ಇಂದೋರ್[ಜ.07]: ಭಾರತ-ಶ್ರೀಲಂಕಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ದುಕೊಂಡಿದೆ. ಗುವಾಹಟಿಯಲ್ಲಿ ನಡೆಯಬೇಕಿದ್ದ ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು.

ಇಲ್ಲಿನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಜಯದ ಕನವರಿಯಲ್ಲಿದೆ. ನಾಲ್ಕು ತಿಂಗಳುಗಳ ಬಳಿಕ ತಂಡ ಕೂಡಿಕೊಂಡಿರುವ ಜಸ್ಪ್ರೀತ್ ಬುಮ್ರಾ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.

ಇಂದೋರ್‌ನಲ್ಲಿಂದು ಭಾರತ-ಲಂಕಾ ಫೈಟ್‌

ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದು, ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ಲಂಕಾ ತಂಡದಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ ಇದೀಗ ಭಾರತ ಸರಣಿ ಗೆಲ್ಲಬೇಕಿದ್ದರೆ, ಉಳಿದೆರಡು ಪಂದ್ಯಗಳನ್ನು ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ.

ತಂಡಗಳು ಹೀಗಿವೆ:

ಭಾರತ:

ಶ್ರೀಲಂಕಾ: