14ನೇ ಆವೃತ್ತಿ ಐಪಿಎಲ್ ಟೂರ್ನಿಯ 11ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿನ ಬದಲಾವಣೆ ಏನು? ಇಲ್ಲಿದೆ ವಿವರ.

ಮುಂಬೈ(ಏ.18): ಐಪಿಎಲ್ ಟೂರ್ನಿ ಪ್ರತಿ ದಿನ ರೋಚಕ ಪಂದ್ಯಕ್ಕೆ ಸಾಕ್ಷಿಯಾಗುತ್ತಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಎರಡೂ ತಂಡದಲ್ಲಿ ಬದಲಾವಣೆ ಮಾಡಾಗಿದೆ

Add Asianetnews Kannada as a Preferred SourcegooglePreferred

ಪಂಜಾಬ್ ತಂಡದಲ್ಲಿ ಅಶ್ವಿನ್ ಬದಲು ಜಲಜ್ ಸಕ್ಸೇನಾ ತಂಡ ಸೇರಿಕೊಂಡಿದ್ದಾರೆ. ಇನ್ನು ಡೆಲ್ಲಿ ತಂಡದಲ್ಲಿ ಸ್ಮಿತ್ ಬದಲು ಕುರನ್ ತಂಡ ಸೇರಿಕೊಂಡಿದ್ದಾರೆ. ಇನ್ನು ಮೆರಿವಾಲ ಕೂಡ ತಂಡ ಸೇರಿಕೊಂಡಿದ್ದಾರೆ.

Scroll to load tweet…
Scroll to load tweet…

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಎರಡು ಪಂದ್ಯದಲ್ಲಿ ಒಂದೊಂದು ಗೆಲುವು ದಾಖಲಿಸಿದೆ. ಆದರೆ ನೆಟ್ ರನ್‌ರೇಟ್ ಆಧಾರದಲ್ಲಿ ಡೆಲ್ಲಿ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದರೆ, ಇತ್ತ ಪಂಜಾಬ್ 7ನೇ ಸ್ಥಾನದಲ್ಲಿದೆ. ಹೀಗಾಗಿ ಈ ಗೆಲುವು ಉಭಯ ತಂಡಗಳಿಗೆ ಮಹತ್ವದ್ದಾಗಿದೆ.