ಪುಣೆ(ಅ.11): ಸೌತ್ ಆಫ್ರಿಕಾ ವಿರುದ್ದದ ಮೊದಲ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲಾವದ ಉಪನಾಯಕ ಅಜಿಂಕ್ಯ ರಹಾನೆ, 2ನೇ ಪಂದ್ಯದಲ್ಲಿ ಮಿಂಚಿದ್ದಾರೆ. ಪುಣೆ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದಾರೆ.

ನಾಯಕ ವಿರಾಟ್ ಕೊಹ್ಲಿ ಜೊತೆ ಇನಿಂಗ್ಸ್ ಕಟ್ಟಿದ ರಹಾನೆ, ಸೌತ್ ಆಫ್ರಿಕಾ ದಾಳಿಗೆ ತಾಳ್ಮೆಯಿಂದಲೇ ಉತ್ತರಿಸಿದರು. 2ನೇ ದಿನದಾಟದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದ ರಹಾನೆ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 20ನೇ ಹಾಫ್ ಸೆಂಚುರಿ ಸಿಡಿಸಿದರು.

2ನೇ ದಿನ ಬ್ಯಾಟಿಂಗ್ ಮುಂದುವರಿಸಿರುವ ಟೀಂ ಇಂಡಿಯಾ ಸದ್ಯ 3 ವಿಕೆಟ್ ನಷ್ಟಕ್ಕೆ 337 ರನ್ ಸಿಡಿಸಿ ಮುನ್ನಗ್ಗುತ್ತಿದೆ.