ಕೋಚ್ ರಾಹುಲ್ ದ್ರಾವಿಡ್‌ ಜತೆ ವಿರಾಟ್‌ ಕೊಹ್ಲಿ ವಿಶೇಷ ಪೋಸ್ಟ್‌..! ಆ ದಿನಗಳನ್ನು ನೆನಪಿಸಿಕೊಂಡ ವಿರಾಟ್..!

* ಭಾರತ - ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಗೆ ಕ್ಷಣಗಣನೆ
* 2011ರಲ್ಲಿ ವೆಸ್ಟ್ ಇಂಡೀಸ್ ಎದುರು ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದ ಕೊಹ್ಲಿ
* ರಾಹುಲ್ ದ್ರಾವಿಡ್ ಜತೆಗೆ ಒಟ್ಟಿಗೆ ಟೆಸ್ಟ್ ಪಂದ್ಯವಾಡಿದ್ದ ವಿರಾಟ್

India vs West Indies Virat Kohli shares heartwarming post with Rahul Dravid ahead of Dominica Test kvn

ಡೊಮಿನಿಕ(ಜು.10): ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ವೆಸ್ಟ್ ಇಂಡೀಸ್ ಎದುರಿನ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದ್ದಾರೆ. ಭಾರತ ಹಾಗೂ ವೆಸ್ಟ್ ಇಂಡೀಸ್‌ ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಜುಲೈ 12ರಿಂದ ಆರಂಭವಾಗಲಿದ್ದು, ಈ ಪಂದ್ಯಕ್ಕೆ ಡೊಮಿನಿಕ ಆತಿಥ್ಯ ವಹಿಸಿದೆ. ಈ ಟೆಸ್ಟ್‌ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ, ಹೆಡ್‌ ಕೋಚ್‌ ರಾಹುಲ್ ದ್ರಾವಿಡ್‌ ಅವರ ಫೋಟೋ ಜತೆಗೆ ಭಾವನಾತ್ಮಕ ಕ್ಷಣವನ್ನು ಮೆಲುಕು ಹಾಕಿದ್ದಾರೆ.

ರಾಹುಲ್ ದ್ರಾವಿಡ್‌ ಹಾಗೂ ವಿರಾಟ್ ಕೊಹ್ಲಿ 2011ರಲ್ಲಿ ಡೊಮಿನಿಕದ ವಿಂಡ್ಸರ್‌ ಪಾರ್ಕ್‌ನಲ್ಲಿ ಒಟ್ಟಾಗಿ ಭಾರತ ತಂಡದ ಪರ ಟೆಸ್ಟ್ ಪಂದ್ಯವನ್ನಾಡಿದ್ದರು. ಇದಾಗಿ ಬರೋಬ್ಬರಿ 12 ವರ್ಷಗಳ ಬಳಿಕ ಈ ಇಬ್ಬರು ಒಂದೇ ಸ್ಟೇಡಿಯಂನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಪೈಕಿ ರಾಹುಲ್ ದ್ರಾವಿಡ್‌, ಭಾರತ ತಂಡದ ಹೆಡ್‌ ಕೋಚ್ ಆಗಿದ್ದರೆ, ವಿರಾಟ್ ಕೊಹ್ಲಿ ಭಾರತ ಬ್ಯಾಟಿಂಗ್ ಬೆನ್ನೆಲುಬು ಎನಿಸಿಕೊಂಡಿದ್ದಾರೆ.

ಡೊಮಿನಿಕದ ವಿಂಡ್ಸರ್ ಪಾರ್ಕ್‌, ಇದೀಗ ಬರೋಬ್ಬರಿ 6 ವರ್ಷಗಳ ಬಳಿಕ ಟೆಸ್ಟ್ ಪಂದ್ಯವೊಂದಕ್ಕೆ ಆತಿಥ್ಯ ವಹಿಸುತ್ತಿದೆ. ಇನ್ನು ಭಾರತ ತಂಡವು 2011ರ ಬಳಿಕ ಮೊದಲ ಬಾರಿಗೆ ಇಲ್ಲಿ ಟೆಸ್ಟ್ ಪಂದ್ಯವನ್ನಾಡಲು ಸಜ್ಜಾಗಿದೆ. 2011ರಲ್ಲಿ ಭಾರತ ತಂಡವು ವೆಸ್ಟ್ ಇಂಡೀಸ್ ಪ್ರವಾಸ ಮಾಡಿದಾಗ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ 1-0 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದು ಬೀಗಿತ್ತು. ವಿರಾಟ್ ಕೊಹ್ಲಿ, ಇದೇ ಸರಣಿಯಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು.

ಕೆರಿಬಿಯನ್ ನಾಡಲ್ಲಿ ವಿರಾಟ್ ಕೊಹ್ಲಿ ರೆಕಾರ್ಡ್ ಹೇಗಿದೆ?

ಇದೀಗ ಭಾರತ ತಂಡವು ಮತ್ತೊಮ್ಮೆ ಟೆಸ್ಟ್ ಪಂದ್ಯವನ್ನಾಡಲು ಡೊಮಿನಿಕಗೆ ಬಂದಿಳಿದಿದೆ. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್ ಜತೆಗೆ ನಿಂತು ಫೋಟೋ ಕ್ಲಿಕ್ಕಿಸಿಕೊಂಡು 2011ರ ಆ ದಿನಗಳನ್ನು ಮೆಲುಕು ಹಾಕಿದ್ದಾರೆ. ವಿಭಿನ್ನ ಸಾಮರ್ಥ್ಯದೊಂದಿಗೆ ನಾವಿಬ್ಬರು ಇಲ್ಲಿ ಮತ್ತೊಮ್ಮೆ ಭೇಟಿಯಾಗುತ್ತೇವೆ ಎಂದು ಕಲ್ಪನೆಯನ್ನೂ ಮಾಡಿಕೊಂಡಿರಲಿಲ್ಲ ಎಂದು ವಿರಾಟ್ ಕೊಹ್ಲಿ ಬರೆದುಕೊಂಡಿದ್ದಾರೆ.

 
 
 
 
 
 
 
 
 
 
 
 
 
 
 

A post shared by Virat Kohli (@virat.kohli)

2011ರಲ್ಲಿ ಭಾರತ ತಂಡವು ಡೊಮಿನಿಕದಲ್ಲಿ ಟೆಸ್ಟ್‌ ಪಂದ್ಯವನ್ನಾಡಿದಾಗ ಇದ್ದ ಇಬ್ಬರು ಆಟಗಾರರು ಇದೀಗ ಇಲ್ಲಿದ್ದೇವೆ. ವಿವಿಧ ಸಾಮರ್ಥ್ಯದೊಂದಿಗೆ ನಮ್ಮ ಪಯಣ ಇಲ್ಲಿಯವರೆಗೆ ಬರುತ್ತದೆ ಎಂದು ನಾನು ಕಲ್ಪನೆಯನ್ನೂ ಮಾಡಿಕೊಂಡಿರಲಿಲ್ಲ ಎಂದು ದ್ರಾವಿಡ್‌ ಜತೆಗೆ ವಿರಾಟ್ ಕೊಹ್ಲಿ ಫೋಟೋ ಪೋಸ್ಟ್‌ ಮಾಡಿ ಭಾವನಾತ್ಮಕ ಕ್ಷಣವನ್ನು ಮೆಲುಕು ಹಾಕಿದ್ದಾರೆ.

ಕಳೆದ ತಿಂಗಳು ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಮುಗ್ಗರಿಸುವ ಮೂಲಕ ಐಸಿಸಿ ಟ್ರೋಫಿ ಗೆಲ್ಲುವ ಕನಸನ್ನು ಕೈಚೆಲ್ಲಿತ್ತು. ಇದೀಗ ಮೂರನೇ ಆವತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿ ವಿಂಡೀಸ್ ತಂಡವನ್ನು ಮಣಿಸುವ ಮೂಲಕ ಭರ್ಜರಿಯಾಗಿ ಆರಂಭಿಸುವ ಲೆಕ್ಕಾಚಾರದಲ್ಲಿದೆ ರೋಹಿತ್ ಶರ್ಮಾ ಪಡೆ. ವೆಸ್ಟ್ ಇಂಡೀಸ್ ಎದುರಿನ ಟೆಸ್ಟ್ ಸರಣಿಗೆ ಅನುಭವಿ ಬ್ಯಾಟರ್ ಚೇತೇಶ್ವರ್ ಪೂಜಾರ ಅವರನ್ನು ಕೈಬಿಡಲಾಗಿದೆ. ಇನ್ನು ಅನುಭವಿ ವೇಗಿ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ.

ರಿಷಭ್ ಪಂತ್ ನಿಂದ ಆರ್ಚರ್‌ವರೆಗೆ: ಈ ಸ್ಟಾರ್ ಕ್ರಿಕೆಟಿಗರು ಏಕದಿನ ವಿಶ್ವಕಪ್ ಆಡೋದು ಡೌಟ್..!

ವಿರಾಟ್‌ ಕೊಹ್ಲಿ ಈವರೆಗೆ ವೆಸ್ಟ್ ಇಂಡೀಸ್​ನಲ್ಲಿ 13 ಇನ್ನಿಂಗ್ಸ್​ಗಳಲ್ಲಿ ಬ್ಯಾಟ್​ ಬೀಸಿದ್ದಾರೆ. ಕೇವಲ 35.61ರ ಸರಾಸರಿಯಲ್ಲಿ 463 ರನ್​ ಕಲೆಹಾಕಿದ್ದಾರೆ. 1 ಶತಕ ಮತ್ತು 2 ಅರ್ಧಶತಕ ಸಿಡಿಸಿದ್ದಾರೆ. ವಿರಾಟ್‌ ಕೊಹ್ಲಿ ರೇಂಜ್​ಗೆ ಈ ಅಂಕಿ-ಅಂಶಗಳು ಏನೇನೂ ಅಲ್ಲ. ಅದೇನೆ ಇರಲಿ, ಈ ಬಾರಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಕೊಹ್ಲಿ ಅಬ್ಬರಿಸಲಿ. ಆ ಮೂಲಕ ಟೆಸ್ಟ್​​ನಲ್ಲೂ ಹಳೆಯ ಖದರ್​ಗೆ ಮರಳಲಿ ಎನ್ನುವುದು ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳ ಹಾರೈಕೆಯಾಗಿದೆ.

ಟೆಸ್ಟ್ ಸರಣಿಗೆ ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ(ನಾಯಕ), ಶುಭ್‌ಮನ್‌ ಗಿಲ್‌, ಶುಭ್‌ಮನ್‌ ಗಿಲ್‌, ಋತುರಾಜ್ ಗಾಯಕ್ವಾಡ್‌, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್‌, ಅಜಿಂಕ್ಯ ರಹಾನೆ(ಉಪನಾಯಕ), ಕೆ ಎಸ್ ಭರತ್(ವಿಕೆಟ್ ಕೀಪರ್), ಇಶಾನ್‌ ಕಿಶನ್‌(ವಿಕೆಟ್‌ ಕೀಪರ್), ರವಿಚಂದ್ರನ್ ಅಶ್ವಿನ್‌, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಯದೇವ್ ಉನಾದ್ಕತ್, ನವದೀಪ್ ಸೈನಿ.

Latest Videos
Follow Us:
Download App:
  • android
  • ios