3 ಪಂದ್ಯಗಳ ಟಿ20 ಸರಣಿಗೆ ಸಜ್ಜಾದ ಭಾರತ-ಶ್ರೀಲಂಕಾ ನಾಳೆಯಿಂದ ಆರಂಭಗೊಳ್ಳಲಿದೆ ಟಿ20 ಸರಣಿ ಟೀಂ ಇಂಡಿಯಾ ಸಂಭವನೀಯ ಪ್ಲೇಯಿಂಗ್ ಇಲ್ಲಿದೆ

ಕೊಲೊಂಬೊ(ಜು.24): ಭಾರತ ಹಾಗೂ ಶ್ರೀಲಂಕಾ ನಡುವಿನ ಏಕದಿನ ಸರಣಿ ಅಂತ್ಯಗೊಂಡಿದೆ. 2-1 ಅಂತರದಿಂದ ಟೀಂ ಇಂಡಿಯಾ ಏಕದಿನ ಸರಣಿ ವಶಪಡಿಸಿಕೊಂಡಿದೆ. ಇದೀಗ ಟಿ20 ಸರಣಿ ಕೈವಶ ಮಾಡಲು ಟೀಂ ಇಂಡಿಯಾ ಸಜ್ಜಾಗಿದೆ. ನಾಳೆ(ಜು.25) ಮೊದಲ ಟಿ20 ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾ ಬಲಿಷ್ಠ ತಂಡ ಕಣಕ್ಕಿಳಿಸಲು ನಿರ್ಧರಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

INDvSL; 3ನೇ ಏಕದಿನ ಗೆದ್ದು ಕ್ಲೀನ್ ಸ್ವೀಪ್ ಮುಖಭಂಗ ತಪ್ಪಿಸಿದ ಶ್ರೀಲಂಕ!

ಶಿಖರ್ ಧವನ್ ನಾಯಕತ್ವದ ಟಿ20 ತಂಡದಲ್ಲಿ ವೇಗಿ ಭುವನೇಶ್ವರ್ ಕುಮಾರ್ ಕಮ್‌‌ಬ್ಯಾಕ್ ಮಾಡುವ ಸಾಧ್ಯತೆ ಇದೆ. ಇನ್ನು ಪೃಥ್ವಿ ಶಾ ಟಿ20 ಮಾದರಿಗ ಪದಾರ್ಪಣೆ ಮಾಡುವ ಸಾಧ್ಯತೆ ಇದೆ.

ಸಂಭವನೀಯ ಪ್ಲೇಯಿಂಗ್ 11:
ಶಿಖರ್ ಧವನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಕ್ರುನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ರಾಹುಲ್ ಚಹಾರ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್

ಭಾರತ-ಶ್ರೀಲಂಕಾ ಟಿ20 ಸರಣಿ ವೇಳಾಪಟ್ಟಿ
ಜೂನ್ 25, 1ನೇ ಟಿ20 ಪಂದ್ಯ, ಕೊಲೊಂಬೊ
ಜೂನ್ 27, 2ನೇ ಟಿ20 ಪಂದ್ಯ, ಕೊಲೊಂಬೊ
ಜೂನ್ 29, 3ನೇ ಟಿ20 ಪಂದ್ಯ, ಕೊಲೊಂಬೊ