ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯಕ್ಕೆ ಬಲಿಷ್ಠ ಸಂಭಾವ್ಯ ತಂಡ ಪ್ರಕಟ! ಯಾರಿಗೆಲ್ಲಾ ಸ್ಥಾನ?

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯಕ್ಕೆ ಉಭಯ ತಂಡಗಳ ಸಂಭಾವ್ಯ ತಂಡ ಪ್ರಕಟವಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

India vs South Africa 1st T20 Predicted Playing 11 all you need to know kvn

ಡರ್ಬನ್: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ 4 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಸಂಜೆ ಭಾರತೀಯ ಕಾಲಮಾನ 8.30ರಿಂದ ಆರಂಭವಾಗಲಿದೆ. 2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್‌ ಬಳಿಕ ಉಭಯ ತಂಡಗಳು ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. 

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯಕ್ಕೆ ಇಲ್ಲಿನ ಡರ್ಬನ್ ಮೈದಾನ ಆತಿಥ್ಯ ವಹಿಸಿದೆ. ಭಾರತ ಕ್ರಿಕೆಟ್‌ ತಂಡವು 2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಬಲಾಢ್ಯ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತ್ತು. ಇದಾದ ಬಳಿಕ ಈ ಐತಿಹಾಸಿಕ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನಾಡಲು ಕಣಕ್ಕಿಳಿಯುತ್ತಿದೆ. 

ಇಂದಿನಿಂದ ಭಾರತ vs ದ.ಆಫ್ರಿಕಾ ಟಿ20 ಕದನ; ಟಿ20 ವಿಶ್ವಕಪ್ ಫೈನಲ್‌ ಬಳಿಕ ಮೊದಲ ಬಾರಿ ಮುಖಾಮುಖಿ

ಇನ್ನು ಟೀಂ ಇಂಡಿಯಾ, ತಾನಾಡಿದ ಕೊನೆಯ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ಎದುರು 6 ವಿಕೆಟ್ ಕಳೆದುಕೊಂಡು ದಾಖಲೆಯ 297 ರನ್ ಸಿಡಿಸಿತ್ತು. ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ವಿಸ್ಪೋಟಕ ಶತಕ ಸಿಡಿಸಿ ಮಿಂಚಿದ್ದರು. ಇದೀಗ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ಹರಿಣಗಳೆದುರು ಹೊಸ ಹುರುಪಿನೊಂದಿಗೆ ಸಜ್ಜಾಗಿದ್ದು, ಪ್ರತಿಭಾನ್ವಿತ ಆಟಗಾರರಾದ ರಮಣ್‌ದೀಪ್ ಸಿಂಗ್, ವೈಶಾಖ್ ವಿಜಯ್‌ಕುಮಾರ್ ಹಾಗೂ ಯಶ್ ದಯಾಳ್ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

ಸೇಡು ತೀರಿಸಿಕೊಳ್ಳಲು ಹರಿಣಗಳ ಪಡೆ ಕಾತರ: 2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಕ್ರಿಕೆಟ್ ಅಭಿಮಾನಿಗಳನ್ನು ಕೊನೆಯ ಕ್ಷಣದವರೆಗೂ ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಪಂದ್ಯದಲ್ಲಿ, ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ರೋಚಕ ಜಯ ಸಾಧಿಸುವ ಮೂಲಕ ಎರಡನೇ ಬಾರಿಗೆ ಐಸಿಸಿ ಟಿ20 ವಿಶ್ವಕಪ್ ಟ್ರೋಫಿ ಜಯಿಸುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಟಿ20 ವಿಶ್ವಕಪ್ ಫೈನಲ್ ಸೋಲಿಗೆ ಇದೀಗ ದಕ್ಷಿಣ ಆಫ್ರಿಕಾ ತಂಡವು ತವರಿನಲ್ಲಿ ಸೇಡು ತೀರಿಸಿಕೊಳ್ಳಲು ಎದುರು ನೋಡುತ್ತಿದೆ.

ಸ್ಮೃತಿ, ಪೆರ್ರಿ, ಶ್ರೇಯಾಂಕ ಸೇರಿ 14 ಮಂದಿಯನ್ನು ಹಾಲಿ ಚಾಂಪಿಯನ್ ಆರ್‌ಸಿಬಿಗೆ ರಿಟೈನ್‌

ದಕ್ಷಿಣ ಆಫ್ರಿಕಾ ಎದುರಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ:

ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್, ವೈಶಾಖ್ ವಿಜಯ್‌ಕುಮಾರ್, ಆವೇಶ್ ಖಾನ್, ವರುಣ್ ಚಕ್ರವರ್ತಿ, ಆರ್ಶದೀಪ್ ಸಿಂಗ್.

ಭಾರತ ಎದುರಿನ ಪಂದ್ಯಕ್ಕೆ ದಕ್ಷಿಣ ಆಫ್ರಿಕಾ ತಂಡ:

ರೀಜಾ ಹೆಂಡ್ರಿಕ್ಸ್‌, ರಿಯಾನ್ ರಿಕೆಲ್ಟನ್, ಏಯ್ಡನ್ ಮಾರ್ಕ್‌ರಮ್(ನಾಯಕ), ಟ್ರಿಸ್ಟನ್ ಸ್ಟಬ್ಸ್, ಹೆನ್ರಿಚ್ ಕ್ಲಾಸೇನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೇಶವ್ ಮಹರಾಜ್, ಗೆರಾಲ್ಡ್ ಕೋಟ್ಜಿ, ನಕ್ಬಾ ಪೀಟರ್, ಒಟ್ಟಿನೆಲ್ ಬಾರ್ಟ್‌ಮನ್.

ಪಂದ್ಯ: ರಾತ್ರಿ 8.30ಕ್ಕೆ,
ಪ್ರಸಾರ: ಸ್ಪೋರ್ಟ್ಸ್ 18 ಚಾನೆಲ್, ಜಿಯೋ ಸಿನಿಮಾ.
 

Latest Videos
Follow Us:
Download App:
  • android
  • ios