Asianet Suvarna News

ಇಂಗ್ಲೆಂಡ್‌ಗೆ ತಿರುಗೇಟು ನೀಡಲು ಸಜ್ಜಾದ ಮಿಥಾಲಿ ರಾಜ್ ಪಡೆ

* ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡಗಳು ಮುಖಾಮುಖಿ

* ಮೊದಲ ಪಂದ್ಯದಲ್ಲಿ ಇಂಗ್ಲೆಂಡ್‌ ಎದುರು ಆಘಾತಕಾರಿ ಸೋಲು ಕಂಡಿರುವ ಮಿಥಾಲಿ ರಾಜ್ ಪಡೆ

* ಇಂಗ್ಲೆಂಡ್ ಎದುರು ಸರಣಿ ಸೋಲಿನ ಭೀತಿಯಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ

Indian Womens Cricket Team Look to Avoid ODI Series Defeat against England at Taunton kvn
Author
Taunton, First Published Jun 30, 2021, 9:03 AM IST
  • Facebook
  • Twitter
  • Whatsapp

ಟಾಂಟನ್(ಜೂ.30)‌: ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್‌ಗಳ ಸೋಲು ಕಂಡಿದ್ದ ಮಿಥಾಲಿ ಭಾರತ ಮಹಿಳಾ ಕ್ರಿಕೆಟ್ ತಂಡ, ಇಂಗ್ಲೆಂಡ್‌ ವಿರುದ್ಧ ಬುಧವಾರ 2ನೇ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು ಸರಣಿ ಸೋಲು ತಪ್ಪಿಸಿಕೊಳ್ಳಲು ಹೋರಾಡಲಿದೆ. 

ಇಂಗ್ಲೆಂಡ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟರ್‌ಗಳಾದ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಸ್ಪೋಟಕ ಆರಂಭ ಒದಗಿಸುವಲ್ಲಿ ವಿಫಲರಾಗಿದ್ದರು. ಮಿಥಾಲಿ ರಾಜ್ ಹೊರತು ಪಡಿಸಿದಂತೆ ಉಳಿದ್ಯಾವ ಬ್ಯಾಟರ್‌ಗಳು ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ತೋರಲು ಸಫಲರಾಗಿರಲಿಲ್ಲ. ಮಿಥಾಲಿ ಪಡೆ ನೀಡಿದ್ದ ಕೇವಲ 201 ರನ್‌ಗಳ ಗುರಿ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಪಾಲಿಗೆ ಸವಾಲೆನಿಸಲೇ ಇಲ್ಲ. 

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಆತಿಥೇಯ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡವು ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಇನ್ನೊಂದು ಕಡೆ ಮಿಥಾಲಿ ರಾಜ್ ನೇತೃತ್ವದ ಭಾರತ ತಂಡವು ಆತಿಥೇಯರಿಗೆ ತಿರುಗೇಟು ನೀಡುವ ಕನವರಿಕೆಯಲ್ಲಿದೆ. 2022ರ ಏಕದಿನ ವಿಶ್ವಕಪ್‌ಗೆ ತಯಾರಿ ನಡೆಸುತ್ತಿರುವ ಮಿಥಾಲಿ ರಾಜ್‌ ಪಡೆ ಈ ಪಂದ್ಯದಲ್ಲಿ ಸುಧಾರಿತ ಪ್ರದರ್ಶನ ತೋರಬೇಕಿದೆ.

ಮಿಥಾಲಿ ರಾಜ್ ಅರ್ಧಶತಕ ವ್ಯರ್ಥ: ಇಂಗ್ಲೆಂಡ್‌ ಎದುರು ಭಾರತಕ್ಕೆ ಹೀನಾಯ ಸೋಲು

5ನೇ ಸ್ಥಾನಕ್ಕೇರಿದ ಮಿಥಾಲಿ: ಐಸಿಸಿ ಮಹಿಳಾ ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್‌ ಪಟ್ಟಿ ಪರಿಷ್ಕೃತಗೊಂಡಿದ್ದು, ಇಂಗ್ಲೆಂಡ್‌ ವಿರುದ್ಧ ಮೊದಲ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ಮಿಥಾಲಿ ರಾಜ್‌ ಅಗ್ರ 5ರಲ್ಲಿ ಮತ್ತೆ ಸ್ಥಾನ ಪಡೆದಿದ್ದಾರೆ. ಸದ್ಯ ಭಾರತೀಯ ನಾಯಕಿ 5ನೇ ಸ್ಥಾನದಲ್ಲಿದ್ದಾರೆ.

ಪಂದ್ಯ ಆರಂಭ: ಸಂಜೆ 6.30ಕ್ಕೆ
ಸ್ಥಳ: ಟಾಂಟನ್

Follow Us:
Download App:
  • android
  • ios