ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಸೋಲಿನ ಸುಳಿಯಲ್ಲಿ ಇಂಗ್ಲೆಂಡ್ ಭಾರತದಲ್ಲಿ ದಾಳಿಗೆ 5 ವಿಕೆಟ್ ಪತನ, ಸಂಕಷ್ಟದಲ್ಲಿ ರೂಟ್ ಸೈನ್ಯ ಅಂತಿಮ ಕ್ಷಣದಲ್ಲಿ ನಡೆಯುತ್ತಾ ಮ್ಯಾಜಿಕ್?
ಲಂಡನ್(ಆ.16): ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸಂಪೂರ್ಣ ಹಿಡಿತ ಸಾಧಿಸಿದೆ. ಅಂತಿಮ ದಿನದಾಟದಲ್ಲಿ ಇಂಗ್ಲೆಂಡ್ ಲೆಕ್ಕಾಚಾರ ಸಂಪೂರ್ಣ ಉಲ್ಟಾ ಆಗಿದೆ. ದಿಟ್ಟ ಬ್ಯಾಟಿಂಗ್ ಪ್ರದರ್ಶನದ ಬಳಿಕ ಟೀಂ ಇಂಡಿಯಾ ಬೌಲಿಂಗ್‌ನಲ್ಲೂ ಉತ್ತಮ ಪ್ರದರ್ಶನ ನೀಡಿದೆ. ಇದೀಗ ಇಂಗ್ಲೆಂಡ್ ಸೋಲಿನ ಸುಳಿಗೆ ಸಿಲುಕಿದೆ.
ಅಂತಿಮ ದಿನದಲ್ಲಿ ರೋಚಕ ಘಟ್ಟದತ್ತ ಲಾರ್ಡ್ಸ್ ಟೆಸ್ಟ್, ಭಾರತದ ದಾಳಿಗೆ ಕುಸಿದ ಇಂಗ್ಲೆಂಡ್!
ದ್ವಿತೀಯ ಇನ್ನಿಂಗ್ಸ್‌ನಲ್ಲಿ 272 ರನ್ ಟಾರ್ಗೆಟ್ ಪಡೆದ ಇಂಗ್ಲೆಂಡ್‌ಗೆ ಟೀಂ ಇಂಡಿಯಾ ಬೌಲರ್ಸ್ ಶಾಕ್ ನೀಡಿದರು. ರೋರಿ ಬರ್ನ್ಸ್ ಹಾಗೂ ಡೋಮಿನಿಕ್ ಸಿಬ್ಲೆ ಶೂನ್ಯಕ್ಕೆ ಔಟಾದರು. ಹಸೀಬ್ ಹಮೀದ್ ಕೇವಲ 9 ರನ್ ಸಿಡಿಸಿ ನಿರ್ಗಮಿಸಿದರು. ಆದರೆ ನಾಯಕ ಜೋ ರೂಟ್ ಇಂಗ್ಲೆಂಡ್ ತಂಡಕ್ಕೆ ಆಸರೆಯಾದರು.
ಟೀಂ ಇಂಡಿಯಾ ವಿರುದ್ಧ ಪಂದ್ಯ ಗೆಲ್ಲಲು ಬಾಲ್ ಟ್ಯಾಂಪರ್ ಮಾಡಿತಾ ಇಂಗ್ಲೆಂಡ್?
ಜೋ ರೂಟ್ ಹಾಗೂ ಜಾನಿ ಬೈರ್‌ಸ್ಟೋ ಜೊತೆಯಾಟ ಇಂಗ್ಲೆಂಡ್ ತಂಡದಲ್ಲಿ ಕೊಂಚ ಸಮಾಧಾನ ತಂದಿತ್ತು. ಆದರೆ ಬೈರ್‌ಸ್ಟೋ 2 ರನ್ ಸಿಡಿಸಿ ಔಟಾದರು. ಕೊಂಚ ಹೋರಾಟ ನೀಡಿದ ರೂಟ್ 33 ರನ್ ಸಿಡಿಸಿ ಔಟಾದರು. ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದ್ದ ರೂಟ್ ಸಂಕಷ್ಟದಲ್ಲಿ ತಂಡಕ್ಕೆ ನೆರವಾಗಲಿಲ್ಲ.
ಟೀಂ ಇಂಡಿಯಾ ಪರ ಆಡಲು ಮೈದಾನಕ್ಕಿಳಿದ ಇಂಗ್ಲೆಂಡ್ ಅಭಿಮಾನಿ; ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ!
ಜೋಸ್ ಬಟ್ಲರ್ ಹಾಗೂ ಮೊಯಿನ್ ಆಲಿ ಬ್ಯಾಟಿಂಗ್ ಮೇಲೆ ಇಂಗ್ಲೆಂಡ್ ತಂಡದ ಫಲಿತಾಂಶ ನಿರ್ಧಾರವಾಗಲಿದೆ. 67 ರನ್‌ಗೆ ಇಂಗ್ಲೆಂಡ್ ತಂಡದ 5 ವಿಕೆಟ್ ಪತನಗೊಂಡಿದೆ. ಇನ್ನುಳಿದ 5 ವಿಕೆಟ್ ಕಬಳಿಸಲು ಟೀಂ ಇಂಡಿಯಾ ಸಜ್ಜಾಗಿದೆ.
ಭಾರತ 2ನೇ ಇನ್ನಿಂಗ್ಸ್:
ಟೀಂ ಇಂಡಿಯಾ ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಹಿಡಿತ ಸಾಧಿಸಲು 2ನೇ ಇನ್ನಿಂಗ್ಸ್ ಪ್ರಮುಖ ಕಾರಣವಾಗಿದೆ. ಅದರಲ್ಲೂ ಮೊಹಮ್ಮದ್ ಶಮಿ ಸಿಡಿಸಿದ ಅರ್ಧಶತಕ ಹಾಗೂ ಜಸ್ಪ್ರೀತ್ ಬುಮ್ರಾ ಸಿಡಿಸಿದ 34 ರನ್ ನೆರವಿನಿಂದ ಟೀಂ ಇಂಡಿಯಾ 298 ರನ್ ಸಿಡಿಸಿ ಡಿಕ್ಲೇರ್ ಘೋಷಿಸಿತು.
ಕೆಎಲ್ ರಾಹುಲ್ ಮೇಲೆ ಬಿಯರ್ ಬಾಟಲಿ ಕಾರ್ಕ್ ಎಸೆತ; ಇಂಗ್ಲೆಂಡ್ ಅಭಿಮಾನಿಗಳ ವರ್ತನೆಗೆ ಆಕ್ರೋಶ!
ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 364 ರನ್ ಸಿಡಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಇಂಗ್ಲೆಂಡ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 391 ರನ್ ಸಿಡಿಸಿತ್ತು. ಈ ಮೂಲಕ ಇಂಗ್ಲೆಂಡ್ 27 ರನ್ ಮುನ್ನಡೆ ಪಡೆದುಕೊಂಡಿತ್ತು. ಆದರೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಸೋಲಿನ ಸುಳಿಗೆ ಸಿಲುಕಿದೆ.
