* ಕೊನೆಯುಸಿರೆಳೆದ ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ತಂದೆ* ಲಿವರ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕಿರಣ್‌ ಪಾಲ್ ಸಿಂಗ್‌* ಭುವಿ ತಂದೆ ಕಿರಣ್ ಪಾಲ್‌ ಸಿಂಗ್‌ಗೆ 63 ವರ್ಷ ವಯಸ್ಸಾಗಿತ್ತು.

ನವದೆಹಲಿ(ಮೇ.21): ಭಾರತ ಕ್ರಿಕೆಟ್‌ ತಂಡದ ವೇಗಿ ಭುವನೇಶ್ವರ್‌ ಕುಮಾರ್‌ ಅವರ ತಂದೆ ಕಿರಣ್‌ ಪಾಲ್‌ ಸಿಂಗ್(63 ವರ್ಷ)‌, ಗುರುವಾರ ಮೀರಠ್‌ನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. 

ಕಳೆದ 8 ತಿಂಗಳಿಂದ ಅವರು ಪಿತ್ತಜನಕಾಂಗದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. 2 ವಾರಗಳ ಹಿಂದೆ ಅವರು ಮೀರಠ್‌ನ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಯುಎಇನಲ್ಲಿ ಐಪಿಎಲ್‌ನಲ್ಲಿ ಭಾಗವಹಿಸಿ ದಿಢೀರ್ ವಾಪಾಸ್ ಬಂದಾಗ ಕಿರಣ್‌ ಪಾಲ್‌ ಸಿಂಗ್‌ ಕ್ಯಾನ್ಸರ್‌ ತಗುಲಿರುವ ವಿಚಾರ ಖಚಿತವಾಗಿತ್ತು. ಬಳಿಕ ನವದೆಹಲಿಯಲ್ಲಿರು ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಿರಣ್‌ ಪಾಲ್‌ ಸಿಂಗ್‌ ಕೀಮೋಥೆರಫಿಗೂ ಒಳಗಾಗಿದ್ದರು.

ಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌ ಆಯ್ಕೆ

ಇನ್ನು ಕಳೆದೆರಡು ವಾರಗಳ ಹಿಂದಷ್ಟೇ ಪರಿಸ್ಥಿತಿ ಕಿರಣ್‌ ಪಾಲ್‌ ಸಿಂಗ್‌ ಅವರ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದ್ದರಿಂದ ಮೀರಠ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿರಣ್‌ ಪಾಲ್‌ ಉತ್ತರ ಪ್ರದೇಶ ಪೊಲೀಸ್‌ ಇಲಾಖೆಯಲ್ಲಿ ಸಬ್‌-ಇನ್‌ಸ್ಪೆಕ್ಟರ್‌ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಟೀಂ ಇಂಡಿಯಾ ವೇಗಿ ಭುವನೇಶ್ವರ್‌ ಕುಮಾರ್‌ ಇಂಗ್ಲೆಂಡ್‌ ಪ್ರವಾಸದಿಂದ ಹಿಂದೆ ಸರಿದಿದ್ದರು. ಇನ್ನು ಜುಲೈನಲ್ಲಿ ಆರಂಭವಾಗಲಿರುವ ಶ್ರೀಲಂಕಾ ವಿರುದ್ದದ ಸೀಮಿತ ಓವರ್‌ಗಳ ಸರಣಿಗೆ ಟೀಂ ಇಂಡಿಯಾ ಕೂಡಿಕೊಳ್ಳುವ ಸಾಧ್ಯತೆಯಿದೆ.

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಾಸೀಂ ಜಾಫರ್, ಸುರೇಶ್ ರೈನಾ ಸೇರಿದಂತೆ ಹಲವು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಸಾಂತ್ವನ ಹೇಳಿದ್ದಾರೆ. 

Scroll to load tweet…
Scroll to load tweet…
Scroll to load tweet…