Asianet Suvarna News Asianet Suvarna News

INDvsENG ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾದಲ್ಲಿ ನಾಲ್ವರು ವೇಗಿಗಳಿಗೆ ಸ್ಥಾನ!

  • ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ
  • ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್
  • ಭಾರತ ತಂಡದಲ್ಲಿ ನಾಲ್ವರು ವೇಗಿಗಳಿಗೆ ಸ್ಥಾನ
     
INDvsENG England won toss and opted to bat first againsit Teamindia in trent bridge ckm
Author
Bengaluru, First Published Aug 4, 2021, 3:11 PM IST
  • Facebook
  • Twitter
  • Whatsapp

ನಾಟಿಂಗ್‌ಹ್ಯಾಮ್(ಆ.04): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಆರಂಭಗೊಂಡಿದೆ. ಜಿದ್ದಾಜಿದ್ದಿನ ಹೋರಾಟಕ್ಕೆ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣ ಸಾಕ್ಷಿಯಾಗಲಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಟೀಂ ಇಂಡಿಯಾದಲ್ಲಿ ಶಾರ್ದೂಲ್ ಠಾಕೂರ್‌ಗೆ ಸ್ಥಾನ ನೀಡಲಾಗಿದೆ. ಇನ್ನು ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ ಸಿರಾಜ್ ಸ್ಥಾನ ಪಡೆದಿದ್ದಾರೆ. ಈ ಮೂಲಕ ನಾಲ್ವರು ವೇಗಿಗಳನ್ನು ಕಣಕ್ಕಿಲಿಸಲಾಗಿದೆ. ಸ್ಪಿನ್ ಕೋಟಾ ಹಾಗೂ ಆಲ್ರೌಂಡರ್ ಕೋಟಾದಲ್ಲಿ ರವೀಂದ್ರ ಜಡೇಜಾ ಸ್ಥಾನ ಪಡೆದಿದ್ದಾರೆ. 

ಟೀಂ ಇಂಡಿಯಾ ಪ್ಲೇಯಿಂಗ್ 11:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ರಿಷಬ್ ಪಂತ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಇಂಗ್ಲೆಂಡ್ ತಂಡ:
ಜೋ ರೂಟ್(ನಾಯಕ), ರೋರಿ ಬರ್ನ್ಸ್, ಡೋಮಿನಿಕ್ ಸಿಬ್ಲೆ, ಜ್ಯಾಕ್ ಕ್ರಾವ್ಲೆ, ಜಾನಿ ಬೈರ್‌ಸ್ಟೋ, ಡೆನಿಯಲ್ ಲಾರೆನ್ಸ್, ಜೋ ಬಟ್ಲರ್, ಸ್ಯಾಮ್ ಕುರನ್, ಒಲ್ಲಿ ರೋಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆ್ಯಂಡರ್ಸನ್
 

Follow Us:
Download App:
  • android
  • ios