ಮುಂಬೈ(ಮೇ.15): ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಮಹಿಳಾ ಆಟಗಾರ್ತಿಯರ ತಂಡವನ್ನು ಪ್ರಕಟಿಸಲಾಗಿದ್ದು, ಏಕದಿನ ಹಾಗೂ ಟೆಸ್ಟ್ ತಂಡವನ್ನು ಮಿಥಾಲಿ ರಾಜ್ ಮುನ್ನಡೆಸಿದರೆ, ಟಿ20 ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಒಂದು ಟೆಸ್ಟ್, 3 ಏಕದಿಕ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿವೆ 

ಮೊದಲಿಗೆ ಭಾರತ ತಂಡವು ಜೂನ್‌ 16ರಿಂದ ಇಂಗ್ಲೆಂಡ್ ವಿರುದ್ದ ಏಕೈಕ ಟೆಸ್ಟ್ ಪಂದ್ಯವನ್ನಾಡಲಿದೆ. ಇದಾದ ಬಳಿಕ 3 ಪಂದ್ಯಗಳ ಏಕದಿನ ಸರಣಿ ಜೂನ್‌ 27ರಿಂದ ಆರಂಭವಾಗಲಿದೆ. ಭಾರತದ ಸ್ಪೋಟಕ ಬ್ಯಾಟರ್ ಶಫಾಲಿ ವರ್ಮಾ ಹಾಗೂ ವೇಗದ ಬೌಲರ್‌ ಶಿಖಾ ಪಾಂಡೆ ಮೂರು ಮಾದರಿಯ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಭಾರತ ಮಹಿಳಾ ಕ್ರಿಕೆಟ್‌ ತಂಡಕ್ಕೆ ರಮೇಶ್ ಪೊವಾರ್‌ ಕೋಚ್‌

ಇನ್ನುಳಿದಂತೆ ವಿಕೆಟ್‌ ಕೀಪರ್ ಬ್ಯಾಟರ್‌ ಇದ್ರಾಣಿ ರಾಯ್ ಮೊದಲ ಬಾರಿಗೆ ಟೆಸ್ಟ್‌ ಹಾಗೂ ಏಕದಿನ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ. ಅದರೆ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಗಾಯದ ಸಮಸ್ಯೆಯಿಂದಾಗಿ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

 
ಇನ್ನು ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡವು ಕೊನೆಯಲ್ಲಿ 3 ಪಂದ್ಯಗಳ ಟಿ20 ಸರಣಿಯಾಡಲಿದ್ದು, ಜುಲೈ 09ರಿಂದ ಆರಂಭವಾಗಲಿದೆ.

 

ಟೆಸ್ಟ್ ಹಾಗೂ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ ನೋಡಿ:

ಮಿಥಾಲಿ ರಾಜ್(ನಾಯಕಿ), ಸ್ಮೃತಿ ಮಂಧನಾ, ಹರ್ಮನ್‌ಪ್ರೀತ್ ಕೌರ್(ಉಪನಾಯಕಿ), ಪೂನಂ ರಾವತ್, ಪ್ರಿಯಾ ಪೂನಿಯಾ, ದೀಪ್ತಿ ಶರ್ಮಾ, ಜೆಮಿಯಾ ರೋಡ್ರಿಗಸ್‌, ಶಫಾಲಿ ವರ್ಮಾ, ಸ್ನೆಹ್ ರಾಣಾ, ತಾನಿಯಾ ಭಾಟಿಯಾ(ವಿಕೆಟ್ ಕೀಪರ್), ಇಂದ್ರಾಣಿ ರಾಯ್(ವಿಕೆಟ್ ಕೀಪರ್), ಜೂಲನ್ ಗೋಸ್ವಾಮಿ, ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್, ಅರುಂದತಿ ರೆಡ್ಡಿ, ಪೂನಂ ಯಾದವ್, ಏಕ್ತಾ ಬಿಶ್ತ್, ರಾಧಾ ಯಾದವ್.
 
ಟಿ20 ಸರಣಿಗೆ ಭಾರತ ತಂಡ ಹೀಗಿದೆ ನೋಡಿ:

ಹರ್ಮನ್‌ಪ್ರೀತ್ ಕೌರ್(ನಾಯಕಿ), ಸ್ಮೃತಿ ಮಂಧನಾ(ಉಪನಾಯಕಿ), ದೀಪ್ತಿ ಶರ್ಮಾ, ಜೆಮಿಯಾ ರೋಡ್ರಿಗಸ್, ಶಫಾಲಿ ವರ್ಮಾ, ರಿಚಾ ಘೋಷ್, ಹರ್ಲೀನ್ ಡಿಯೋಲ್, ಸ್ನೆಹ್ ರಾಣಾ, ತಾನಿಯಾ ಭಾಟಿಯಾ(ವಿಕೆಟ್ ಕೀಪರ್), ಇಂದ್ರಾಣಿ ರಾಯ್(ವಿಕೆಟ್ ಕೀಪರ್), ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್, ಅರುಂದತಿ ರೆಡ್ಡಿ, ಪೂನಂ ಯಾದವ್, ಏಕ್ತಾ ಬಿಶ್ತ್, ರಾಧಾ ಯಾದವ್, ಸಿಮ್ರನ್‌ ದಿಲ್ ಬಹುದ್ದೂರ್.