ಮುಂಬೈ(ನ.07):  ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಮುಗ್ಗರಿಸೋ ಮೂಲಕ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೋರಾಟ ಅಂತ್ಯಗೊಂಡಿದೆ. ಇದೀಗ ಕೊಹ್ಲಿ  ಆಸ್ಟ್ರೇಲಿಯಾ ಪ್ರವಾಸಕ್ಕೆ ತಯಾರಿ ಆರಂಭಿಸಿದ್ದಾರೆ. ಆದರೆ ಆಸ್ಟ್ರೇಲಿಯಾ ವಿರುದ್ಧದ ಅಂತಿಮ 2 ಟೆಸ್ಟ್ ಪಂದ್ಯಕ್ಕೆ ಕೊಹ್ಲಿ ಅಲಭ್ಯರಾಗುವ ಸಾಧ್ಯತೆ ಇದೆ. 

ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ರಾಹುಲ್‌ಗೆ ಉಪನಾಯಕ ಪಟ್ಟ!.

ಆಸ್ಟ್ರೇಲಿಯಾ ವಿರುದ್ಧದ ಅಂತಿಮ 2 ಟೆಸ್ಟ್ ಪಂದ್ಯದ 2021ರ ಜನವರಿ 7 ರಿಂದ 15ರ ವರೆಗೆ ನಡೆಯಲಿದೆ. ಈ ವೇಳೆ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾಗೆ ಡೆಲಿವರಿ ಡೇಟ್ ನೀಡಲಾಗಿದೆ. ಹೀಗಾಗಿ ಕೊಹ್ಲಿ ಅಂತಿಮ ಟೆಸ್ಟ್ ಪಂದ್ಯದ ವೇಳೆ ಭಾರತಕ್ಕೆ ಮರಳಲಿದ್ದಾರೆ.

ಭಾರತ-ಆಸ್ಟ್ರೇಲಿಯಾ ಸರಣಿ ಸಂಪೂರ್ಣ ವೇಳಾಪಟ್ಟಿ ಪ್ರಕಟ!

ಆಸೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಪತ್ನಿಯನ್ನು ಕರೆದಕೊಂಡು ಹೋಗಲು ಅನುಮತಿ ನೀಡಿದೆ. ಆದರೆ ಗರ್ಭಿಣಿಯಾಗಿರುವ ಅನುಷ್ಕಾ ಶರ್ಮಾ ಆಸೀಸ್ ಪ್ರವಾಸಕ್ಕೆ ತೆರಳುತ್ತಿಲ್ಲ.

ನವೆಂಬರ್ 27 ರಿಂದ ಭಾರತ ಹಾಗೂ ಆಸ್ಟ್ರೇಲಿಯಾ ಸರಣಿ ಆರಂಭಗೊಳ್ಳಲಿದೆ. ಏಕದಿನ ಸರಣಿ ಬಳಿಕ ಡಿಸೆಂಬರ್ 4 ರಿಂದ ಟಿ20 ಸರಣಿ ಆರಂಭಗೊಳ್ಳುತ್ತಿದೆ. ಈಗಾಗಲೇ ಬಿಸಿಸಿಐ ಟೀಂ ಇಂಡಿಯಾ ಪ್ರಕಟಿಸಿದೆ. ಕನ್ನಡಿಗ ಕೆಎಲ್ ರಾಹುಲ್‌ಗೆ  ಉಪನಾಯಕತ್ವ ನೀಡಲಾಗಿದೆ.