ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ
ವರ್ಷದ ಮೊದಲ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ದುಕೊಂಡಿದೆ. ಭಾರತ ಮೂವರು ಪ್ರಮುಖ ವೇಗಿಗಳೊಂದಿಗೆ ಕಣಕ್ಕಿಳಿಯುತ್ತಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ಗುವಾಹಟಿ[ಜ.05]: ಭಾರತ-ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ. ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯಕ್ಕೆ ಗುವಾಹಟಿಯ ಬರ್ಸಾಪುರ ಮೈದಾನ ಆತಿಥ್ಯ ವಹಿಸಿದೆ.
ಟೀಂ ಇಂಡಿಯಾ ಆಡುತ್ತಿರುವ ವರ್ಷದ ಮೊದಲ ಪಂದ್ಯ ಇದಾಗಿದ್ದು, ಜಸ್ಪ್ರೀತ್ ಬುಮ್ರಾ, ಶಿಖರ್ ಧವನ್ ಕಮ್’ಬ್ಯಾಕ್ ಮಾಡಿದ್ದಾರೆ. ಸಂಜು ಸ್ಯಾಮ್ಸನ್, ಮನೀಶ್ ಪಾಂಡೆ, ಚಹಲ್, ಜಡೇಜಾ ಅವರಿಗೆ ತಂಡದಲ್ಲಿ ಅವಕಾಶ ನೀಡಿಲ್ಲ. ಇನ್ನುಳಿದಂತೆ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದು, ಧವನ್-ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಶ್ರೇಯಸ್ ಅಯ್ಯರ್, ಪಂತ್, ಶಿವಂ ದುಬೆ,ವಾಷಿಂಗ್ಟನ್ ಸುಂದರ್ ಆ ಬಳಿಕ ಕ್ರೀಸ್‌ಗಿಳಿಯಲಿದ್ದಾರೆ. ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್ ನವದೀಪ್ ಸೈನಿ ವೇಗದ ಬೌಲರ್‌ಗಳಾಗಿ ಕಣಕ್ಕಿಳಿಯಲಿದ್ದಾರೆ. ಇನ್ನು ತಜ್ಞ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ಲಂಕಾ ತಂಡವನ್ನು ಲಸಿತ್ ಮಾಲಿಂಗ ಮುನ್ನಡೆಸುತ್ತಿದ್ದು ಮೂವರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಸಿದೆ.
ತಂಡಗಳು ಹೀಗಿವೆ:
ಭಾರತ:
ಶ್ರೀಲಂಕಾ: