ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಿದ ಟೀಂ ಇಂಡಿಯಾಟಿ20 ವಿಶ್ವಕಪ್ ಟೂರ್ನಿಯು ಅಕ್ಟೋಬರ್ 16ರಿಂದ ಆರಂಭಭಾರತ ತಂಡವು ಅಕ್ಟೋಬರ್ 23ರಂದು ಪಾಕ್ ಎದುರು ಮೊದಲ ಪಂದ್ಯ ಆಡಲಿದೆ

ಚೆನ್ನೈ(ಅ.06): ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಇಂದು ಆಸ್ಟ್ರೇಲಿಯಾದತ್ತ ಪ್ರಯಾಣ ಬೆಳೆಸಿದೆ. ಚೊಚ್ಚಲ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಚಾಂಪಿಯನ್ ಭಾರತ ತಂಡವು, ಇದೀಗ ಎರಡನೇ ಟ್ರೋಫಿ ಮೇಲೆ ಚಿತ್ತ ನೆಟ್ಟಿದೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಅಕ್ಟೋಬರ್ 16ರಿಂದ ಆರಂಭವಾಗಲಿದೆ. ಟೀಂ ಇಂಡಿಯಾ ಆಟಗಾರರು ಆಸ್ಟ್ರೇಲಿಯಾಗೆ ವಿಮಾನ ಏರುವ ಮುನ್ನ ಕೆಲವು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಅಕ್ಟೋಬರ್ 23ರಂದು ಬದ್ದ ಎದುರಾಳಿ ಪಾಕಿಸ್ತಾನ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಮೆಲ್ಬೊರ್ನ್‌ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವನ್ನು ವಹಿಸಲಿದೆ. ಸೂಪರ್ 12 ಹಂತದ ಪಂದ್ಯಗಳು ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಭಾರತ ಕ್ರಿಕೆಟ್ ತಂಡವು ಅಕ್ಟೋಬರ್ 17ರಂದು ಆತಿಥೇಯ ಆಸ್ಟ್ರೇಲಿಯಾ ಹಾಗೂ ಅಕ್ಟೋಬರ್ 19ರಂದು ನ್ಯೂಜಿಲೆಂಡ್ ಎದುರು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ತನ್ನ ಅಭಿಯಾನವನ್ನು ಆರಂಭಿಸಲಿದೆ. 

T20 World Cup: ಜಸ್ಪ್ರೀತ್ ಬುಮ್ರಾ ಸ್ಥಾನಕ್ಕೆ ಮೊಹಮ್ಮದ್ ಶಮಿ ಸೇರ್ಪಡೆ..?

ಪ್ರತಿಷ್ಠಿತ ಟಿ20 ವಿಶ್ವಕಪ್ ಟೂರ್ನಿಗೆ ಹೊರಡುವ ಮುನ್ನ ಆಟಗಾರರು ಸಹಾಯಕ ಸಿಬ್ಬಂದಿಗಳನ್ನೊಳಗೊಂಡ ಗ್ರೂಪ್‌ ಫೋಟೋಗಳನ್ನು ತೆಗೆಯಲಾಗಿದು, ಈ ಫೋಟೋಗಳನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಇನ್ನು ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡಾ, ಹರ್ಷಲ್ ಪಟೇಲ್, ಯುಜುವೇಂದ್ರ ಚಹಲ್‌ ಜತೆಗಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Scroll to load tweet…
Scroll to load tweet…

ವಿಶ್ವಕಪ್ ಟೂರ್ನಿಗೂ ಮುನ್ನ ಟೀಂ ಇಂಡಿಯಾಗೆ ಬಿಗ್‌ ಶಾಕ್: ಅಕ್ಟೋಬರ್ 16ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದ್ದು, ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ, ಗಾಯದ ಸಮಸ್ಯೆಯಿಂದಾಗಿ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಗೂ ಮುನ್ನ ಬೆನ್ನು ನೋವಿನ ಸಮಸ್ಯೆಯಿಂದ ಭಾರತ ತಂಡದಿಂದ ಹೊರಬಿದ್ದಿದ್ದ ಬುಮ್ರಾ, ಇದೀಗ ಚುಟುಕು ಕ್ರಿಕೆಟ್ ವಿಶ್ವಕಪ್ ಟೂರ್ನಿಯಿಂದಲೂ ಹೊರಬಿದ್ದಿದ್ದಾರೆ. ಜಸ್ಪ್ರೀತ್ ಬುಮ್ರಾಗೆ ಬದಲಿ ಆಟಗಾರನನ್ನು ಇನ್ನೂ ಆಯ್ಕೆ ಮಾಡಿಕೊಂಡಿಲ್ಲ.