ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಟಿ20 ಪದಾರ್ಪಣಾ ಪಂದ್ಯದಲ್ಲಿ ಪೃಥ್ವಿ ಶಾಗೆ ನಿರಾಸೆ ಭಾರತದ ಮೊದಲ ವಿಕೆಟ್ ಪತನ

ಕೊಲೊಂಬೊ(ಜು.25): ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ಆರಂಭದಲ್ಲೇ ಜಿದ್ದಾಜಿದ್ದಿನ ಹೋರಾಟ ಏರ್ಪಟ್ಟಿದೆ. ಟೀಂ ಇಂಡಿಯಾ ಟಿ20 ತಂಡಕ್ಕೆ ಪದಾರ್ಪಣಾ ಮಾಡಿದ ಪೃಥ್ವಿ ಶಾ ಮೊದಲ ಪಂದ್ಯದಲ್ಲೇ ನಿರಾಸೆ ಅನುಭವಿಸಿದ್ದಾರೆ. ಪೃಥ್ವಿ ಶಾ ಡಕೌಟ್‌ ಆಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

INDvSL ಟಿ20: ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ!

ಟಾಸ್ ಸೋತು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಮೊದಲ ಎಸೆತದಲ್ಲೇ ಶಾ ವಿಕೆಟ್ ಪತನಗೊಂಡಿದೆ. ಈ ಮೂಲಕ ಪದಾರ್ಪಣಾ ಪಂದ್ಯದ ಮೊದಲ ಎಸೆತದಲ್ಲಿ ವಿಕೆಟ್ ಕೈಚೆಲ್ಲಿದ ಅಪಖ್ಯಾತಿಗೆ ಗುರಿಯಾಗಿದ್ದಾರೆ.

ನಾಯಕ ಶಿಖರ್ ಧವನ್ ಹಾಗೂ ಸಂಜು ಸ್ಯಾಮ್ಸನ್ ಮೇಲೆ ಒತ್ತಡ ಹೆಚ್ಚಾಗಿದೆ. ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನಕ್ಕೆ ಮುಂದಾಗಿದ್ದಾರೆ.