ಮುಂಬೈ(ಏ.16): ಚೆನ್ನೈ ಸೂಪರ್ ಕಿಂಗ್ಸ್‌ಗೆ ಕಮ್‌ಬ್ಯಾಕ್ ತವಕ, ಇತ್ತ ಪಂಜಾಬ್ ಕಿಂಗ್ಸ್‌ಗೆ ಗೆಲುವಿನ ಅಭಿಯಾನ ಮುಂದುವರಿಸುವ ಉತ್ಸಾಹ. ಹೀಗಾಗಿ ಇಂದು ಮತ್ತೊಂದು ರೋಚಕ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇತ್ತ ಪಂಜಾಬ್ ಕಿಂಗ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ

 

14ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಮೊದಲ ಪಂದ್ಯದಲ್ಲಿ ಮುಗ್ಗರಿಸಿದ  ಚೆನ್ನೈ ಸೂಪರ್ ಕಿಂಗ್ಸ್ ಕಮ್‌ಬ್ಯಾಕ್ ವಿಶ್ವಾಸದಲ್ಲಿದೆ. ಡೆಲ್ಲಿ ವಿರುದ್ಧ ಸೋಲು ಕಂಡ ಚೆನ್ನೈ ಸೂಪರ್ ಕಿಂಗ್ಸ್ ಇದೀಗ ಪಂಜಾಬ್ ವಿರುದ್ಧ ಗೆಲುವಿನ ವಿಶ್ವಾಸದಲ್ಲಿದೆ. ಇತ್ತ ಪಂಜಾಬ್ ಕಿಂಗ್ಸ್, ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 4 ರನ್ ಗೆಲುವು ದಾಖಲಿಸಿತ್ತು.