Asianet Suvarna News Asianet Suvarna News

ಇಂಡೋ ಪಾಕ್ ಪಂದ್ಯ, ಮಾಧ್ಯಮ ಸೇರಿ ಸಾರ್ವಜನಿಕರಿಗೆ ಪೊಲೀಸರ ಮಹತ್ವದ ಸಲಹೆ!

ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದ್ದರೆ, ಪೊಲೀಸರಿಗೆ ಕಾನೂನು ಸುವ್ಯವಸ್ಥೆ ಕಾಪಾಡುವುದೇ ಚಿಂತೆಯಾಗಿದೆ. ಪಂದ್ಯ ದುಬೈನಲ್ಲಿ ನಡೆಯುತ್ತಿದ್ದರೂ ಭಾರತದ ಹಲವು ರಾಜ್ಯಗಳಲ್ಲಿ ಪೊಲೀಸರು ಕೆಟ್ಟೆಚ್ಚರ ವಹಿಸಿದ್ದಾರೆ. ಇದೀಗ ಇಂಡೋ ಪಾಕ್ ಪಂದ್ಯದಿಂದ ಮಾಧ್ಯಮ ಹಾಗೂ ಸಾರ್ವಜನಿಕರಿಗೆ ಪೊಲೀಸರು ಮಹತ್ವದ ಸಲಹೆ ನೀಡಿದ್ದಾರೆ. 

India vs Pakistan Asia cup match Jammu and Kashmir Police issues important  advisory ckm
Author
Bengaluru, First Published Aug 28, 2022, 8:29 PM IST

ಶ್ರೀನಗರ(ಆ.28): ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್ ಹೋರಾಟದಿಂದ ಕ್ರಿಕೆಟ್ ಅಭಿಮಾನಿಗಳು ಕುಣಿದಾಡುತ್ತಿದ್ದಾರೆ. ರೋಚಕ ಹೋರಾಟ ಅಭಿಮಾನಿಗಳ ಸಂಭ್ರಮ ಇಮ್ಮಡಿಗೊಳಿಸಿದೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡಯುತ್ತಿದೆ. ಆದರೆ ಭಾರತದಲ್ಲಿನ ಪೊಲೀಸರಿಗೆ  ತಲೆನೋವು ಹೆಚ್ಚಾಗಿದೆ. ಹೀಗಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಧ್ಯಮ ಹಾಗೂ ಸಾರ್ವಜನಿಕರಿಗೆ ಮಹತ್ವದ ಸಲಹೆ ನೀಡಿದೆ. ಪಂದ್ಯ ನಡುವೆ ಹಾಗೂ ಪಂದ್ಯದ ಬಳಿಕ ಯಾವುದೇ ಸುಳ್ಳು ಮಾಹಿತಿಯನ್ನು ಹರಡಬೇಡಿ. ಹಳೇ ವಿಡಿಯೋಗಳನ್ನು ಪೋಸ್ಟ್ ಮಾಡಿ ಜನರ ಭಾವನೆಯನ್ನು ಕೆರಳಿಸಬೇಡಿ. ಈ ಕುರಿತು ಮಾಧ್ಯಮ ಸ್ನೇಹಿತರು ಅತೀವ ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಸಲಹೆ ನೀಡಿದ್ದಾರೆ. ಈ ಹಿಂದಿನ ಬಾರಿ ಭಾರತ ಹಾಗೂ ಪಾಕಿಸ್ತಾನ ಪಂದ್ಯದ ಬಳಿಕ ಸಂಬಂಧವಿಲ್ಲದ ವಿಡಿಯೋಗಳನ್ನು ಹಂಚಿಕೊಳ್ಳಲಾಗಿತ್ತು. ಇದರಿಂದ ಗಲಭೆಗಳು ಸೃಷ್ಟಿಯಾಗಿತ್ತು. ಹೀಗಾಗಿ ಈ ಬಾರಿ ಅಂತಹ ಯಾವುದೇ ಪ್ರಯತ್ನಗಳು ನಡೆದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.

ಇಂಡೋ ಪಾಕ್ ಪಂದ್ಯವನ್ನು ಕ್ರೀಡಾಸ್ಪೂರ್ತಿಯಿಂದ ತೆಗೆದುಕೊಳ್ಳಿ. ಇಡೀ ವಿಶ್ವವೇ ಈ ಪಂದ್ಯವನ್ನು ಆನಂದಿಸುತ್ತದೆ. ಇದರ ನಡವೆ ವೈರತ್ವ, ದ್ವೇಷ ಹಾಗೂ ಜರನ ಭಾವನೆಗಳನ್ನು ಕೆರಳಿಸುವ ಸುಳ್ಳು ಹಾಗೂ ಸಂಬಂಧವಿಲ್ಲದ ಮಾಹಿತಿಗಳು ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳಬೇಡಿ ಎಂದು ಪೊಲೀಸರು ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ. ಮಾಧ್ಯಮ ಸ್ನೇಹಿತರು ಯಾವುದೇ ಮಾಹಿತಿಯನ್ನು ಪರಿಶೀಲಿಸಲದೆ ಹಾಕಬೇಡಿ ಒಂದು ಪೋಸ್ಟ್‌ನಿಂದ ಅವಾಂತರ ಸೃಷ್ಟಿಯಾಗುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರ ವಹಿಸಬೇಕಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ.

ಇಂಡೋ ಪಾಕ್ ಪಂದ್ಯ ವೀಕ್ಷಿಸಿದರೆ 5 ಸಾವಿರ ರೂ ದಂಡ, ಶ್ರೀನಗರದ ಕಾಲೇಜು ಆಡಳಿತ ಮಂಡಳಿ ಆದೇಶ!

ಸಾಮಾಜಿಕ ಜಾಲತಾಣದಲ್ಲಿ ಇಂಡೋ ಪಾಕ್ ಪಂದ್ಯದ ಕುರಿತು ಪ್ರತಿ ಪೋಸ್ಟ್ ಹಾಕುವಾಗ ಎಚ್ಚರಿಕೆ ಇರಬೇಕು. ಈ ಕುರಿತು ನಿಗಾ ವಹಿಸಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಈ ಮೂಲಕ ಪಂದ್ಯದ ಬಳಿಕ ನಡೆಯುವ ಅಹಿತಕರ ಘಟನೆಗಳನ್ನು ನಿಯಂತ್ರಿಸಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೊದಲೇ ಎಚ್ಚರಿಕೆ ನೀಡಿದ್ದಾರೆ. 

ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್ ಪಂದ್ಯ ಆರಂಭಿಕ ಹಂತದಲ್ಲಿ ರೋಚಕ ಹೋರಾಟ ಏರ್ಪಟ್ಟಿದೆ. ಟೀಂ ಇಂಡಿಯಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಬ್ಯಾಟಿಂಗ್‌ನಲ್ಲಿ ಪಾಕಿಸ್ತಾನ 2 ವಿಕೆಟ್ ಕಳೆದುಕೊಂಡರೂ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಬಾಬರ್ ಅಜಮ್ ಹಾಗೂ ಫಕರ್ ಜಮಾನ್ ಬಹುಬೇಗನೆ ವಿಕೆಟ್ ಕೈಚೆಲ್ಲಿದರು. ಆದರೆ ಮೊಹಮ್ಮದ್ ರಿಜ್ವಾನ್ ಇಫ್ತಿಕಾರ್ ಅಹಮ್ಮದ್ ಸ್ಫೋಟಕ ಬ್ಯಾಟಿಂಗ್‌ನಿಂದ ಪಾಕಿಸ್ತಾನ ದಿಟ್ಟ ಹೋರಾಟ ನೀಡುತ್ತಿದೆ. 9 ಓವರ್ ಮುಕ್ತಾಯದ ವೇಳೆಗೆ ಪಾಕಿಸ್ತಾನ 2 ವಿಕೆಟ್ ನಷ್ಟಕ್ಕೆ 64 ರನ್ ಸಿಡಿಸಿದೆ.

ಪಾಕ್ ಮಾಜಿ ಕ್ರಿಕೆಟಿಗನ ತಬ್ಬಿ ಸಂತಸ ಹಂಚಿಕೊಂಡ ವಿರಾಟ್ ಕೊಹ್ಲಿ, ಫೋಟೋ ವೈರಲ್!
 

Follow Us:
Download App:
  • android
  • ios