ವಿಶಾಖಪಟ್ಟಣಂ[ಡಿ.18]: ಭಾರತ-ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ದುಕೊಂಡಿದೆ. ವಿಂಡೀಸ್ ಈಗಾಗಲೇ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಚೆನ್ನೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿಂಡೀಸ್ 8 ವಿಕೆಟ್’ಗಳ ಭರ್ಜರಿ ಜಯ ದಾಖಲಿಸಿತ್ತು. ವೆಸ್ಟ್ ಇಂಡೀಸ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಎವಿನ್ ಲೆವಿಸ್ ಮತ್ತು ಖಾರೆ ಪಿರ್ರೆ ತಂಡ ಕೂಡಿಕೊಂಡಿದ್ದಾರೆ. ಇನ್ನು ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಶಿವಂ ದುಬೆಗೆ ವಿಶ್ರಾಂತಿ ನೀಡಲಾಗಿದ್ದು, ಶಾರ್ದೂಲ್ ಠಾಕೂರ್ ಅವಕಾಶ ನೀಡಲಾಗಿದೆ.  

ಸರಣಿ ಉಳಿಸಿಕೊಳ್ಳುವ ಒತ್ತಡದಲ್ಲಿ ಟೀಂ ಇಂಡಿಯಾ

ಈ ಪಂದ್ಯವನ್ನು ಗೆಲ್ಲುವುದರ ಮೂಲಕ ವಿಂಡೀಸ್ ಪಾಳಯ ಸರಣಿ ಗೆಲುವಿನ ಲೆಕ್ಕಾಚಾರದಲ್ಲಿದ್ದರೆ, ವಿರಾಟ್ ಪಡೆ ವಿಶಾಖಪಟ್ಟಣಂದಲ್ಲಿ ಗೆದ್ದು ಸರಣಿ ಜೀವಂತವಾಗಿರಿಸಿಕೊಳ್ಳಲು ಎದುರು ನೋಡುತ್ತಿದೆ. 

ತಂಡಗಳು ಹೀಗಿವೆ:

ಭಾರತ:

ವೆಸ್ಟ್ ಇಂಡೀಸ್