ಟೀಂ ಇಂಡಿಯಾ ನಂ.1 ಆಲ್ರೌಂಡರ್ ಆಗಿ ಗುರುತಿಸಿಕೊಂಡಿರುವ ರವೀಂದ್ರ ಜಡೇಜಾ ಭುಜದ ನೋವಿನ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆಗೆ ಅಲಭ್ಯರಾಗಿದ್ದರು. ಆದರೆ ಮೂರನೇ ದಿನದಾಟದ ವೇಳೆ ರವೀಂದ್ರ ಜಡೇಜಾ, ಸಹ ಆಟಗಾರರ ಜತೆ ವಾರ್ಮ್‌ ಅಪ್ ಸೆಷನ್‌ನಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದರು.

ಸೆಂಚೂರಿಯನ್(ಡಿ.29): ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಎದುರು ಹೀನಾಯ ಸೋಲು ಅನುಭವಿಸಿದ ಟೀಂ ಇಂಡಿಯಾ ಪಾಲಿಗೆ ಇದೀಗ ಗುಡ್‌ ನ್ಯೂಸ್ ಸಿಕ್ಕಿದೆ. ಟೀಂ ಇಂಡಿಯಾ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ, ಮುಂಬರುವ ಜನವರಿ 03ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ಎದುರಿನ ಎರಡನೇ ಟೆಸ್ಟ್‌ಗೆ ಆಯ್ಕೆಗೆ ಲಭ್ಯವಿರುವ ಸಾಧ್ಯತೆಯಿದೆ. ಜಡ್ಡು ಈಗಾಗಲೇ ಅಭ್ಯಾಸ ಆರಂಭಿಸಿರುವುದು ಟೀಂ ಇಂಡಿಯಾ ಅಭಿಮಾನಿಗಳು ಕೊಂಚ ನಿಟ್ಟುಸಿರುವ ಬಿಡುವಂತೆ ಮಾಡಿದೆ.

ಟೀಂ ಇಂಡಿಯಾ ನಂ.1 ಆಲ್ರೌಂಡರ್ ಆಗಿ ಗುರುತಿಸಿಕೊಂಡಿರುವ ರವೀಂದ್ರ ಜಡೇಜಾ ಭುಜದ ನೋವಿನ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆಗೆ ಅಲಭ್ಯರಾಗಿದ್ದರು. ಆದರೆ ಮೂರನೇ ದಿನದಾಟದ ವೇಳೆ ರವೀಂದ್ರ ಜಡೇಜಾ, ಸಹ ಆಟಗಾರರ ಜತೆ ವಾರ್ಮ್‌ ಅಪ್ ಸೆಷನ್‌ನಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದರು.

146 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಹಿಂದೆಂದೂ ಯಾರೂ ಮಾಡದ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ..!

ರವೀಂದ್ರ ಜಡೇಜಾ ಕಳೆದ 7-8 ವರ್ಷಗಳಿಂದಲೂ ಭಾರತ ಟೆಸ್ಟ್ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಳ್ಳುತ್ತಲೇ ಬಂದಿದ್ದಾರೆ. ದಕ್ಷಿಣ ಆಫ್ರಿಕಾ ಎದುರಿನ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ರವೀಂದ್ರ ಜಡೇಜಾ ಅವರ ಅನುಪಸ್ಥಿತಿ ಟೀಂ ಇಂಡಿಯಾವನ್ನು ಬಹುವಾಗಿ ಕಾಡಿತ್ತು. ಸೆಂಚೂರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇನಿಂಗ್ಸ್‌ ಹಾಗೂ 32 ರನ್ ಅಂತರದ ಸೋಲು ಅನುಭವಿಸಿತ್ತು.

Scroll to load tweet…

ತಜ್ಞ ಸ್ಪಿನ್ನರ್ ರೂಪದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಅಪಾಯಕಾರಿ ಬೌಲರ್ ಎನಿಸಲೇ ಇಲ್ಲ. 19 ಓವರ್ ಬೌಲಿಂಗ್ ಮಾಡಿದ ಅಶ್ವಿನ್ 40 ರನ್ ನೀಡಿ ಕೇವಲ 1 ವಿಕೆಟ್ ಕಬಳಿಸಲಷ್ಟೇ ಶಕ್ತರಾದರು. ಇನ್ನು ಬ್ಯಾಟಿಂಗ್‌ನಲ್ಲೂ ಅಶ್ವಿನ್‌ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ. ಸೆನಾ ರಾಷ್ಟ್ರಗಳಲ್ಲಿ ರವೀಂದ್ರ ಜಡೇಜಾ ಉಪಯುಕ್ತ ಆಲ್ರೌಂಡರ್ ಆಗಿ ಗುರುತಿಸಿಕೊಂಡಿದ್ದು 6 ಅಥವಾ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗುತ್ತಲೇ ಬಂದಿದ್ದಾರೆ. ಒಂದು ವೇಳೆ ರವೀಂದ್ರ ಜಡೇಜಾ ಮೊದಲ ಟೆಸ್ಟ್ ಪಂದ್ಯವನ್ನು ಆಡಿದ್ದರೇ ಫಲಿತಾಂಶದ ಮೇಲೆ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆಯಿತ್ತು ಎಂದು ಹಲವು ಕ್ರಿಕೆಟ್ ಪಂಡಿತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.