Asianet Suvarna News Asianet Suvarna News

INDvsENG 2ನೇ ಟೆಸ್ಟ್; 364 ರನ್‌ಗೆ ಟೀಂ ಇಂಡಿಯಾ ಆಲೌಟ್!

  • ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್
  • ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ದಿಟ್ಟ ಬ್ಯಾಟಿಂಗ್ ಪ್ರದರ್ಶನ
  • 364 ರನ್ ಸಿಡಿಸಿ ಟೀಂ ಇಂಡಿಯಾ ಆಲೌಟ್
INDvsENG team india set 364 runs in 1st innings against england in lords test ckm
Author
Bengaluru, First Published Aug 13, 2021, 7:10 PM IST
  • Facebook
  • Twitter
  • Whatsapp

ಲಂಡನ್(ಆ.13): ಇಂಗ್ಲೆಂಡ್ ವಿರುದ್ದದ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ‌ನಲ್ಲಿ ಟೀಂ ಇಂಡಿಯಾ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಕೆಎಲ್ ರಾಹುಲ್ ಆಕರ್ಷಕ ಶತಕ, ರೋಹಿತ್ ಶರ್ಮಾ ಹಾಫ್ ಸೆಂಚುರಿ, ನಾಯಕ ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಹೋರಾಟದಿಂದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 364 ರನ್‌ ಸಿಡಿಸಿದೆ

ಆ್ಯಂಡರ್‌ಸನ್ ಮಾರಕ ದಾಳಿ: ಟೀಂ ಇಂಡಿಯಾ ದಿಢೀರ್ ಕುಸಿತ..!

ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾದ ಕೆಎಲ್ ರಾಹುಲ್ ಆಕರ್ಷಕ ಶತಕ ಸಿಡಿಸಿ ಮಿಂಚಿದರೆ, ರೋಹಿತ್ ಶರ್ಮಾ 83 ರನ್ ಕಾಣಿಕೆ ನೀಡಿದರು. ನಾಯಕ ವಿರಾಟ್ ಕೊಹ್ಲಿ 42 ರನ್ ಸಿಡಿಸಿದರೆ, ರಿಷಬ್ ಪಂತ್ 37 ರನ್ ಸಿಡಿಸಿದರು. ರವೀಂದ್ರ ಜಡೇಜಾ 40 ರನ್ ಸಿಡಿಸಿದರು. ಪರಿಣಾಮ ಟೀಂ ಇಂಡಿಯಾ 364 ರನ್ ಸಿಡಿಸಿ ಆಲೌಟ್ ಆಯಿತು.

ಇಂಗ್ಲೆಂಡ್ ಪರ ಜೇಮ್ಸ್ ಆ್ಯಂಡರ್ಸನ್ 5 ವಿಕೆಟ್ ಕಬಳಿಸಿ ಮಿಂಚಿದರು. ಒಲಿ ರಾಬಿನ್ಸನ್ ಹಾಗೂ ಮಾರ್ಕ್ ವುಡ್ ತಲಾ 2 ವಿಕೆಟ್ ಕಬಳಿಸಿದರೆ, ಮೊಯಿನ್ ಆಲಿ 1 ವಿಕೆಟ್ ಉರುಳಿಸಿದರು.

ಲಾರ್ಡ್ಸ್ ಮೈದಾನದಲ್ಲಿ ಕೆಎಲ್ ರಾಹುಲ್ ಆಕರ್ಷಕ ಶತಕ

2ನೇ ಟೆಸ್ಟ್ ಪಂದ್ಯದ ಆರಂಭಕ್ಕೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ಪಂದ್ಯ ವಿಳಂಬವಾಗಿ ಆರಂಭಗೊಂಡಿತ್ತು. ಮೊದಲ ಟೆಸ್ಟ್ ಪಂದ್ಯ ಮಳೆಯಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿತ್ತು. ಇದು ಟೀಂ ಇಂಡಿಯಾಗೆ ತೀವ್ರ ನಿರಾಸೆಯಾಗಿತ್ತು. ಆದರೆ ಸೋಲಿನ ದವಡೆಯಿಂದ ಇಂಗ್ಲೆಂಡ್ ಪಾರಾಗಿತ್ತು.

Follow Us:
Download App:
  • android
  • ios