* ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಭಾರತ ಮಹಿಳಾ ಕ್ರಿಕೆಟ್ ತಂಡ* ಆಸ್ಟ್ರೇಲಿಯಾ ಪ್ರವಾಸದಲ್ಲಿ ಏಕೈಕ ಟೆಸ್ಟ್‌ ಪಂದ್ಯವನ್ನಾಡಲಿದೆ ಭಾರತ* ಬರೋಬ್ಬರಿ 15 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯವನ್ನಾಡಲಿರುವ ಭಾರತ

ನವದೆಹಲಿ(ಮೇ.19): ಮುಂಬರುವ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತ ಮಹಿಳಾ ಕ್ರಿಕೆಟ್‌ ತಂಡ ಬರೋಬ್ಬರಿ 15 ವರ್ಷಗಳ ಬಳಿಕ ಏಕೈಕ ಟೆಸ್ಟ್‌ ಪಂದ್ಯ ಸೇರಿದಂತೆ ದ್ವಿಪಕ್ಷೀಯ ಸರಣಿಯನ್ನಾಡಲು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಟೆಸ್ಟ್‌ ಬಳಿಕ ಏಕದಿನ ಹಾಗೂ ಟಿ20 ಸರಣಿಯನ್ನೂ ತಂಡ ಆಡಲಿದೆ. 

Add Asianetnews Kannada as a Preferred SourcegooglePreferred

ಭಾರತ ಮಹಿಳಾ ಕ್ರಿಕೆಟ್‌ ತಂಡ ಈ ವರ್ಷ 2 ಟೆಸ್ಟ್‌ ಪಂದ್ಯಗಳನ್ನು ಆಡಲಿದೆ. ಇಂಗ್ಲೆಂಡ್‌ ಪ್ರವಾಸದಿಂದ ವಾಪಸಾದ ಬಳಿಕ ಆಸ್ಪ್ರೇಲಿಯಾಗೆ ತೆರಳಲಿರುವ ಭಾರತ, ಒಂದು ಪಂದ್ಯದ ಟೆಸ್ಟ್‌ ಸರಣಿಯನ್ನು ಆಡಲಿದೆ. ಈ ಕುರಿತಾಗಿ ಬಿಸಿಸಿಐ ಅಥವಾ ಕ್ರಿಕೆಟ್ ಆಸ್ಟ್ರೇಲಿಯಾ ಇನ್ನು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. 

ಸೆಪ್ಟೆಂಬರ್‌ನಲ್ಲಿ ಭಾರತ ಕ್ರಿಕೆಟ್ ತಂಡ ಆಸ್ಪ್ರೇಲಿಯಾ ಪ್ರವಾಸಕ್ಕೆ?

ಭಾರತ ಕೊನೆ ಬಾರಿಗೆ ಆಸ್ಪ್ರೇಲಿಯಾ ವಿರುದ್ಧ ಟೆಸ್ಟ್‌ ಆಡಿದ್ದು 2006ರಲ್ಲಿ. ಅ ಟೆಸ್ಟ್‌ ಪಂದ್ಯದಲ್ಲಿ ಮಿಥಾಲಿ ರಾಜ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಇನಿಂಗ್ಸ್ ಹಾಗೂ 4 ರನ್‌ಗಳ ಅಂತರದ ಸೋಲು ಕಂಡಿತ್ತು. ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡಗಳು ಇದುವರೆಗೂ 9 ಟೆಸ್ಟ್‌ ಪಂದ್ಯಗಳನ್ನಾಡಿದ್ದು, ಆಸ್ಟ್ರೇಲಿಯಾ ತಂಡವು 4-0 ಮುನ್ನಡೆ ಕಾಯ್ದುಕೊಂಡಿದೆ. ಇನ್ನುಳಿದ 5 ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿವೆ.

ಜೂನ್ ತಿಂಗಳಿನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಇಂಗ್ಲೆಂಡ್ ತಂಡವು ಒಂದು ಟೆಸ್ಟ್‌ ಹಾಗೂ ತಲಾ 3 ಏಕದಿನ ಮತ್ತು ಟಿ20 ಪಂದ್ಯಗಳನ್ನಾಡಲಿದೆ. ಟೆಸ್ಟ್ ಹಾಗೂ ಏಕದಿನ ತಂಡವನ್ನು ಮಿಥಾಲಿ ರಾಜ್ ಮುನ್ನಡೆಸಿದರೆ, ಟಿ20 ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ.