ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ಇಶಾನ್ ಕಿಶಾನ್, ಸೂರ್ಯಕುಮಾರ್ ಯಾದವ್ ಪದಾರ್ಪಣೆ ಪದಾರ್ಪಣೆಯಲ್ಲಿ ಇತಿಹಾಸ ನಿರ್ಮಿಸಿದ ಇಶಾನ್ ಕಿಶನ್
ಕೊಲೊಂಬೊ(ಜು.18): ಭಾರತ ಹಾಗೂ ಶ್ರೀಲಂಕಾ ನಡುವಿನ ಏಕದಿನ ಸರಣಿ ಆರಂಭಗೊಂಡಿದೆ. ಕೊಲೊಂಬೊದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದ ಮೂಲಕ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ್ದಾರೆ.
ಐಸಿಸಿ ಟಿ20 ವಿಶ್ವಕಪ್: ಒಂದೇ ಗುಂಪಿನಲ್ಲಿ ಸ್ಥಾನ ಪಡೆದ ಭಾರತ-ಪಾಕಿಸ್ತಾನ..!
ಶಿಖರ್ ಧವನ್ ನಾಯಕತ್ವದ ಟೀಂ ಇಂಡಿಯಾ ಮೊದಲ ಏಕದಿನದಲ್ಲಿ ಹಲವು ವಿಶೇಷ ಕ್ಷಣಗಳಿಗೆ ಸಾಕ್ಷಿಯಾಗಿದೆ. ಭಾರತದ ದೇಶಿ ಕ್ರಿಕೆಟ್ ಹಾಗೂ ಐಪಿಎಲ್ ಟೂರ್ನಿಯಲ್ಲಿ ಮಿಂಚಿನ ಪ್ರದರ್ಶನ ನೀಡಿರುವ ಇಶಾನ್ ಕಿಶನ್ ತಮ್ಮ ಹುಟ್ಟು ಹಬ್ಬದ ದಿನವೇ ಟೀಂ ಇಂಡಿಯಾಗೆ ಡೆಬ್ಯೂ ಮಾಡಿದ್ದಾರೆ.
ಜುಲೈ 18, 1998ರಲ್ಲಿ ಹುಟ್ಟಿದ ಕಿಶನ್ ತಮ್ಮ 23ನೇ ವಯಸ್ಸಿಗೆ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ್ದಾರೆ. ಈ ಮೂಲಕ ಬರ್ತ್‌ಡೆ ದಿನ ಪದಾರ್ಪಣೆ ಮಾಡಿದ 2ನೇ ಭಾರತೀಯ ಕ್ರಿಕೆಟಿಗ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಿಶನ್‌ಗೂ ಮೊದಲು ಗುರುಶರನ್ ಸಿಂಗ್ ತಮ್ಮ 27ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ಟೀಂ ಇಂಡಿಯಾಗೆ ಡೆಬ್ಯೂ ಮಾಡಿದ್ದರು.
1990ರಲ್ಲಿ ಗುರುಶರನ್ ಸಿಂಗ್ ಆಸ್ಟ್ರೇಲಿಯಾ ವಿರುದ್ದ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದರು. ಆದರೆ ಗುರಶರನ್ ಕೇವಲ ಒಂದೇ ಏಕದಿನ ಪಂದ್ಯ ಆಡಿ ವೃತ್ತಿಪರ ಕ್ರಿಕೆಟ್‌ನಿಂದ ಮರೆಯಾದರು.
ಕುಲ್ಚಾ ಜೋಡಿ:
ಕುಲ್ದೀಪ್ ಯಾದವ್ ಹಾಗೂ ಯಜುವೇಂದ್ರ ಚಹಾಲ್ ಜೋಡಿ ಬರೋಬ್ಬರಿ 2 ವರ್ಷಗಳ ಬಳಿಕ ಜೊತೆಯಾಗಿ ಕಣಕ್ಕಿಳಿದಿದ್ದಾರೆ. 2019ರ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ದ ಜೊತೆಯಾಗಿ ಕಣಕ್ಕಿಳಿದ ಈ ಜೋಡಿ ಬಳಿಕ ಇದೇ ಮೊದಲ ಬಾರಿ ಅಖಾಡಕ್ಕೆ ಇಳಿದಿದ್ದಾರೆ.
