ಜೋಸ್ ಬಟ್ಲರ್ ಸಿಡಿಲಬ್ಬರದ ಶತಕ ಹಾಗೂ ಸಂಜು ಸ್ಯಾಮ್ಸನ್ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ ರಾಯಲ್ಸ್ 220 ರನ್ ಕಲೆಹಾಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ದೆಹಲಿ(ಮೇ.02): ಆರಂಭಿಕ ಬ್ಯಾಟ್ಸ್‌ಮನ್ ಜೋಸ್‌ ಬಟ್ಲರ್ ಚೊಚ್ಚಲ ಐಪಿಎಲ್ ಶತಕ ಹಾಗೂ ಸಂಜು ಸ್ಯಾಮ್ಸನ್‌ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ ರಾಯಲ್ಸ್ ಕೇವಲ 3 ವಿಕೆಟ್‌ ಕಳೆದುಕೊಂಡು 220 ರನ್‌ ಬಾರಿಸಿದ್ದು, ಸನ್‌ರೈಸರ್ಸ್‌ ಹೈದರಾಬಾದ್‌ಗೆ ಗೆಲ್ಲಲು ಕಠಿಣ ಗುರಿ ನೀಡಿದೆ.

ಹೌದು, ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ರಾಜಸ್ಥಾನ ರಾಯಲ್ಸ್ ಆರಂಭದಲ್ಲೇ ಯಶಸ್ವಿ ಜೈಸ್ವಾಲ್(12) ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾಯಿತು. ಇದರ ಬಳಿಕ ಬಟ್ಲರ್ ಕೂಡಿಕೊಂಡ ನಾಯಕ ಸಂಜು ಸ್ಯಾಮ್ಸನ್ ಆಕರ್ಷಕ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಅದರಲ್ಲೂ ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಜೋಸ್ ಬಟ್ಲರ್ ಕೇವಲ 56 ಎಸೆತಗಳನ್ನು ಎದುರಿಸಿ ಐಪಿಎಲ್‌ನಲ್ಲಿ ಚೊಚ್ಚಲ ಶತಕ ಬಾರಿಸಿದರು.

ಐಪಿಎಲ್‌ 2021: ರಾಯಲ್ಸ್ ಎದುರು ಟಾಸ್ ಗೆದ್ದ ಹೈದರಾಬಾದ್‌ ಬೌಲಿಂಗ್ ಆಯ್ಕೆ

ಒಟ್ಟು 64 ಎಸೆತಗಳನ್ನು ಎದುರಿಸಿದ ಬಟ್ಲರ್ 11 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ 124 ರನ್‌ ಬಾರಿಸಿ 19ನೇ ಓವರ್‌ನ ಕೊನೆಯ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಮತ್ತೊಂದು ತುದಿಯಲ್ಲಿ ಬಟ್ಲರ್‌ಗೆ ಉತ್ತಮ ಸಾಥ್ ನೀಡಿದ ಸಂಜು 33 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 48 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದರು. 2ನೇ ವಿಕೆಟ್‌ಗೆ ಈ ಜೋಡಿ 150 ರನ್‌ಗಳ ಜತೆಯಾಟ ನಿಭಾಯಿಸಿತು. 

Scroll to load tweet…

ಸನ್‌ರೈಸರ್ಸ್‌ ಹೈದರಾಬಾದ್‌ ಪರ ಸಂದೀಪ್ ಶರ್ಮಾ, ರಶೀದ್ ಖಾನ್ ಹಾಗೂ ವಿಜಯ್ ಶಂಕರ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಸಂಕ್ಷಿಪ್ತ ಸ್ಕೋರ್

ರಾಜಸ್ಥಾನ ರಾಯಲ್ಸ್: 220/3
ಜೋಸ್ ಬಟ್ಲರ್: 124
ರಶೀದ್ ಖಾನ್: 24/1