ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 3ನೇ ಟೆಸ್ಟ್ ಸರಣಿ ಗೆಲುವು ನಿರ್ಧರಿಸುವ ಪಂದ್ಯದಲ್ಲಿ ಟಾಸ್ ಗೆದ್ದ ಕೇಪ್ ಟೌನ್‌ನಲ್ಲಿ ನಡೆಯುತ್ತಿರುವ ಮಹತ್ವದ ಪಂದ್ಯ  

ಕೇಪ್ ಟೌನ್(ಜ.11): ಭಾರತ ಹಾಗೂ ಸೌತ್ ಆಫ್ರಿಕಾ(India vs South Africa) ನಡುವಿನ ಟೆಸ್ಟ್ ಸರಣಿ 1- 1 ಅಂತರದಲ್ಲಿ ಸಮಬಲಗೊಂಡಿದೆ. ಇಂದು ಕೇಪ್ ಟೌನ್‌ನಲ್ಲಿ ನಡೆಯುತ್ತಿರುವ 3ನೇ ಹಾಗೂ ಅಂತಿಮ ಪಂದ್ಯ ಸರಣಿ ಯಾರಿಗೆ ಅನ್ನೋದು ನಿರ್ಧರಿಸಲಿದೆ. ಈ ಮಹತ್ವದ ಪಂದ್ಯದಲ್ಲಿ ಟಾಸ್(Toss) ಗೆದ್ದಿರುವ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಪ್ರತಿ ಬಾರಿ ಟಾಸ್ ಸೋಲುತ್ತಿದ್ದ ಕೊಹ್ಲಿ ಇದೀಗ ಕಮ್‌ಬ್ಯಾಕ್ ಪಂದ್ಯದಲ್ಲೇ ಟಾಸ್ ಗೆದ್ದ ಸಾಧನೆ ಮಾಡಿದ್ದಾರೆ. 

ಟೀಂ ಇಂಡಿಯಾ ಪ್ಲೇಯಿಂಗ್ 11:
ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರಿಷಬ್ ಪಂತ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್

Rahul Dravid Birthday ಕ್ರಿಕೆಟ್‌ನ ಎಲ್ಲಾ ಜವಾಬ್ದಾರಿ ನಿರ್ವಹಿಸಿದ ಮಗಧೀರ, ದಿ ವಾಲ್‌ಗೆ ಹುಟ್ಟುಹಬ್ಬದ ಸಡಗರ!

ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ನಾಯಕ ವಿರಾಟ್ ಕೊಹ್ಲಿ ಫಿಟ್ ಆಗಿದ್ದು, ತಂಡಕ್ಕೆ ವಾಪಸ್ ಆಗಿದ್ದಾರೆ. ಆದರೆ ವೇಗಿ ಮೊಹಮ್ಮದ್ ಸಿರಾಜ್ ಇಂಜುರಿ ಕಾರಣದಿಂದ ತಂಡದಿಂದ ಹೊರಬಿದ್ದಿದ್ದಾರೆ. ಇನ್ನು ಹನುಮಾ ವಿಹಾರಿ ಸ್ಥಾನ ಕಳೆದುಕೊಂಡಿದ್ದಾರೆ. ಸಿರಾಜ್ ಬದಲು ಉಮೇಶ್ ಯಾದವ್ ಸ್ಥಾನ ಪಡೆದಿದ್ದಾರೆ.

ಈ ಪಂದ್ಯ ಟೀಂ ಇಂಡಿಯಾ ಹಾಗೂ ಸೌತ್ ಆಫ್ರಿಕಾಗೆ ಅತೀ ಮುಖ್ಯವಾಗಿದೆ. ಜೊತೆಗೆ ಕೋಚ್ ರಾಹುಲ್ ದ್ರಾವಿಡ್(Rahul Dravid) ಹಾಗೂ ನಾಯಕ ವಿರಾಟ್ ಕೊಹ್ಲಿಗೂ(Virat Kohli) ಅತೀ ಮುಖ್ಯವಾಗಿದೆ. ಕೋಚ್ ರಾಹುಲ್ ಮಾರ್ಗರ್ಶನದಲ್ಲಿ ನಡೆಯುತ್ತಿರುವ ಮೊದಲ ಸರಣಿ ಇದಾಗಿದ್ದು, ಸರಣಿ ಗೆಲುವಿಗೆ ಹೊಂಚು ಹಾಕಿದ್ದಾರೆ. ಇತ್ತ ನಾಯಕ ವಿರಾಟ್ ಕೊಹ್ಲಿ ಹಾಗೂ ಬಿಸಿಸಿಐ ನಡುವಿನ ಮನಸ್ತಾಪದ ಬಳಿಕ ನಡೆಯುತ್ತಿರುವ ಮೊದಲ ಸರಣಿ ಇದಾಗಿದೆ. ಇದರ ಜೊತೆಗೆ ರಾಹುಲ್ ದ್ರಾವಿಡ್ ಇಂದು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದರೆ, ನಾಯಕ ಕೊಹ್ಲಿ ಪುತ್ರಿ ವಮಿಕಾ ಇಂದು ಮೊದಲ ವರ್ಷದ ಹುಟ್ಟು ಹಬ್ಬ ಆಚರಿಸುತ್ತಿದ್ದಾರೆ.

ಸೌತ್ ಆಫ್ರಿಕಾ ನೆಲದಲ್ಲಿ ಸರಣಿ ಗೆಲ್ಲುವ ಅವಕಾಶ
ಸೌತ್ ಆಫ್ರಿಕಾ ಪ್ರವಾಸದಲ್ಲಿ ಟೀಂ ಇಂಡಿಯಾ ಟೆಸ್ಟ್ ಸರಣಿ ಗೆದ್ದಿಲ್ಲ. ಆದರೆ ಈ ಬಾರಿ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯ ಗೆದ್ದ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿ ಕಠಿಣ ಹೋರಾಟ ನೀಡಿ ಸೋಲು ಕಂಡಿತ್ತು. ಇದೀಗ ಅಂತಿಮ ಪಂದ್ಯ ಗೆದ್ದು ಸರಣಿ ಗೆಲ್ಲುವ ಅವಕಾಶ ಒಲಿದು ಬಂದಿದೆ. ಇದೇ ಮೊದಲ ಬಾರಿಗೆ ಸೌತ್ ಆಫ್ರಿಕಾ ನೆಲದಲ್ಲಿ ಸರಣಿ ಗೆಲ್ಲುತ್ತಾ ಅನ್ನೋ ಕುತೂಲ ಇದೀಗ ಮನೆ ಮಾಡಿದೆ.

Rahul Dravid on Rishabh Pant: ರಿಷಭ್‌ ಪಂತ್‌ಗೆ ಕೋಚ್‌ ರಾಹುಲ್ ದ್ರಾವಿಡ್‌ ಕ್ಲಾಸ್‌..!

ಕೊಹ್ಲಿ ಫಾರ್ಮ ಸಮಸ್ಯೆ
ನಾಯಕ ವಿರಾಟ್ ಕೊಹ್ಲಿ ಫಿಟ್ ಆಗಿ ತಂಡಕ್ಕೆ ವಾಪಸ್ ಆಗಿದ್ದಾರೆ. ಆದರೆ ಕಳೆದ 25 ಇನ್ನಿಂಗ್ಸ್‌ಗಳಿಂದ ಕೊಹ್ಲಿ ಸೆಂಚುರಿ ಇಲ್ಲದೆ ಹಿನ್ನಡೆ ಅನುಭವಿಸಿದ್ದಾರೆ. ಮೊದಲ 139 ಇನ್ನಿಂಗ್ಸ್‌ಗಳಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಸರಾಸರಿ 54.77. ಆದರೆ ಕಳೆದ 25 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ ಬ್ಯಾಟಿಂಗ್ ಸರಾಸರಿ 29.18 ಮಾತ್ರ. ಇನ್ನು 5 ಹಾಫ್ ಸೆಂಚುರಿ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಕೊಹ್ಲಿ ಫಾರ್ಮ್ ಸಮಸ್ಯೆ ಟೀಂ ಇಂಡಿಯಾ ಹೆಚ್ಚಾಗಿ ಕಾಡುತ್ತಿದೆ.

ಎರಡನೇ ಟೆಸ್ಟ್ ಪಂದ್ಯ ಗೆದ್ದಿರುವ ಸೌತ್ ಆಫ್ರಿಕಾ ತವರಿನಲ್ಲಿ ಸರಣಿ ಉಳಿಸಿಕೊಳ್ಳುವ ಆತ್ಮವಿಶ್ವಾಸದಲ್ಲಿದೆ. ಇತ್ತ ಟೀಂ ಇಂಡಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ನೀಡಿದ ಪ್ರದರ್ಶನ ನೀಡಲು ರೆಡಿಯಾಗಿದೆ. ಆದರೆ ಮಧ್ಯಮ ಕ್ರಮಾಂಕದ ವೈಫಲ್ಯ ಟೀಂ ಇಂಡಿಯಾ ಚಿಂತೆಗೆ ಕಾರಣವಾಗಿದೆ.