ಮನೆಯಿಂದ ಹೊರಬರದಂತೆ ಕ್ರಿಕೆಟಿಗರಿಗೆ ಬಿಸಿಸಿಐ ಎಚ್ಚರಿಕೆ
* ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಖಡಕ್ ಸೂಚನೆ
* ಕೋವಿಡ್ ಭೀತಿಯಿಂದಾಗಿ ಮನೆಯಲ್ಲಿಯೇ ಇರಿ ಎಂದು ಬಿಸಿಸಿಐ ಸೂಚನೆ
* ಭಾರತ ತಂಡ ಜೂ.2ಕ್ಕೆ ಇಂಗ್ಲೆಂಡ್‌ಗೆ ಹೊರಡುವ ನಿರೀಕ್ಷೆ ಇದೆ.
ನವದೆಹಲಿ(ಮೇ.12): ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲಿರುವ ಭಾರತೀಯ ಕ್ರಿಕೆಟಿಗರಿಗೆ ಮನೆ ಬಿಟ್ಟು ಹೊರಬರದಂತೆ ಬಿಸಿಸಿಐ ಎಚ್ಚರಿಕೆ ನೀಡಿದೆ.
ಯಾವುದೇ ಆಟಗಾರನಿಗೆ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದರೆ ಆ ಆಟಗಾರನನ್ನು ತಂಡದಿಂದ ಕೈಬಿಡುವುದಾಗಿ ಬಿಸಿಸಿಐ ತಿಳಿಸಿದ್ದು, ಗುಣಮುಖರಾದ ಬಳಿಕ ವಿಶೇಷ ವಿಮಾನದ ವ್ಯವಸ್ಥೆ ಮಾಡುವುದಿಲ್ಲ ಎಂದು ತಿಳಿಸಿದೆ. ಭಾರತ ತಂಡ ಜೂ.2ಕ್ಕೆ ಇಂಗ್ಲೆಂಡ್‌ಗೆ ಹೊರಡುವ ನಿರೀಕ್ಷೆ ಇದೆ. ಅದಕ್ಕೂ ಮುನ್ನ ಮುಂಬೈನಲ್ಲಿ ಬಿಸಿಸಿಐನ ಬಯೋ ಬಬಲ್‌ನೊಳಗೆ ಆಟಗಾರರು ಪ್ರವೇಶಿಸಲಿದ್ದು, ಕೋವಿಡ್ ಪರೀಕ್ಷೆಗೆ ಒಳಗಾಗಲಿದ್ದಾರೆ.
ಬಯೋ ಬಬಲ್ ಪ್ರವೇಶಿಸುವ ವರೆಗೂ ಬಹಳ ಎಚ್ಚರಿಕೆ ವಹಿಸುವಂತೆ ಬಿಸಿಸಿಐ ತನ್ನ ಆಟಗಾರರಿಗೆ ಸೂಚಿಸಿದೆ. ಈಗಾಗಲೇ ಬಹುತೇಕ ಆಟಗಾರರು ಕೊರೋನಾ ಲಸಿಕೆ ಮೊಡಲ ಡೋಸ್ ಹಾಕಿಸಿಕೊಂಡಿದ್ದು, ಉಳಿದವರಿಗೆ ಬೇಗ ಲಸಿಕೆ ಹಾಕಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಇಂಗ್ಲೆಂಡ್ ಎದುರು ಭಾರತ 3-2ರಲ್ಲಿ ಟೆಸ್ಟ್ ಸರಣಿ ಗೆಲ್ಲಲಿದೆ: ದ್ರಾವಿಡ್ ಭವಿಷ್ಯ
ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸದಲ್ಲಿ ಮೊದಲಿಗೆ ಜೂನ್ 18ರಿಂದ ಆರಂಭವಾಗಲಿರುವ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು ಪ್ರಶಸ್ತಿಗಾಗಿ ಕಾದಾಡಲಿದೆ. ಇದಾದ ಬಳಿಕ ಆಗಸ್ಟ್ 04ರಿಂದ ಆರಂಭವಾಗಲಿರುವ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ದ ಭಾರತ ಸೆಣಸಾಟ ನಡೆಸಲಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona