ವಿಶಾಖಪಟ್ಟಣಂ[ಡಿ.18]: ಭಾರತ-ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ವಿಶಾಖಪಟ್ಟಣಂ ಆತಿಥ್ಯ ವಹಿಸಿದ್ದು, ಭಾರತ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಹೀಗಾಗಿ ವಿರಾಟ್ ಪಡೆ ಕೆಲ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.

IPL ಹರಾಜಿಗೂ ಮುನ್ನ ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡಿದ ವಿರಾಟ್ ಕೊಹ್ಲಿ !

ಹೌದು, ಚೆನ್ನೈನಲ್ಲಿ ನಡೆದ ಮೊದಲ ಪಂದ್ಯವನ್ನು ವೆಸ್ಟ್ ಇಂಡೀಸ್ ತಂಡ ಅನಾಯಾಸವಾಗಿ ಗೆದ್ದುಕೊಂಡಿತ್ತು. ಹೀಗಾಗಿ ಎರಡನೇ ಪಂದ್ಯವನ್ನು ಗೆಲ್ಲುವುದರ ಮೂಲಕ ಇನ್ನೊಂದು ಪಂದ್ಯ ಬಾಕೀ ಇರುವಾಗಲೇ ಸರಣಿ ಕೈವಶ ಮಾಡಿಕೊಳ್ಳಲು ಕೆರಿಬಿಯನ್ ಪಡೆ ಎದುರು ನೋಡುತ್ತಿದೆ. ಸರಣಿ ಜೀವಂತವಾಗಿರಿಸಿಕೊಳ್ಳಬೇಕಾದರೆ ಟೀಂ ಇಂಡಿಯಾ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಹೀಗಾಗಿ ಭಾರತ ವಿಭಿನ್ನ ರಣತಂತ್ರದೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್.ಕಾಂ ಆಯ್ದುಕೊಂಡ ಸಂಭಾವ್ಯ ಟೀಂ ಇಂಡಿಯಾ ಹೀಗಿದೆ ನೋಡಿ.

ಟಿ20 ಸೋಲಿಗೆ ತಿರುಗೇಟು, ಏಕದಿನದಲ್ಲಿ ವಿಂಡೀಸ್ ಶುಭಾರಂಭ!

ಟೀಂ ಇಂಡಿಯಾ ಅಗ್ರ ಕ್ರಮಾಂಕದಲ್ಲಿ ಯಾವುದೇ ಬದಲಾವಣೆ ಆಗುವ ಸಾಧ್ಯತೆ ಕಡಿಮೆ ಇದೆ. ಆರಂಭಿಕರಾಗಿ ರೋಹಿತ್-ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇನ್ನು ಕೊಹ್ಲಿ, ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್ ಬ್ಯಾಟಿಂಗ್ ನಡೆಸಲಿದ್ದಾರೆ. ಶಿವಂ ದುಬೆ ಹಾಗೂ ಕೇದಾರ್ ಜಾದವ್ ಆಲ್ರೌಂಡರ್ ಪಾತ್ರವನ್ನು ನಿಭಾಯಿಸಬೇಕಾಗಿದೆ. 

ಒಂದು ಬದಲಾವಣೆ..?

ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಿ ಯುಜುವೇಂದ್ರ ಚಹಲ್’ಗೆ ಅವಕಾಶ ನೀಡುವ ಸಾಧ್ಯತೆಯಿದೆ. ಏಕೆಂದರೆ ಹೆಟ್ಮೇಯರ್ ಎದುರು ಜಡೇಜಾ ಸಾಕಷ್ಟು ದುಬಾರಿಯಾಗಿದ್ದರು. ಹೀಗಾಗಿ ಕುಲ್ಚಾ ಜೋಡಿ ಒಟ್ಟಿಗೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಹೀಗಾದರೆ ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ದೀಪಕ್ ಚಹಾರ್ ಹಾಗೂ ಯುಜುವೇಂದ್ರ ಚಹಲ್ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ 
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್ 1