ಗುವಾಹಟಿ[ಜ.05]: ಭಾರತ-ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯಕ್ಕೆ ವರುಣರಾಯ ಅಡ್ಡಿ ಪಡಿಸಿದ್ದು, ಕೆಲಕಾಲ ತಡವಾಗಿ ಆರಂಭವಾಗುವ ಸಾಧ್ಯತೆಯಿದೆ.

ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ

ಭಾರತದ ವರ್ಷದ ಮೊದಲ ಪಂದ್ಯಕ್ಕೆ ಗುವಾಹಟಿಯ ಬರ್ಸಾಪುರ ಮೈದಾನ ಆತಿಥ್ಯ ವಹಿಸಿದ್ದು, ಟಾಸ್ ಮುಗಿದ ಬೆನ್ನಲ್ಲೇ ತುಂತುರು ಮಳೆ ಸುರಿದಿದೆ. ಹೀಗಾಗಿ ಸ್ವಲ್ಪ ತಡವಾಗಿ ಆರಂಭವಾಗಲಿದೆ.

ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ. ಶಿಖರ್ ಧವನ್, ಜಸ್ಪ್ರೀತ್ ಬುಮ್ರಾ ತಂಡ ಕೂಡಿಕೊಂಡಿದ್ದಾರೆ. ಆದರೆ ಕನ್ನಡಿಗ ಮನೀಶ್ ಪಾಂಡೆ, ಸಂಜು ಸ್ಯಾಮ್ಸನ್ ಮತ್ತೊಮ್ಮೆ ಬೆಂಚ್ ಕಾಯಿಸಬೇಕಾಗಿದೆ.