14ನೇ ಆವೃತ್ತಿ ಐಪಿಎಲ್ ಟೂರ್ನಿಯ 20ನೇ ಲೀಗ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದ ಬದಲಾವಣೆ ಏನು? ಇಲ್ಲಿದೆ ವಿವರ.

ಚೆನ್ನೈ(ಏ.25): ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಡೆಲ್ಲಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಕೊರೋನಾದಿಂದ ಚೇತರಿಸಿಕೊಂಡಿರುವ ಆಕ್ಸರ್ ಪಟೇಲ್ ತಂಡ ಸೇರಿಕೊಂಡಿದ್ದಾರೆ. ಇನ್ನು ಹೈದರಾಬಾದ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಭುವನೇಶ್ವರ್ ಕುಮಾರ್ ಬದಲು ಕನ್ನಡಿಗ ಜೆ ಸುಚಿತ್ ತಂಡ ಸೇರಿಕೊಂಡಿದ್ದಾರೆ.

Add Asianetnews Kannada as a Preferred SourcegooglePreferred

ಡೆಲ್ಲಿ ಕ್ಯಾಪಿಟಲ್ಸ್ ಆಡಿದ 4 ಪಂದ್ಯದಲ್ಲಿ 3 ಗೆಲುವು ಕಂಡಿದೆ. ಇನ್ನು ಒಂದು ಪಂದ್ಯದಲ್ಲಿ ಸೋಲು ಅನುಭವಿಸಿದೆ. 8 ಅಂಕ ಪಡೆದಿರುವ ಡೆಲ್ಲಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಬಲಿಷ್ಠ ತಂಡ ಎನಿಸಿಕೊಂಡಿದೆ. ಇತ್ತ ಸನ್‌ರೈಸರ್ಸ್ ಹೈದರಾಬಾದ್ ತಂಡ ಬಲಿಷ್ಠವಾಗಿದ್ದರೂ, ಗೆಲುವು ದೂರದ ಮಾತಾಗಿದೆ.

ಆಡಿದ 4 ಪಂದ್ಯದಲ್ಲಿ ಹೈದರಾಬಾದ್ ಕೇವಲ 1 ಗೆಲುವು ಕಂಡಿದೆ. ಡೆಲ್ಲಿ ವಿರುದ್ಧ ಅದ್ಭುತ ಪ್ರದರ್ಶನ ನೀಡೋ ಮೂಲಕ ಭರ್ಜರಿ ಗೆಲುವನ್ನು ಎದುರುನೋಡುತ್ತಿದೆ.