ಚೆನ್ನೈ(ಡಿ.14): ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಡಿ.15 ರಿಂದ ಆರಂಭಗೊಳ್ಳುತ್ತಿದೆ. 3 ಪಂದ್ಯಗಳ ಸರಣಿಯ ಮೊದಲ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಟಿ20 ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿರುವ ಕೊಹ್ಲಿ ಸೈನ್ಯ ಇದೀಗ ಏಕದಿನದಲ್ಲೂ ಶುಭಾರಂಭದ ವಿಶ್ವಾಸದಲ್ಲಿದೆ. 

ಇದನ್ನೂ ಓದಿ: ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ; ಪ್ರಮುಖ ವೇಗಿ ಔಟ್!

ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿ ಆರಂಭಕ್ಕೂ ಮೊದಲೇ ಭಾರತಕ್ಕೆ ಇಂಜುರಿ ಸಮಸ್ಯೆ ಎಂದುರಾಗಿದೆ. ವೇಗಿ ಭುವನೇಶ್ವರ್ ಕುಮಾರ್ ತಂಡದಿಂದ ಹೊರಬಿದ್ದಿದ್ದಾರೆ. ಭುವಿ ಬದಲಿಗೆ ಶಾರ್ದೂಲ್ ಠಾಕೂರ್ ತಂಡ ಸೇರಿಕೊಂಡಿದ್ದಾರೆ. ಮೊದಲ ಪಂದ್ಯಕ್ಕೆ ಸಂಭವನೀಯ ತಂಡದ ವಿವರ ಇಲ್ಲಿದೆ.

ಇದನ್ನೂ ಓದಿ: INDvWI ಏಕದಿನ: ಮತ್ತಷ್ಟು ದಾಖಲೆ ಪುಡಿ ಮಾಡಲು ಕೊಹ್ಲಿ ರೆಡಿ!

ಭಾರತ ಸಂಭವನೀಯ ತಂಡ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಶಿವಂ ದುಬೆ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ದೀಪಕ್ ಚಹಾರ್, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್

ವೆಸ್ಟ್ ಇಂಡೀಸ್ ಸಂಭವನೀಯ ತಂಡ:
ಕೀರನ್ ಪೋಲಾರ್ಡ್(ನಾಯಕ), ಬ್ರಾಂಡನ್ ಕಿಂಗ್, ಶೈ ಹೋಪ್ ಶಿಮ್ರೊನ್ ಹೆಟ್ಮೆಯರ್, ನಿಕೋಲಸ್ ಪೂರನ್, ಖರೆ ಪಿರೆ, ಜಾಸನ್ ಹೋಲ್ಡರ್, ರೋಸ್ಟನ್ ಚೇಸ್, ಹೈಡನ್ ವಾಲ್ಶ್, ಶೆಲ್ಡಾನ್ ಕಾಟ್ರೆಲ್, ಅಲ್ಜಾರಿ ಜೋಸೆಫ್

ಡಿಸೆಂಬರ್ 14ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: