ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ಗೆ ಮುನ್ನ ಭಾರತ ತಂಡ ಗಾಯದ ಸಮಸ್ಯೆಗಳನ್ನು ಎದುರಿಸುತ್ತಿದೆ. ನಿತೀಶ್ ಕುಮಾರ್ ರೆಡ್ಡಿ, ಅರ್ಶ್‌ದೀಪ್ ಸಿಂಗ್ ಮತ್ತು ಆಕಾಶ್ ದೀಪ್ ಗಾಯಗೊಂಡಿದ್ದಾರೆ. ಬದಲಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗುತ್ತಿದೆ.
ಮ್ಯಾಂಚೆಸ್ಟರ್: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ಗೆ ಸಜ್ಜಾಗುತ್ತಿರುವ ಭಾರತ ತಂಡಕ್ಕೆ ಆಟಗಾರರ ಗಾಯದ ಆತಂಕ ಮನೆಮಾಡಿದೆ. ಗಾಯಗೊಂಡಿರುವ ನಿತೀಶ್ ಕುಮಾರ್ ರೆಡ್ಡಿ ಮತ್ತು ಅಭ್ಯಾಸದ ವೇಳೆ ಗಾಯಗೊಂಡ ಅರ್ಶ್‌ದೀಪ್ ಸಿಂಗ್ ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ ಆಡುವುದಿಲ್ಲ ಎಂದು ಭಾರತ ತಂಡದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಇದಲ್ಲದೆ, ಎಜ್‌ಬಾಸ್ಟನ್ ಟೆಸ್ಟ್‌ನಲ್ಲಿ 10 ವಿಕೆಟ್ ಪಡೆದು ಮಿಂಚಿದ್ದ ವೇಗಿ ಆಕಾಶ್ ದೀಪ್ ಕೂಡ ಗಾಯಗೊಂಡಿದ್ದಾರೆ. ಹೀಗಾಗಿ ಜುಲೈ 23ರಿಂದ ಆರಂಭವಾಗಲಿರುವ ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ ಭಾರತಕ್ಕೆ ಮೂವರು ಆಟಗಾರರು ಆಡೋದು ಡೌಟ್ ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ. ಇಬ್ಬರು ವೇಗಿಗಳು ಗಾಯಗೊಂಡ ಕಾರಣ, ಬ್ಯಾಕಪ್ ಬೌಲರ್ ಆಗಿ ಅಂನ್ಸೂಲ್ ಕಾಂಬೋಜ್ ಅವರನ್ನು ಇದೀಗ ಭಾರತ ಟೆಸ್ಟ್ ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.
ಅಭ್ಯಾಸದ ವೇಳೆ ಮೊಣಕಾಲಿನ ಗಾಯಕ್ಕೆ ತುತ್ತಾದ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಸರಣಿಯ ಉಳಿದ ಪಂದ್ಯಗಳು ಮಿಸ್ ಆಗಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಎರಡು ಮತ್ತು ಮೂರನೇ ಟೆಸ್ಟ್‌ಗಳಲ್ಲಿ ಆಡಿದ್ದ ನಿತೀಶ್ ಕುಮಾರ್ ರೆಡ್ಡಿ, ಎರಡು ಮತ್ತು ಮೂರನೇ ಟೆಸ್ಟ್‌ಗಳಲ್ಲಿ ಭಾರತಕ್ಕಾಗಿ ಬೌಲಿಂಗ್ ಮಾಡಿದ್ದ ವೇಗಿ ಆಕಾಶ್ ದೀಪ್‌ಗೆ ಸೊಂಟಕ್ಕೆ ಗಾಯವಾಗಿದೆ. ಆಕಾಶ್ ದೀಪ್ ಮ್ಯಾಂಚೆಸ್ಟರ್‌ನಲ್ಲಿ ಆಡುತ್ತಾರೋ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅದೇ ಸಮಯದಲ್ಲಿ, ಮ್ಯಾಂಚೆಸ್ಟರ್‌ನಲ್ಲಿ ಪಾದಾರ್ಪಣೆ ನಿರೀಕ್ಷಿಸಿದ್ದ ಅರ್ಶ್‌ದೀಪ್‌ಗೆ ಅಭ್ಯಾಸದ ವೇಳೆ ಬೆರಳಿಗೆ ಗಾಯವಾಗಿದ್ದು ಟೀಂ ಇಂಡಿಯಾಗೆ ಹಿನ್ನಡೆಯಾಗಿದೆ.
ಇದರೊಂದಿಗೆ ಬುಧವಾರ ಆರಂಭವಾಗುವ ನಾಲ್ಕನೇ ಟೆಸ್ಟ್‌ನಲ್ಲಿ ಜಸ್ಪ್ರೀತ್ ಬುಮ್ರಾ ಆಡುವುದು ಖಚಿತವಾಗಿದೆ. ಕೆಲಸದ ಹೊರೆ ಕಡಿಮೆ ಮಾಡಲು ಬುಮ್ರಾಗೆ ವಿಶ್ರಾಂತಿ ನೀಡಲಾಗುವುದು ಎಂಬ ಸುಳಿವು ಇತ್ತು. ಇಬ್ಬರು ವೇಗಿಗಳು ಗಾಯಗೊಂಡ ಕಾರಣ ಬ್ಯಾಕಪ್ ವೇಗಿ ಆಗಿ ಅನ್ಸೂಲ್ ಕಾಂಬೋಜ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದ್ದರೂ, ನಾಲ್ಕನೇ ಟೆಸ್ಟ್‌ಗೆ ಮುನ್ನ ತಂಡವನ್ನು ಸೇರುವ ಸಾಧ್ಯತೆ ಕಡಿಮೆ. ಇಂಗ್ಲೆಂಡ್ ಲಯನ್ಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡಿದ್ದ ಭಾರತ ಎ ತಂಡದ ಸದಸ್ಯರಾಗಿದ್ದರು ಹರಿಯಾಣದ ಅನ್ಸೂಲ್ ಕಾಂಬೋಜ್. ಆಕಾಶ್ ದೀಪ್ ಕೂಡ ಆಡದಿದ್ದರೆ, ನಾಲ್ಕನೇ ಟೆಸ್ಟ್‌ನಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ವೇಗದ ತ್ರಿಮೂರ್ತಿಗಳು ಭಾರತಕ್ಕಾಗಿ ಬೌಲಿಂಗ್ ಮಾಡಲಿದ್ದಾರೆ.
ಮೂರನೇ ಟೆಸ್ಟ್‌ನಲ್ಲಿ ಬೆರಳಿಗೆ ಗಾಯಗೊಂಡಿದ್ದ ರಿಷಭ್ ಪಂತ್ ಅವರನ್ನು ತಜ್ಞ ಬ್ಯಾಟ್ಸ್‌ಮನ್ ಆಗಿ ತಂಡದಲ್ಲಿ ಸೇರಿಸಿಕೊಳ್ಳಲು ಭಾರತ ತಂಡ ಚಿಂತನೆ ನಡೆಸುತ್ತಿದೆ. ಪಂತ್ ಗಾಯವು ವಾಸಿಯಾಗದಿದ್ದರೆ, ಧ್ರುವ್ ಜುರೆಲ್ ಭಾರತದ ವಿಕೆಟ್ ಕೀಪರ್ ಆಗಿರಲಿದ್ದಾರೆ. ಜುರೆಲ್‌ರನ್ನು ಆಡಿಸಿದರೆ ಅವರಿಗೆ ಜಾಗ ಬಿಟ್ಟುಕೊಡುವವರು ಯಾರು ಮತ್ತು ಯಾವ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಾರೆ ಎಂಬ ಕುತೂಹಲವಿದೆ. ಕರುಣ್‌ರನ್ನು ಹೊರಗಿಟ್ಟು ಜುರೆಲ್‌ರನ್ನು 3ನೇ ಕ್ರಮಾಂಕದಲ್ಲಿ ಆಡಿಸುವ ಸಾಧ್ಯತೆಯಿಲ್ಲ. ಕರುಣ್ ಸ್ಥಾನಕ್ಕೆ ಸಾಯಿ ಸುದರ್ಶರ್‌ರನ್ನು ಆಡಿಸಿದರೆ, ಜುರೆಲ್‌ಗೆ ನಿತೀಶ್ ಕುಮಾರ್ ಅಥವಾ ವಾಷಿಂಗ್ಟನ್ ಸುಂದರ್ ಜಾಗ ಬಿಟ್ಟುಕೊಡಬೇಕಾಗಬಹುದು. ನಾಯಕ ಶುಭಮನ್ ಗಿಲ್, ಕೆ.ಎಲ್. ರಾಹುಲ್, ಜಸ್ಪ್ರೀತ್ ಬುಮ್ರಾ, ರಿಷಭ್ ಪಂತ್ ಮತ್ತು ವಾಷಿಂಗ್ಟನ್ ಸುಂದರ್ ನಿನ್ನೆ ಅಭ್ಯಾಸದಿಂದ ದೂರ ಉಳಿದಿದ್ದರು. ಬುಧವಾರ ನಿರ್ಣಾಯಕ ನಾಲ್ಕನೇ ಟೆಸ್ಟ್ ಆರಂಭವಾಗಲಿದೆ. ಐದು ಟೆಸ್ಟ್‌ಗಳ ಸರಣಿಯಲ್ಲಿ ಇಂಗ್ಲೆಂಡ್ 2-0 ಮುನ್ನಡೆ ಸಾಧಿಸಿದೆ. ಸರಣಿಯಲ್ಲಿ ಭಾರತಕ್ಕೆ ಗೆಲುವು ಅನಿವಾರ್ಯ.
ಇನ್ನು ಲೆಗ್‌ಸ್ಪಿನ್ನರ್ ಕುಲ್ದೀಪ್ ಯಾದವ್ ಕೂಡಾ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಭಾರತದ ಏಕೈಕ ತಜ್ಞ ಸ್ಪಿನ್ನರ್ ಆಗಿ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಕುಲ್ದೀಪ್ ಯಾದವ್, ಮೊದಲ ಮೂರು ಟೆಸ್ಟ್ ಪಂದ್ಯದಲ್ಲಿ ಬೆಂಚ್ ಕಾಯಿಸಿದ್ದರು. ಮ್ಯಾಂಚೆಸ್ಟರ್ ಟೆಸ್ಟ್‌ನ ಪಿಚ್ ಒಂದು ವೇಳೆ ಸ್ಪಿನ್ನರ್‌ಗೆ ನೆರವು ನೀಡುವಂತಿದ್ದರೇ, ನಾಲ್ಕನೇ ಟೆಸ್ಟ್‌ನಲ್ಲಿ ಕಾನ್ಪುರ ಮೂಲದ ಸ್ಪಿನ್ನರ್ ಇಂಗ್ಲೆಂಡ್ ಬ್ಯಾಟರ್‌ಗಳನ್ನು ಕಾಡುವ ಸಾಧ್ಯತೆಯಿದೆ.
