ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 5ನೇ ಟಿ20 ಟಾಸ್ ಗೆದ್ದ ಸೌತ್ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಟಾಸ್ ಬೆನ್ನಲ್ಲೇ ಬೆಂಗಳೂರಲ್ಲಿ ಸುರಿದ ಮಳೆ, ಪಂದ್ಯ ವಿಳಂಬ

ಬೆಂಗಳೂರು(ಜೂ.19): ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯಕ್ಕೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಟಾಸ್ ಗೆದ್ದ ಸೌತ್ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ ಟಾಸ್ ಬೆನ್ನಲ್ಲೇ ಬೆಂಗಳೂರಲ್ಲಿ ವರುಣನ ಆರ್ಭಟ ಜೋರಾಗಿದೆ. ಪರಿಣಾಮ ಪಂದ್ಯ ಆರಂಭ ಕೊಂಚ ವಿಳಂಬವಾಗಲಿದೆ.

ಪಂದ್ಯ 7.50ಕ್ಕೆ ಆರಂಭಗೊಳ್ಳಲಿದೆ. ಹೀಗಾಗಿ 1 ಓವರ್ ಕಡಿತಗೊಳಿಸಲಾಗಿದೆ. ಹೀಗಾಗಿ 20 ಓವರ್ ಪಂದ್ಯದ ಬದಲು 19 ಓವರ್ ಪಂದ್ಯ ನಡೆಯಲಿದೆ. 7 ಗಂಟೆಗೆ ಆರಂಭವಾಗಬೇಕಿದ್ದ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. 7.15ರ ವರೆಗೆ ಮಳೆ ಸುರಿದಿದೆ. ಇದೀಗ ಮಳೆ ನಿಂತಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಸಿಬ್ಬಂದಿ ಆಟಕ್ಕೆ ಮೈದಾನ ಸಜ್ಜುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಇತರ ಮೈದಾನಗಳಂತೆ ಬೆಂಗಳೂರಿನಲ್ಲಿ ಮಳೆ ನಿಂತ ಬಳಿಕ ಮೈದಾನ ಸಜ್ಜುಗೊಳಿಸಲು ಹೆಚ್ಚು ಹೊತ್ತು ಬೇಕಾಗಿಲ್ಲ. ಕಾರಣ ಬೆಂಗಳೂರಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಡ್ರೈನೇಜ್ ಸಿಸ್ಟಮ್ ಅಳವಡಿಸಲಾಗಿದೆ. ಕೇವಲ 20 ನಿಮಿಷದಲ್ಲಿ ಮೈದಾನ ಆಟಕ್ಕೆ ಸಜ್ಜುಗೊಳಿಸಲು ಸಾಧ್ಯವಾಗಲಿದೆ. ಈ ವ್ಯವಸ್ಥೆ ಹೊಂದಿರು ವಿಶ್ವದ ಮೊದಲ ಕ್ರಿಕೆಟ್ ಕ್ರೀಡಾಂಗಣ ಅನ್ನೋ ಹೆಗ್ಗಳಿಕೆಗೆ ಚಿನ್ನಸ್ವಾಮಿ ಪಾತ್ರವಾಗಿದೆ.

IND vs SA ಬೆಂಗಳೂರು ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ!

ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 5 ಪಂದ್ಯದ ಟಿ20 ಸರಣಿಯಲ್ಲಿ ಒಂದೂ ಪಂದ್ಯದಲ್ಲಿ ಭಾರತ ಟಾಸ್ ಗೆದ್ದಿಲ್ಲ. 5 ಪಂದ್ಯದಲ್ಲಿ ಸೌತ್ ಆಫ್ರಿಕಾ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇಂದೂ ಕೂಡ ಟಾಸ್ ಗೆದ್ದ ಸೌತ್ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ

ಸೌತ್ ಆಫ್ರಿಕಾ ಪ್ಲೇಯಿಂಗ್ 11
ಕ್ವಿಂಟನ್ ಡಿಕಾಕ್, ರೀಜಾ ಹೆಂಡ್ರಿಕ್ಸ್, ರಸಿ ವಾಂಡರ್ ಡಸೆನ್, ಡೇವಿಡ್ ಮಿಲ್ಲರ್, ಹೆನ್ರಿಚ್ ಕಾಲ್ಸೇನ್, ತ್ರಿಸ್ಟನ್ ಸ್ಟಬ್ಸ್, ಡ್ವೇನ್ ಪ್ರೆಟೋರಿಯಸ್, ಕಾಗಿಸೋ ರಬಾಡಾ, ಕೇಶವ್ ಮಹಾರಾಜ್(ನಾಯಕ), ಲುಂಗಿ ಎನ್ಗಿಡಿ, ಅನ್ರಿಚ್ ನೋರ್ಜೆ

ಸೌತ್ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಹೊರಗುಳಿದಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ತಂಡವನ್ನು ಭಾರತೀಯ ಮೂಲದ ಕೇಶವ್ ಮಹಾರಾಜ್ ಮುನ್ನಡೆಸುತ್ತಿದ್ದಾರೆ.

IND vs SA 2 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಪಂದ್ಯ, ಕ್ರೀಡಾಂಗಣ ಸುತ್ತ ಭಾರಿ ಭದ್ರತೆ!

ಟೀಂ ಇಂಡಿಯಾ ಪ್ಲೇಯಿಂಗ್ 11
ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್(ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಹಾಲ್, ಅವೇಶ್ ಖಾನ್

4ನೇ ಟಿ20 ಪಂದ್ಯದಲ್ಲಿ ಭಾರತ ದಿನೇಶ್ ಕಾರ್ತಿಕ್ ಹಾಗೂ ಹಾರ್ದಿಕ್ ಪಾಂಡ್ಯ ಹೋರಾಟದಿಂದ ಪಂದ್ಯ ಗೆದ್ದುಕೊಂಡಿತ್ತು. ರ್ಣಾಯಕ ಪಂದ್ಯದಲ್ಲಿ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ತೋರಿದ ಭರ್ಜರಿ ಪ್ರದರ್ಶನದ ನೆರವಿನಿಂದ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು. 5 ಪಂದ್ಯಗಳ ಟಿ20 ಸರಣಿಯಲ್ಲಿ 2-2ರಿಂದ ಸಮಬಲಗೊಳಿಸಿತ್ತು. ಆರಂಭಿಕ ಎರಡು ಪಂದ್ಯಗಳನ್ನು ಕಳೆದುಕೊಂಡಿದ್ದ ರಿಷಬ್‌ ಪಂತ್‌ ನೇತೃತ್ವದ ಭಾರತ ಬಳಿಕ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ತವರಿನಲ್ಲಿ ಸತತ 8ನೇ ಸರಣಿ ಗೆಲುವಿನ ಆಸೆಯನ್ನು ಜೀವಂತವಾಗಿರಿಸಿಕೊಂಡಿತ್ತು.

ಕಾರ್ತಿಕ್‌ ಭರ್ಜರಿ ಶೋ: ಟೂರ್ನಿಯುದ್ದಕ್ಕೂ ಮಿಂಚಿದ್ದ ಭಾರತದ ಆರಂಭಿಕರು ಈ ಪಂದ್ಯದಲ್ಲಿ ವಿಫಲರಾದರು. ಗಾಯಕ್ವಾಡ್‌ 5 ರನ್‌ ಗಳಿಸಿದರೆ, ಇಶಾನ್‌ 26 ಎಸೆತಗಳಲ್ಲಿ 27 ರನ್‌ ಬಾರಿಸಿದರು. ಶ್ರೇಯಸ್‌(04) ಮತ್ತೆ ವಿಫಲರಾದರು. ಮತ್ತೆ ರನ್‌ ಗಳಿಸಲು ಪರದಾಡಿದ ರಿಷಬ್‌ 23 ಎಸೆತಗಳಲ್ಲಿ ಕೇವಲ 17 ರನ್‌ ಗಳಿಸಿದರು. ಆದರೆ ಹಾರ್ದಿಕ್‌ ಪಾಂಡ್ಯ-ದಿನೇಶ್‌ ಕಾರ್ತಿಕ್‌ ಕೊನೆಯಲ್ಲಿ ಅಬ್ಬರಿಸಿ ತಂಡವನ್ನು ಮೇಲಕ್ಕೆತ್ತಿದರು. ಹಾರ್ದಿಕ್‌ 31 ಎಸೆತಗಳಲ್ಲಿ 46 ರನ್‌ ಸಿಡಿಸಿದರೆ, ಕಾರ್ತಿಕ್‌ 27 ಎಸೆತಗಳಲ್ಲಿ 55 ರನ್‌ ಸಿಡಿಸಿ ನಿರ್ಗಮಿಸಿದರು. ಇದು ಅವರ ಚೊಚ್ಚಲ ಫಿಫ್ಟಿಎನ್ನುವುದು ವಿಶೇಷ. ಅವರ ಇನ್ನಿಂಗ್‌್ಸನಲ್ಲಿ 9 ಬೌಂಡರಿ, 2 ಸಿಕ್ಸರ್‌ ಒಳಗೊಂಡಿತ್ತು.