Asianet Suvarna News Asianet Suvarna News

IPL 2021: ಬೆನ್‌ ಸ್ಟೋಕ್ಸ್‌ 12 ವಾರಗಳ ಕಾಲ ಕ್ರಿಕೆಟ್‌ನಿಂದ ಔಟ್‌..!

ರಾಜಸ್ಥಾನ ರಾಯಲ್ಸ್‌ ತಂಡದ ಸ್ಟಾರ್ ಆಲ್ರೌಂಡರ್ ಗಾಯದ ಸಮಸ್ಯೆಯಿಂದಾಗಿ ಈಗಾಗಲೇ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇನ್ನು ಹೊಸ ವಿಷಯವೆಂದರೆ ಇನ್ನು 12 ವಾರಗಳ ಕಾಲ ಸ್ಟೋಕ್ಸ್‌ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

IPL 2021 England All Rounder Ben Stokes to undergo surgery ruled out of action for up to 12 weeks kvn
Author
Mumbai, First Published Apr 16, 2021, 6:47 PM IST

ಮುಂಬೈ(ಏ.16): ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ನಿರಾಶಾದಾಯಕ ಸುದ್ದಿಯೊಂದು ಹೊರಬಿದ್ದಿದ್ದು, ಗಾಯದ ಸಮಸ್ಯೆಯಿಂದಾಗಿ ಇಂಗ್ಲೆಂಡ್‌ ಸ್ಟಾರ್ ಆಲ್ರೌಂಡರ್‌ ಬೆನ್ ಸ್ಟೋಕ್ಸ್‌ ಮುಂದಿನ 3 ತಿಂಗಳುಗಳ ಕಾಲ ಕ್ರಿಕೆಟ್‌ ಚಟುವಟಿಕೆಗಳಿಂದ ದೂರ ಉಳಿಯಲಿದ್ದಾರೆ.

ಬೆನ್‌ ಸ್ಟೋಕ್ಸ್‌ ಸದ್ಯ ಭಾರತದಲ್ಲೇ ರಾಜಸ್ಥಾನ ರಾಯಲ್ಸ್‌ ತಂಡದ ಜತೆಗಿದ್ದು, ಕೈ ಬೆರಳು ಮುರಿದುಕೊಂಡಿರುವ ಆಲ್ರೌಂಡರ್‌ ಶಸ್ತ್ರಚಿಕಿತ್ಸೆಗೆ ಒಳಗಾಗಲು ಶನಿವಾರ(ಏ.17)ದಂದು ತವರಿಗೆ ತೆರಳಲಿದ್ದಾರೆ. ಬೆನ್ ಸ್ಟೋಕ್ಸ್‌ ಪಂಜಾಬ್‌ ಕಿಂಗ್ಸ್‌ ವಿರುದ್ದ ಪಂದ್ಯದಲ್ಲಿ ಕ್ರಿಸ್‌ ಗೇಲ್‌ ಬಾರಿಸಿದ ಚೆಂಡನ್ನು ಕ್ಯಾಚ್‌ ಪಡೆಯುವ ಯತ್ನದಲ್ಲಿ ಕೈಬೆರಳಿನ ಗಾಯಕ್ಕೆ ತುತ್ತಾಗಿದ್ದರು. ಬಳಿಕ ಹೆಚ್ಚಿನ ಪರೀಕ್ಷೆ ನಡೆಸಿದಾಗ ಎಡಗೈಬೆರಳು ಮುರಿದಿರುವುದು ಖಚಿತವಾಗಿದೆ.

ಬೆನ್‌ ಸ್ಟೋಕ್ಸ್‌ ಸಂಪೂರ್ಣ ಫಿಟ್ನೆಸ್‌ ಕಾಪಾಡಿಕೊಳ್ಳಲು 12 ವಾರಗಳು ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ಬೆನ್‌ ಸ್ಟೋಕ್ಸ್‌ ತವರಿನಲ್ಲಿ ನಡೆಯಲಿರುವ ನ್ಯೂಜಿಲೆಂಡ್‌ ವಿರುದ್ದದ ಟೆಸ್ಟ್ ಸರಣಿ ಹಾಗೂ ಶ್ರೀಲಂಕಾ ಹಾಗೂ ಪಾಕಿಸ್ತಾನ ವಿರುದ್ದದ ಸೀಮಿತ ಓವರ್‌ಗಳ ಸರಣಿಯಿಂದ ಹೊರಗುಳಿಯಲಿದ್ದಾರೆ. ಯುನೈಟೆಡ್‌ ಕಿಂಗ್‌ಡಂನಲ್ಲಿ ಭಾರತ ವಿರುದ್ದ ನಡೆಯಲಿರುವ ಟೆಸ್ಟ್ ಸರಣಿಯ ವೇಳಗೆ ಬೆನ್‌ ಸ್ಟೋಕ್ಸ್‌ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.

IPL 2021 ಗಾಯದ ಮೇಲೆ ಬರೆ; ರಾಜಸ್ಥಾನ ರಾಯಲ್ಸ್‌ನಿಂದ ಬೆನ್ ಸ್ಟೋಕ್ಸ್‌ ಔಟ್‌

ಇಂಗ್ಲೆಂಡ್ ಆಲ್ರೌಂಡರ್‌ ಬೆನ್‌ ಸ್ಟೋಕ್ಸ್‌ಗೆ ನಿರಂತರ ಎಕ್ಸ್‌ ರೇ ಹಾಗೂ ಸಿಟಿ ಸ್ಕ್ಯಾನ್‌ ಮಾಡಿಸಿದ ಬಳಿಕ ಎಡಗೈ ತೋರುಬೆರಳು ಮುರಿದಿರುವುದು ಖಚಿತವಾಗಿದ್ದು, ಮುಂದಿನ 12 ವಾರಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ ಎಂದು ಇಂಗ್ಲೆಂಡ್ ಕ್ರಿಕೆಟ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಬೆನ್‌ ಸ್ಟೋಕ್ಸ್‌ ಸೋಮವಾರ(ಏ.19) ಲೀಡ್ಸ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಇದೀಗ ಬೆನ್ ಸ್ಟೋಕ್ಸ್‌ ಬದಲಿಗೆ ರಾಜಸ್ಥಾನ ರಾಯಲ್ಸ್ ಯಾವ ಆಟಗಾರರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳಲಿದೆ ಎನ್ನುವ ಕುತೂಹಲ ಜೋರಾಗಿದೆ.

Follow Us:
Download App:
  • android
  • ios