ಪತ್ನಿ ಜತೆ ಕುಕ್ಕೆ ಸುಬ್ರಮಣ್ಯಕ್ಕೆ ಸೂರ್ಯಕುಮಾರ್ ಯಾದವ್ ಭೇಟಿ; ವಿಶೇಷ ಪೂಜೆ ಸಲ್ಲಿಕೆ

ದಕ್ಷಿಣ ಆಫ್ರಿಕಾ ಪ್ರವಾಸ ಮುಗಿಸಿ ತವರಿಗೆ ವಾಪಸ್ಸಾಗಿರುವ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಪತ್ನಿ ಜತೆ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ

Indian T20 Captain Suryakumar Yadav visits Kukke Subramanya Temple kvn

ದಕ್ಷಿಣ ಕನ್ನಡ: ಭಾರತ ಟಿ20 ತಂಡದ ನಾಯಕ ಹಾಗೂ ಸ್ಪೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್, ಇದೀಗ ದಂಪತಿ ಸಮೇತ ಶ್ರೀಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದಾಗ ಸೂರ್ಯಕುಮಾರ್ ಯಾದವ್‌ಗೆ ಪತ್ನಿ ದೇವಿಶಾ ಶೆಟ್ಟಿ ಕೂಡಾ ಸಾಥ್ ನೀಡಿದ್ದಾರೆ.

ದಂಪತಿ ಸಮೇತ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿದ ಮುಂಬೈ ಇಂಡಿಯನ್ಸ್ ತಂಡದ ಸ್ಪೋಟಕ ಬ್ಯಾಟರ್, ಸುಬ್ರಮಣ್ಯದಲ್ಲಿ ಆಶ್ಲೇಷ ಬಲಿ, ಮಹಾಪೂಜೆ ಅಭಿಷೇಕ ನೆರವೇರಿಸಿ ಸ್ವಾಮಿಯ ಕೃಪೆಗೆ ಪಾತ್ರರಾದರು.

ಆರ್‌ಸಿಬಿ ಮುಂದಿನ ನಾಯಕ ಯಾರು? ರೇಸ್‌ನಲ್ಲಿದ್ದಾರೆ 5 ಸ್ಟಾರ್ ಕ್ರಿಕೆಟರ್ಸ್!

ಕಾಪು ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸೂರ್ಯ: ಐಸಿಸಿ ಟಿ20 ವಿಶ್ವಕಪ್ ಜಯಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸೂರ್ಯಕುಮಾರ್ ಯಾದವ್, ತವರಿಗೆ ಬರುತ್ತಿದ್ದಂತೆಯೇ, ಮೊದಲಿಗೆ ಪತ್ನಿ ದೇವಿಶಾ ಶೆಟ್ಟಿ ಜತೆ ಕಾಪುವಿನಲ್ಲಿರುವ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಅಲ್ಲಿನ ಅರ್ಚಕರು ಮುಂದಿನ ಬಾರಿ ಇಲ್ಲಿಗೆ ಬರುವಾಗ ಭಾರತ ತಂಡದ ನಾಯಕರಾಗಿ ಬನ್ನಿ ಎಂದು ಹರಸಿದ್ದರು.

ಆಸ್ಟ್ರೇಲಿಯಾ ಎದುರಿನ ಮೊದಲ ಟೆಸ್ಟ್‌ಗೂ ಮುನ್ನ ಭಾರತಕ್ಕೆ ಆಯ್ಕೆ ಗೊಂದಲ!

ಇನ್ನು ಕಾಕತಾಳೀಯ ಎನ್ನುವಂತೆ ಕಾಪು ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಲವೇ ದಿನಗಳಲ್ಲಿ ಸೂರ್ಯಕುಮಾರ್ ಯಾದವ್ ಅಚ್ಚರಿಯ ರೀತಿಯಲ್ಲಿ ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ ಅವರನ್ನು ಹಿಂದಿಕ್ಕಿ ಟೀಂ ಇಂಡಿಯಾ ಟಿ20 ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಇನ್ನು ಇತ್ತೀಚೆಗೆ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, 4 ಪಂದ್ಯಗಳ ಟಿ20 ಸರಣಿಯನ್ನಾಡಲು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿತ್ತು. ಹರಿಣಗಳ ನಾಡಿನಲ್ಲಿ ಸೂರ್ಯಕುಮಾರ್ ಯಾದವ್ ಪಡೆ 3-1 ಅಂತರದಲ್ಲಿ ಸರಣಿ ಗೆಲ್ಲುವ ಮೂಲಕ ಸ್ಮರಣೀಯವಾಗಿಸಿಕೊಂಡಿತ್ತು. 
 

Latest Videos
Follow Us:
Download App:
  • android
  • ios