* ಇಂದೋರ್ ಟೆಸ್ಟ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ* ಲಂಚ್ ಬ್ರೇಕ್‌ಗೂ ಮುನ್ನ 7 ವಿಕೆಟ್ ಕಳೆದುಕೊಂಡ ಭಾರತ ಕ್ರಿಕೆಟ್ ತಂಡ* ಎಲ್ಲರ ಚಿತ್ತ ಆಲ್ರೌಂಡರ್‌ಗಳಾದ ರವಿಚಂದ್ರನ್ ಅಶ್ವಿನ್-ಅಕ್ಷರ್ ಪಟೇಲ್‌ರತ್ತ

ಇಂದೋರ್(ಮಾ.01): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿರುವ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿದೆ. ಆಸೀಸ್‌ ಸ್ಪಿನ್ ಜಾಲಕ್ಕೆ ಸಿಲುಕಿರುವ ಟೀಂ ಇಂಡಿಯಾ ಮೊದಲ ದಿನದಾಟದ ಲಂಚ್ ಬ್ರೇಕ್ ವೇಳೆಗೆ 7 ವಿಕೆಟ್‌ ಕಳೆದುಕೊಂಡು 84 ರನ್ ಬಾರಿಸಿದ್ದು, ಇದೀಗ ಎಲ್ಲರ ಚಿತ್ತ ರವಿಚಂದ್ರನ್ ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ಮೇಲಿದೆ.

ಹೌದು, ಇಲ್ಲಿನ ಹೋಳ್ಕರ್ ಮೈದಾನದಲ್ಲಿ ಆರಂಭವಾದ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಮೊದಲ ಓವರ್‌ನಲ್ಲಿ ಸಿಕ್ಕಿದ ಎರಡು ಜೀವದಾನವನ್ನು ಸದುಪಯೋಗ ಪಡಿಸಿಕೊಳ್ಳಲು ರೋಹಿತ್ ಶರ್ಮಾ ವಿಫಲರಾದರು. ಮೊದಲೆರಡು ಟೆಸ್ಟ್ ಪಂದ್ಯದಲ್ಲಿ ಜವಾಬ್ದಾರಿಯಾಟವಾಡಿದ್ದ ನಾಯಕ ರೋಹಿತ್, ಇದೀಗ ಮೂರನೇ ಟೆಸ್ಟ್ ಪಂದ್ಯದಲ್ಲಿ 23 ಎಸೆತಗಳನ್ನು ಎದುರಿಸಿ ಕೇವಲ 12 ರನ್ ಗಳಿಸಿ ಸ್ಟಂಪೌಟ್‌ ಆಗುವ ಮೂಲಕ ನಿರಾಸೆ ಅನುಭವಿಸಿದರು. ಇನ್ನು ಇದರ ಬೆನ್ನಲ್ಲೇ ಕೆ ಎಲ್ ರಾಹುಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ಶುಭ್‌ಮನ್ ಗಿಲ್(21) ಕೂಡಾ ರೋಹಿತ್ ಹಾದಿಯನ್ನೇ ಹಿಂಬಾಲಿಸಿದರು.

ಇನ್ನು ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಕೇವಲ ಒಂದು ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ರವೀಂದ್ರ ಜಡೇಜಾ 4 ರನ್ ಬಾರಿಸಿ ನೇಥನ್ ಲಯನ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಮಧ್ಯಮ ಕ್ರಮಾಂಕದ ನಂಬಿಗಸ್ಥ ಬ್ಯಾಟರ್ ಎನಿಸಿಕೊಂಡಿರುವ ಶ್ರೇಯಸ್ ಅಯ್ಯರ್ ಖಾತೆ ತೆರೆಯುವ ಮುನ್ನವೇ ಪೆವಿಲಿಯನ್‌ ಸೇರಿದರು.

Scroll to load tweet…

ವಿರಾಟ್-ಭರತ್ ಆಸರೆ: ಕೇವಲ 45 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದ ಟೀಂ ಇಂಡಿಯಾಗೆ 6ನೇ ವಿಕೆಟ್‌ಗೆ ವಿರಾಟ್ ಕೊಹ್ಲಿ ಹಾಗೂ ಶ್ರೀಕರ್ ಭರತ್ 25 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಎಚ್ಚರಿಯ ಬ್ಯಾಟಿಂಗ್ ನಡೆಸುವ ಯತ್ನ ನಡೆಸಿದ ವಿರಾಟ್ ಕೊಹ್ಲಿ 52 ಎಸೆತಗಳನ್ನು ಎದುರಿಸಿ ಎರಡು ಬೌಂಡರಿ ಸಹಿತ 22 ರನ್ ಬಾರಿಸಿ ಮೂರನೇ ಬಾರಿಗೆ ಈ ಸರಣಿಯಲ್ಲಿ ಟೋಡ್‌ ಮರ್ಫಿಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಶ್ರೀಕರ್ ಭರತ್ ಕೂಡಾ 17 ರನ್ ಬಾರಿಸಿ ನೇಥನ್ ಲಯನ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.

Eng vs NZ ಫಾಲೋ-ಆನ್‌ಗೆ ತುತ್ತಾದರೂ 1 ರನ್‌ನಿಂದ ಗೆದ್ದ ನ್ಯೂಜಿಲೆಂಡ್..!

ಆಶ್ವಿನ್‌-ಅಕ್ಷರ್ ಮೇಲೆ ಎಲ್ಲರ ಚಿತ್ತ: ಮೊದಲೆರಡು ಟೆಸ್ಟ್‌ ಪಂದ್ಯದಲ್ಲಿ ಕೆಳ ಕ್ರಮಾಂಕದಲ್ಲಿ ದಿಟ್ಟ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾಗಿದ್ದ ರವಿಚಂದ್ರನ್ ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಅಕ್ಷರ್ ಪಟೇಲ್ 13 ಹಾಗೂ ರವಿಚಂದ್ರನ್ ಅಶ್ವಿನ್ ಒಂದು ರನ್ ಗಳಿಸಿ ಕ್ರೀಸ್‌ ಕಾಯ್ದುಕೊಂಡಿದ್ದಾರೆ.