ಅಹಮ್ಮದಾಬಾದ್(ಮಾ.14):  ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಸೋಲಿನಿಂದ ನಿರಾಸೆಗೊಂಡಿರುವ ಟೀಂ ಇಂಡಿಯಾ ಇದೀಗ ಗೆಲುವಿಗಾಗಿ 2 ಬದಲಾವಣೆ ಮಾಡಿದೆ. 

 

ಶಿಖರ್ ಧವನ್ ಹಾಗೂ ಅಕ್ಸರ್ ಪಟೇಲ್‌ಗೆ ವಿಶ್ರಾಂತಿ ನೀಡಲಾಗಿದೆ. ಇವರ ಬದಲು ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ತಂಡ ಸೇರಿಕೊಂಡಿದ್ದಾರೆ. ಈ ಮೂಲಕ ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಟೀಂ ಇಂಡಿಯಾಗೆ ಪದಾರ್ಪಣೆ ಮಾಡುತ್ತಿದ್ದಾರೆ.

ಇಂಗ್ಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಮಾರ್ಕ್ ವುಡ್ ಬದಲು ಟಾಮ್ ಕುರನ್ ತಂಡ ಸೇರಿಕೊಂಡಿದ್ದಾರೆ. 5 ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 1-0 ಮುನ್ನಡೆ ಸಾಧಿಸಿದೆ.