Asianet Suvarna News Asianet Suvarna News

ಶತಕ ಸಿಡಿಸಿ ಕೊಹ್ಲಿ ದಾಖಲೆ ಮುರಿದು, ದ್ರಾವಿಡ್ ರೆಕಾರ್ಡ್ ಸರಿಗಟ್ಟಿದ ರಾಹುಲ್..!

ಕರ್ನಾಟಕದ ಕ್ರಿಕೆಟಿಗ ಕೆ.ಎಲ್. ರಾಹುಲ್ ನ್ಯೂಜಿಲೆಂಡ್ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿ ನಾಯಕ ವಿರಾಟ್ ಕೊಹ್ಲಿ ದಾಖಲೆ ಅಳಿಸಿಹಾಕಿದ್ದಾರೆ. ಇದೇ ವೇಳೆ 2 ದಶಕಗಳಿಂದ ರಾಹುಲ್ ದ್ರಾವಿಡ್ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..

Indian Cricketer KL Rahul Breaks Virat Kohli Record
Author
Mount Maunganui, First Published Feb 11, 2020, 1:16 PM IST

ಮೌಂಟ್‌ ಮಾಂಗನ್ಯುಯಿ(ಫೆ.11): ಕನ್ನಡಿಗ ಕೆ.ಎಲ್. ರಾಹುಲ್ ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಮೋಘ ಶತಕ ಸಿಡಿಸುವ ಮೂಲಕ ತಂಡಕ್ಕೆ ನೆರವಾಗಿದ್ದಾರೆ. ಇದರ ಜತೆಗೆ ನಾಯಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ.

ರಾಹುಲ್ ಶತಕ: ಕಿವೀಸ್‌ಗೆ ಸ್ಫರ್ಧಾತ್ಮಕ ಗುರಿ ನೀಡಿದ ಟೀಂ ಇಂಡಿಯಾ

ಹೌದು, ಕೆ.ಎಲ್. ರಾಹುಲ್ ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿ ತಂಡಕ್ಕೆ ಆಸರೆಯಾದರು. ಒಂದು ಹಂತದಲ್ಲಿ ಒಂದು ಹಂತದಲ್ಲಿ 62 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಶ್ರೇಯಸ್ ಜತೆ ಶತಕದ ಜತೆಯಾಟ ನಿಭಾಯಿಸಿದ ರಾಹುಲ್ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು. ಇದಾದ ಬಳಿಕ ಮನೀಶ್ ಪಾಂಡೆ ಜತೆಯೂ ರಾಹುಲ್ 107 ರನ್‌ಗಳ ಜತೆಯಾಟವಾಡಿ ತಂಡ ಸ್ಫರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾದರು.

ಶತಕ ಬಾರಿಸಿ ದಾಖಲೆ ಬರೆದ ರಾಹುಲ್: ರಾಹುಲ್ 104 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ರಾಹುಲ್ ಏಕದಿನ ಕ್ರಿಕೆಟ್‌ನಲ್ಲಿ ಬಾರಿಸಿದ ನಾಲ್ಕನೇ ಶತಕವಾಗಿದೆ. ಈ ಮೂಲಕ ಕಡಿಮೆ ಇನಿಂಗ್ಸ್‌ನಲ್ಲಿ ಅತಿವೇಗವಾಗಿ 4 ಶತಕ ಬಾರಿಸಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎನ್ನುವ ದಾಖಲಿಸಿದರು. ಇದರೊಂದಿಗೆ ಕೊಹ್ಲಿ ದಾಖಲೆಯನ್ನು ಹಿಂದಿಕ್ಕಿದರು. ಈ ಮೊದಲು ವಿರಾಟ್ ಕೊಹ್ಲಿ 36 ಇನಿಂಗ್ಸ್‌ಗಳಲ್ಲಿ 4 ಶತಕ ಬಾರಿಸಿದ್ದರು. ಇದೀಗ ರಾಹುಲ್ ರಾಹುಲ್ ಕೇವಲ 31 ಇನಿಂಗ್ಸ್‌ಗಳಲ್ಲಿ 4 ಶತಕ ಪೂರೈಸುವ ಮೂಲಕ ಕೊಹ್ಲಿ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಇನ್ನು ಭಾರತ ಪರ ಅತಿ ಕಡಿಮೆ ಇನಿಂಗ್ಸ್‌ನಲ್ಲಿ 4 ಶತಕ ಪೂರೈಸಿದ ದಾಖಲೆ ಶಿಖರ್ ಧವನ್ ಹೆಸರಿನಲ್ಲಿದೆ. ಧವನ್ 24 ಇನಿಂಗ್ಸ್‌ಗಳಲ್ಲಿ 4 ಶತಕ ಬಾರಿಸಿದ್ದರು.

ದ್ರಾವಿಡ್ ದಾಖಲೆ ಸರಿಗಟ್ಟಿದ ರಾಹುಲ್: ಈ ಶತಕ ಬಾರಿಸುವ ಮೂಲಕ 2 ದಶಕಗಳಿಂದ ರಾಹುಲ್ ದ್ರಾವಿಡ್ ಹೆಸರಿನಲ್ಲಿದ್ದ ದಾಖಲೆಯನ್ನು ಕೆ.ಎಲ್ ರಾಹುಲ್ ಸರಿಗಟ್ಟಿದರು. ಈ ಮೊದಲು ಏಷ್ಯಾದಾಚೆಗೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಶತಕ ಬಾರಿಸಿದ್ದು 1999ರಲ್ಲಿ. ಇಂಗ್ಲೆಂಡ್‌ನಲ್ಲಿ ನಡೆದ ಏಕದನ ವಿಶ್ವಕಪ್ ಟೂರ್ನಿಯಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿದ್ದ ರಾಹುಲ್ ದ್ರಾವಿಡ್ ಶ್ರೀಲಂಕಾ ವಿರುದ್ಧ 145 ರನ್ ಬಾರಿಸಿದ್ದರು. ಇದಾಗಿ 2 ದಶಕಗಳೇ ಕಳೆದರು. ಟೀಂ ಇಂಡಿಯಾದ ಯಾವೊಬ್ಬ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಹಾ ಏಷ್ಯಾದಾಚೆಗೆ ಏಕದಿನ ಕ್ರಿಕೆಟ್‌ನಲ್ಲಿ ಶತಕ ಬಾರಿಸಿರಲಿಲ್ಲ. ಇದೀಗ ಮತ್ತೋರ್ವ ಕರ್ನಾಟಕದ ಪ್ರತಿಭೆ ರಾಹುಲ್ ಶತಕ ಬಾರಿಸುವ ಮೂಲಕ ದ್ರಾವಿಡ್ ದಾಖಲೆಯನ್ನು ಸರಿಗಟ್ಟಿದ್ದಾರೆ.    

ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕೆ.ಎಲ್. ರಾಹುಲ್(112) ಹಾಗೂ ಶ್ರೇಯಸ್ ಅಯ್ಯರ್(62) ಆಕರ್ಷಕ ಬ್ಯಾಟಿಂಗ್ ನೆರವಿನಿಂದ 296 ರನ್ ಬಾರಿಸಿದೆ.

Follow Us:
Download App:
  • android
  • ios