* ಶಾರ್ಜಾ ಮೈದಾನದಲ್ಲಿಂದು ಡೆಲ್ಲಿ-ಕೆಕೆಆರ್ ಮುಖಾಮುಖಿ* ಫ್ಲೇ ಆಫ್‌ ಖಚಿತಪಡಿಸಿಕೊಳ್ಳಲು ಎದುರು ನೋಡುತ್ತಿದೆ* ಕೆಕೆಆರ್ ಪಾಲಿಗಿದು ಮಾಡು ಇಲ್ಲವೇ ಮಡಿ ಪಂದ್ಯ

ಶಾರ್ಜಾ(ಸೆ.28): 14ನೇ ಆವೃತ್ತಿಯ ಐಪಿಎಲ್‌ (IPL 2021) ಟೂರ್ನಿಯ 41ನೇ ಪಂದ್ಯದಲ್ಲಿಂದು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ಹಾಗೂ ಕೋಲ್ಕತ ನೈಟ್ ರೈಡರ್ಸ್‌ (Kolkata Knight Riders) ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಇಯಾನ್‌ ಮಾರ್ಗನ್‌ ಬೌಲಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ

ಈ ಹೈವೋಲ್ಟೇಜ್‌ ಪಂದ್ಯಕ್ಕೆ ಇಲ್ಲಿನ ಶಾರ್ಜಾ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಿದೆ. ಒಂದು ಕಡೆ ರಿಷಭ್‌ ಪಂತ್‌ (Rishabh Pant) ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಟೂರ್ನಿಯಲ್ಲಿ ಸತತ 5ನೇ ಗೆಲುವಿನ ಕನವರಿಕೆಯಲ್ಲಿದೆ. ಇನ್ನೊಂದೆಡೆ ಕೋಲ್ಕತ ನೈಟ್‌ ರೈಡರ್ಸ್‌ ತಂಡದ ಪಾಲಿಗೆ ಈ ಪಂದ್ಯದ ಪ್ಲೇ ಆಫ್‌ ದೃಷ್ಟಿಯಿಂದ ಸಾಕಷ್ಟು ಮಹತ್ವ ಪಡೆದಿದೆ. ನಿರೀಕ್ಷೆಯಂತೆಯೇ ಇಯಾನ್ ಮಾರ್ಗನ್‌ ನೇತೃತ್ವದ ಕೋಲ್ಕತ ನೈಟ್‌ ರೈಡರ್ಸ್‌ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದ್ದು, ರಸೆಲ್‌ ಬದಲಿಗೆ ಟಿಮ್‌ ಸೌಥಿ ಹಾಗೂ ಪ್ರಸಿದ್ಧ್ ಕೃಷ್ಣ ಬದಲಿಗೆ ಸಂದೀಪ್‌ ವಾರಿಯರ್‌ ತಂಡ ಕೂಡಿಕೊಂಡಿದ್ದಾರೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಪೃಥ್ವಿ ಶಾ ಬದಲಿಗೆ ಸ್ಟೀವ್ ಸ್ಮಿತ್ ತಂಡ ಕೂಡಿಕೊಂಡಿದ್ದಾರೆ.

Scroll to load tweet…

ಇಂಡಿಯನ್‌ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಕೋಲ್ಕತ ನೈಟ್‌ ರೈಡರ್ಸ್‌ ತಂಡಗಳು ಇದುವರೆಗೂ 26 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಎರಡೂ ತಂಡಗಳು ಒಂದು ರೀತಿ ಸಮಬಲದ ಪ್ರದರ್ಶನ ತೋರಿವೆ. 26 ಪಂದ್ಯಗಳ ಪೈಕಿ ಕೋಲ್ಕತ ನೈಟ್‌ ರೈಡರ್ಸ್‌ ತಂಡವು 14 ಬಾರಿಗೆ ಗೆಲುವು ದಾಖಲಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 12 ಬಾರಿ ಗೆಲುವಿನ ನಗೆ ಬೀರಿದೆ.

IPL 2021 DC vs KKR ಸತತ 5ನೇ ಗೆಲುವಿನ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್‌..!

14ನೇ ಆವೃತ್ತಿಯಲ್ಲಿ ಐಪಿಎಲ್‌ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 10 ಪಂದ್ಯಗಳನ್ನಾಡಿ 8 ಗೆಲುವು ಹಾಗೂ 2 ಸೋಲುಗಳೊಂದಿಗೆ 16 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಈ ಪಂದ್ಯವನ್ನು ಜಯಿಸಿದರೆ ಅಧಿಕೃತವಾಗಿ ಪ್ಲೇ ಆಫ್‌ಗೆ ಲಗ್ಗೆಯಿಡಲಿದೆ. ಇನ್ನೊಂದೆಡೆ ಇಯಾನ್‌ ಮಾರ್ಗನ್‌ ನೇತೃತ್ವದ ಕೋಲ್ಕತ ನೈಟ್‌ ರೈಡರ್ಸ್ ತಂಡವು 10 ಪಂದ್ಯಗಳನ್ನಾಡಿ 4 ಗೆಲುವು ಹಾಗೂ 6 ಸೋಲುಗಳೊಂದಿಗೆ 8 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು, ಈ ಪಂದ್ಯವನ್ನು ಜಯಿಸಿದರೆ ನಾಲ್ಕನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳಲಿದೆ.

ತಂಡಗಳು ಹೀಗಿವೆ ನೋಡಿ

ಕೋಲ್ಕತ ನೈಟ್‌ ರೈಡರ್ಸ್

Scroll to load tweet…

ಡೆಲ್ಲಿ ಕ್ಯಾಪಿಟಲ್ಸ್‌:

Scroll to load tweet…