಯಾ ತಬ್ಬಿಬ್ಬು; ಕಿವೀಸ್‌ಗೆ ಮೊದಲ ಇನ್ನಿಂಗ್ಸ್ ಮುನ್ನಡೆ
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಪುಣೆ ಟೆಸ್ಟ್ ಪಂದ್ಯದಲ್ಲಿ ಭಾರತ 156 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ
ಪುಣೆ: ಸ್ಪಿನ್ ಸ್ನೇಹಿ ಪಿಚ್ ಲಾಭವೆತ್ತಿದ ಎಡಗೈ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ಭಾರತೀಯ ಬ್ಯಾಟರ್‌ಗಳನ್ನು ಇನ್ನಿಲ್ಲದಂತೆ ಕಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಯಾಂಟ್ನರ್ ಮಾರಕ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ ಕೇವಲ 156 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡವು 103 ರನ್‌ಗಳ ಅಮೂಲ್ಯ ಮುನ್ನಡೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ಮೊದಲ ದಿನದಂತ್ಯಕ್ಕೆ ಒಂದು ವಿಕೆಟ್ ಕಳೆದುಕೊಂಡು 16 ರನ್ ಗಳಿಸಿದ್ದ ಭಾರತ, ಎರಡನೇ ದಿನವನ್ನು ಎಚ್ಚರಿಕೆಯಿಂದಲೇ ಆರಂಭಿಸಿತು. ಎರಡನೇ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್ ಹಾಗೂ ಶುಭ್‌ಮನ್ ಗಿಲ್ 49 ರನ್‌ಗಳ ಜತೆಯಾಟವಾಡಿದರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಮಿಚೆಲ್ ಸ್ಯಾಂಟ್ನರ್ ಯಶಸ್ವಿಯಾದರು. ಗಿಲ್ 30 ರನ್ ಗಳಿಸಿ ಸ್ಯಾಂಟ್ನರ್ ಬೌಲಿಂಗ್‌ನಲ್ಲಿ ಎಲ್‌ಬಿ ಬಲೆಗೆ ಬಿದ್ದರು. ಈ ಜೋಡಿ ಬೇರ್ಪಡುತ್ತಿದ್ದಂತೆಯೇ ಟೀಂ ಇಂಡಿಯಾ ದಿಢೀರ್ ಕುಸಿತ ಕಂಡಿತು.
ಹಾಲ್ ಆಫ್ ಫೇಮ್ ಗೌರವ ಪಡೆದ ಎಬಿಡಿ: ಮತ್ತೊಮ್ಮೆ ಕನ್ನಡಿಗರ ಹೃದಯಗೆದ್ದ ಮಿಸ್ಟರ್ 360!
ಟೀಂ ಇಂಡಿಯಾ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಕೇವಲ ಒಂದು ರನ್ ಗಳಿಸಿ ಸ್ಯಾಂಟ್ನರ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇನ್ನು ಉತ್ತಮವಾಗಿ ಬ್ಯಾಟಿಂಗ್ ನಡೆಸುವ ಮುನ್ಸೂಚನೆ ನೀಡಿದ್ದ ಯಶಸ್ವಿ ಜೈಸ್ವಾಲ್ 30 ರನ್ ಗಳಿಸಿ ಗ್ಲೆನ್ ಫಿಲಿಫ್ಸ್‌ಗೆ ವಿಕೆಟ್ ಒಪ್ಪಿಸಿದರು.
ಇನ್ನು ಮಧ್ಯಮ ಕ್ರಮಾಂಕದಲ್ಲಿ ರಿಷಭ್ ಪಂತ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವಲ್ಲಿ ಫಿಲಿಫ್ಸ್ ಯಶಸ್ವಿಯಾದರು. ಬೆಂಗಳೂರು ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಆಕರ್ಷಕ ಶತಕ ಸಿಡಿಸಿದ್ದ ಸರ್ಫರಾಜ್ ಖಾನ್ ದೊಡ್ಡ ಹೊಡೆತಕ್ಕೆ ಯತ್ನಿಸಿ ಸ್ಯಾಂಟ್ನರ್‌ಗೆ ವಿಕೆಟ್ ಒಪ್ಪಿಸಿದರು. ಅಶ್ವಿನ್ ಕೂಡಾ ಕೇವಲ 4 ರನ್ ಗಳಿಸಿ ಸ್ಯಾಂಟ್ನರ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಕೆಳ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ(38) ಹಾಗೂ ವಾಷಿಂಗ್ಟನ್ ಸುಂದರ್ ಅಜೇಯ 18 ರನ್ ಸಿಡಿಸುವ ಮೂಲಕ ಅಮೂಲ್ಯ ರನ್ ಕಾಣಿಕೆ ನೀಡಿದರು.
ಪುಣೆ ಸ್ಟೇಡಿಯಂನಲ್ಲಿ ನೀರಿಲ್ಲ: ಫ್ಯಾನ್ಸ್ ಪರದಾಟ, ಹಿಡಿಶಾಪ! 100 ಮಿ.ಲೀ. ನೀರಿನ ಬಾಟಲಿಗೆ ₹80 ಸುಲಿಗೆ!
7 ವಿಕೆಟ್ ಕಬಳಿಸಿದ ಸ್ಯಾಂಟ್ನರ್: 2015ರಲ್ಲೇ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಎಡಗೈ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ಇದುವರೆಗೂ ಟೆಸ್ಟ್ ಕ್ರಿಕೆಟ್‌ನಲ್ಲಿ 5+ ವಿಕೆಟ್ ಸಾಧನೆ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಪುಣೆ ಟೆಸ್ಟ್ ಪಂದ್ಯದಲ್ಲಿ ಸ್ಯಾಂಟ್ನರ್ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 5+ ವಿಕೆಟ್ ಸಾಧನೆ ಮಾಡುವಲ್ಲಿ ಯಶಸ್ವಿಯಾದರು. ಸ್ಯಾಂಟ್ನರ್ 53 ರನ್ ನೀಡಿ ಭಾರತದ 7 ಬ್ಯಾಟರ್‌ಗಳ ಬಲಿ ಪಡೆಯುವಲ್ಲಿ ಯಶಸ್ವಿಯಾದರು.