ಇಂಡೋ-ಆಫ್ರಿಕಾ ಮೊದಲ ಏಕದಿನ ಪಂದ್ಯ ಮಳೆಯಿಂದ ರದ್ದಾಗಿದೆ. ಇದೀಗ ಉಳಿದೆರಡು ಪಂದ್ಯಗಳು ಸಾಕಷ್ಟು ಕುತೂಹಲ ಕೆರಳಿಸಿವೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.

ಧರ್ಮಶಾಲಾ(ಮಾ.12): ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಮಳೆಗೆ ಆಹುತಿಯಾಗಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ನಡೆಯಬೇಕಿದ್ದ ಪಂದ್ಯ ವರುಣನ ಅವಕೃಪೆಗೆ ಒಳಗಾಯಿತು. 

ಇಂಡೋ-ಆಫ್ರಿಕಾ ಮೊದಲ ಪಂದ್ಯ ನಡಿಯೋದು ಡೌಟ್..!

Scroll to load tweet…

ಬುಧವಾರ ಮೈದಾನದಲ್ಲಿ ನಿರಂತರವಾಗಿ ಮಳೆ ಸುರಿದಿತ್ತು. ಇನ್ನು ಪಂದ್ಯದ ದಿನವಾದ ಇಂದು ಕೆಲಕಾಲ ಮಳೆ ನಿಂತಿತ್ತು. ಟೀಂ ಇಂಡಿಯಾ ಆಟಗಾರರು ಮೈದಾನದಲ್ಲೇ ಕೆಲಕಾಲ ಅಭ್ಯಾಸ ನಡೆಸಿದರು. ಆದರೆ ಮಧ್ಯಾಹ್ನದ ವೇಳೆಗೆ ಜಿಟಿಜಿಟಿ ಮಳೆ ಆರಂಭವಾಯಿತು. ಅಂಪೈರ್‌ಗಳ ಮೂರ್ನಾಲ್ಕು ಬಾರಿ ಮೈದಾನಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಕೊನೆಯದಾಗಿ 6.30ರಿಂದ ಪಂದ್ಯ ಆರಂಭಿಸಲು ಕಟ್ ಆಫ್ ಸಮಯ ನಿಗದಿಪಡಿಸಿದರು. ಆದರೆ ಬಿಟ್ಟು ಬಿಡದೇ ಮಳೆ ಸುರಿದಿದ್ದರಿಂದ ಪಂದ್ಯ ರದ್ದು ಮಾಡುವ ತೀರ್ಮಾನವನ್ನು ಕೈಗೊಳ್ಳಲಾಯಿತು.

INDvsSA ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ: ಪಂದ್ಯ ನಡೆಯುತ್ತಾ? ಗೊಂದಲಕ್ಕೆ ಇಲ್ಲಿದೆ ಉತ್ತರ!

Scroll to load tweet…

ಇದೀಗ ಉಭಯ ತಂಡಗಳು ಎರಡನೇ ಪಂದ್ಯವನ್ನಾಡಲು ಲಖನೌಗೆ ತೆರಳಲಿವೆ. ಎರಡನೇ ಪಂದ್ಯವು ಮಾರ್ಚ್ 15ರಂದು ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಮೈದಾನದಲ್ಲಿ ಜರುಗಲಿದೆ. ಇನ್ನು ಮೂರನೇ ಹಾಗೂ ಸರಣಿಯ ಕೊನೆಯ ಪಂದ್ಯವು ಮಾರ್ಚ್ 18ರಂದು ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿದೆ.

ಶಿಖರ್ ಧವನ್, ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಪಾಂಡ್ಯ ತಂಡ ಕೂಡಿಕೊಂಡಿದ್ದಾರೆ. ಇನ್ನು ಐಸಿಸಿ ಏಕದಿನ ವಿಶ್ವಕಪ್ ಬಳಿಕ ಫಾಫ್ ಡು ಪ್ಲೆಸಿಸ್ ಇದೇ ಮೊದಲ ಬಾರಿಗೆ ಏಕದಿನ ತಂಡ ಕೂಡಿಕೊಂಡಿದ್ದಾರೆ. ಹೀಗಾಗಿ ಈ ಆಟಗಾರರು ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎನ್ನುವುದು ಸದ್ಯದ ಕುತೂಹಲವಾಗಿದೆ.