Asianet Suvarna News Asianet Suvarna News

ಆಸ್ಟ್ರೇಲಿಯಾ ವಿರುದ್ದ ಟಾಸ್ ಗೆದ್ದ ಭಾರತ, ವಿಶ್ವಕಪ್ ಫೈನಲ್ ಬಳಿಕ ಟಿ20 ಮುಖಾಮುಖಿ!

ವಿಶ್ವಕಪ್ ಫೈನಲ್ ಬಳಿಕ ಮತ್ತೆ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗುತ್ತಿದೆ. ಇಂದಿನಿಂದ ಟಿ20 ಸರಣಿ ಆರಂಭಗೊಳ್ಳುತ್ತಿದೆ. ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
 

INDvAUS Team India win toss and chose bowl first against Australia in 1st T20 ckm
Author
First Published Nov 23, 2023, 6:35 PM IST

ವಿಶಾಖಪಟ್ಟಣಂ(ನ.23) ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಿತ್ತು. ಈ ಪಂದ್ಯ ನಡೆದ ನಾಲ್ಕೇ ದಿನಕ್ಕೆ ಇದೀಗ ಮತ್ತೆ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಿದೆ. ಆದರೆ ಇದು ಟಿ20 ಸರಣಿ. 5 ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭಗೊಂಡಿದೆ. ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 

ಟೀಂ ಇಂಡಿಯಾ ಪ್ಲೇಯಿಂಗ್ 11
ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಶ್ನೋಯ್, ಅರ್ಶದೀಪ್ ಸಿಂಗ್, ಮುಕೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ

ವಿಶ್ವಕಪ್ ಸೋಲಿನ ಬೆನ್ನಲ್ಲೇ ಮತ್ತೊಂದು ಶಾಕ್, ಟಿ20 ಕ್ರಿಕೆಟ್‌ಗೆ ರೋಹಿತ್ ಶರ್ಮಾ ವಿದಾಯ ಸಾಧ್ಯತೆ!

ಆಸ್ಟ್ರೇಲಿಯಾ ಪ್ಲೇಯಿಂಗ್ 11
ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಜೋಶ್ ಇಂಗ್ಲಿಸ್, ಆ್ಯರೋನ್ ಹಾರ್ಡಿ, ಮಾರ್ಕಸ್ ಸ್ಟೊಯ್ನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್, ಸೀನ್ ಅಬಾಟ್, ನತನ್ ಎಲ್ಲಿಸ್, ಜೇಸನ್ ಬೆಹೆನಡ್ರಾಫ್, ಟನ್ವೀರ್ ಸಂಘಾ

ವಿಶ್ವಕಪ್ ಟೂರ್ನಿ ಬೆನ್ನಲ್ಲೇ ಹಲವರಿಗೆ ವಿಶ್ರಾಂತಿ ಹಾಗೂ ಹಾರ್ದಿಕ್ ಪಾಂಡ್ಯ ಇಂಜುರಿಗೆ ತುತ್ತಾಗಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಟೀಂ ಇಂಡಿಯಾ ಮುನ್ನಡೆಸುತ್ತಿದ್ದಾರೆ 

ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಹಿರಿಯ ಕ್ರಿಕೆಟಿಗರಿಗೆ ವಿಶ್ರಾಂತಿ ನೀಡಲಾಗಿದೆ. ನವೆಂಬರ್ 2022ರಿಂದ ರೋಹಿತ್ ಶರ್ಮಾ ಟಿ20 ಮಾದರಿಯಲ್ಲಿ ಕಾಣಿಸಿಕೊಂಡಿಲ್ಲ. ಇತ್ತ ಟಿ20 ಮಾದರಿಯಲ್ಲಿ ಟೀಂ ಇಂಡಿಯಾ ಮುನ್ನಡೆಸುತ್ತಿದ್ದ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಲ್ಲಿ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್‌ಗೆ ಟಿ20 ನಾಯಕತ್ವ ನೀಡಲಾಗಿದೆ.

ಐಪಿಎಲ್‌ ಇತಿಹಾಸದ ಅತಿದೊಡ್ಡ 'ಕ್ಯಾಪ್ಟನ್‌' ಟ್ರೇಡಿಂಗ್‌, ಗುಜರಾತ್‌ಗೆ ರೋಹಿತ್‌, ಮುಂಬೈಗೆ ಹಾರ್ದಿಕ್‌ ಪಾಂಡ್ಯ?

ಭಾರತ ಹಾಗೂ ಆಸ್ಟ್ರೇಲಿಯಾ 5 ಪಂದ್ಯಗಳ ಟಿ20 ಸರಣಿ ಆಡಲಿದೆ. ಇಂದಿನ ಟಿ20 ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ನವೆಂಬರ್ 26 ರಂದು ತಿರುವಂತಪುರಂನಲ್ಲಿ 2ನೇ ಟಿ20 ಪಂದ್ಯ ನಡೆಯಲಿದೆ. ಮೂರನೇ ಟಿ20 ಪಂದ್ಯ ನವೆಂಬರ್ 28 ರಂದು ಗುವ್ಹಾಟಿಯಲ್ಲಿ ಆಯೋಜಿಸಲಾಗಿದೆ. ಇನ್ನು ಅಂತಿಮ 2 ಟಿ20 ಪಂದ್ಯದ ಸ್ಥಳ ಬದಲಾಯಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿ ಪ್ರಕಾರ, ಡಿಸೆಂಬರ್ 1 ರಂದು ನಡೆಯಲಿರುವ 4ನೇ ಟಿ20 ಪಂದ್ಯವನ್ನು ರಾಯ್‌ಪುರದಲ್ಲಿ ಆಯೋಜಿಸಲಾಗಿದೆ. ಇನ್ನ ಕೊನೆಯ ಹಾಗೂ 5ನೇ ಟಿ20 ಪಂದ್ಯ ಡಿಸೆಂಬರ್ 3 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. 
 

Latest Videos
Follow Us:
Download App:
  • android
  • ios