14ನೇ ಆವೃತ್ತಿಯ ಐಪಿಎಲ್ ಟೂರ್ನಿಯ 22ನೇ ಪಂದ್ಯದಲ್ಲಿಂದು ಆರ್‌ಸಿಬಿ ಎದುರು ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌ ಬೌಲಿಂಗ್ ಆಯ್ದುಕೊಂಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಅಹಮದಾಬಾದ್(ಏ.27): ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ 22ನೇ ಪಂದ್ಯದಲ್ಲಿಂದು ಟಾಸ್ ಗೆದ್ದ 

Add Asianetnews Kannada as a Preferred SourcegooglePreferred

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಹೈವೋಲ್ಟೇಜ್‌ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ರಜತ್ ಪಾಟೀದಾರ್ ಹಾಗೂ ಡೇನಿಯಲ್ ಸ್ಯಾಮ್ಸ್‌ ತಂಡ ಕೂಡಿಕೊಂಡಿದ್ದು, ಸೈನಿ ಹಾಗೂ ಕ್ರಿಶ್ಚಿಯನ್‌ಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಡೆಲ್ಲಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು ಅಶ್ವಿನ್ ಬದಲಿಗೆ ಇಶಾಂತ್ ಶರ್ಮಾ ತಂಡ ಕೂಡಿಕೊಂಡಿದ್ದಾರೆ.

Scroll to load tweet…

ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಉಭಯ ತಂಡಗಳು ತಲಾ 5 ಪಂದ್ಯಗಳನ್ನಾಡಿ 4 ಗೆಲುವು ಹಾಗೂ ಒಂದು ಸೋಲು ಕಂಡಿವೆ. ಅಂಕಪಟ್ಟಿಯಲ್ಲಿ ಡೆಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಆರ್‌ಸಿಬಿ 3ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ.

ತಂಡಗಳು ಹೀಗಿವೆ ನೋಡಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು

Scroll to load tweet…

ಡೆಲ್ಲಿ ಕ್ಯಾಪಿಟಲ್ಸ್:

Scroll to load tweet…