ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಪರೂಪದ ದಾಖಲೆ ಬರೆದಿದ್ದಾರೆ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಂದಿಕ್ಕುವಲ್ಲಿ ಕಿಂಗ್ ಕೊಹ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..

ನವದೆಹಲಿ(ಫೆ.19): ಕ್ರಿಕೆಟ್ ಮೈದಾನದಲ್ಲಿ ಸದಾ ಒಂದಿಲ್ಲೊಂದು ದಾಖಲೆ ಬರೆಯುತ್ತಲೇ ಸಾಗುತ್ತಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಇದೀಗ ಮೈದಾನದಾಚೆಗೆ ಮತ್ತೊಂದು ಅಪರೂಪದ ದಾಖಲೆ ಬರೆದಿದ್ದಾರೆ. ದೇಶದ ಪ್ರಧಾನಿ ಮೋದಿಯನ್ನು ಹಿಂದಿಕ್ಕುವಲ್ಲಿ ಕ್ಯಾಪ್ಟನ್ ಕೊಹ್ಲಿ ಯಶಸ್ವಿಯಾಗಿದ್ದಾರೆ. 

ಸದ್ಯದಲ್ಲೇ ಭೇಟಿಯಾಗೋಣ: ಎಬಿಡಿ ಹುಟ್ಟುಹಬ್ಬಕ್ಕೆ ಕೊಹ್ಲಿ ಶುಭ ಹಾರೈಕೆ

View post on Instagram

ಹೌದು, ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ 5 ಕೋಟಿ ಹಿಂಬಾಲಕರನ್ನು ಪಡೆದ ಭಾರತದ ಮೊದಲ ವ್ಯಕ್ತಿ ಎನ್ನುವ ದಾಖಲೆಯನ್ನು ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಬರೆದಿದ್ದಾರೆ. ಕೊಹ್ಲಿ ಈ ವರೆಗೂ 930 ಪೋಸ್ಟ್‌ಗಳನ್ನು ಹಾಕಿದ್ದು, ಪ್ರತಿ ಪೋಸ್ಟ್‌ಗೂ ಲಕ್ಷಾಂತರ ಮಂದಿ ಲೈಕ್‌ ಒತ್ತಿದ್ದಾರೆ. 

ಕೊಹ್ಲಿ ಪ್ರತಿ ಇನ್‌ಸ್ಟಾಗ್ರಾಂ ಪೋಸ್ಟ್‌ಗೆ 1.35 ಕೋಟಿ ರುಪಾಯಿ ಸಿಗತ್ತೆ..!

View post on Instagram

ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಸಮೀಕ್ಷೆ ಪ್ರಕಾರ, ವಿರಾಟ್‌ ಸತತ 3ನೇ ವರ್ಷ ಅತಿಹೆಚ್ಚು ಬ್ರ್ಯಾಂಡ್‌ ಮೌಲ್ಯ ಹೊಂದಿರುವ ಭಾರತದ ಸೆಲೆಬ್ರಿಟಿ ಎನಿಸಿದ್ದರು. ಬಾಲಿವುಡ್‌ ನಟಿ ಪ್ರಿಯಾಂಕ ಚೋಪ್ರಾ 4.99 ಕೋಟಿ ಹಿಂಬಾಲಕರೊಂದಿಗೆ 2ನೇ ಸ್ಥಾನದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 3.45 ಹಿಂಬಾಲಕರನ್ನು ಹೊಂದಿದ್ದಾರೆ. ಜಾಗತಿಕ ಮಟ್ಟದಲ್ಲಿ ಪೋರ್ಚುಗಲ್‌ನ ದಿಗ್ಗಜ ಫುಟ್ಬಾಲಿಗ ಕ್ರಿಸ್ಟಿಯಾನೋ ರೊನಾಲ್ಡೋ ಮೊದಲ ಸ್ಥಾನದಲ್ಲಿದ್ದಾರೆ. ರೊನಾಲ್ಡೋಗೆ 20 ಕೋಟಿಗೂ ಹೆಚ್ಚು ಹಿಂಬಾಲಕರು ಇದ್ದಾರೆ.

ಫೆಬ್ರವರಿ 19ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ