2021ರ ಐಪಿಎಲ್ ಟೂರ್ನಿಯ 5ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದೆ. ಮಹತ್ವದ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದ ಬದಲಾವಣೆ ಏನು? ಇಲ್ಲಿದೆ.

ಚೆನ್ನೈ(ಏ.13): ಐಪಿಎಲ್ ಟೂರ್ನಿಯ ಪ್ರತಿ ಪಂದ್ಯ ರೋಚಕತೆ ಹೆಚ್ಚಿಸುತ್ತಿದೆ. ಇಂದು ಮತ್ತೊಂದು ಹೊಡಿ ಬಡಿ ಆಟಕ್ಕೆ ಚೆನ್ನೈ ಕ್ರೀಡಾಂಗಣ ಸಾಕ್ಷಿಯಾಗುವ ಎಲ್ಲಾ ಸಾಧ್ಯತೆ ಇದೆ. ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದಿರುವ ಕೆಕೆಆರ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

Scroll to load tweet…

ಮುಂಬೈ ತಂಡದಲ್ಲಿ ಕ್ರಿಸ್ ಲಿನ್ ಬದಲು ಕ್ವಿಂಟನ್ ಡಿಕಾಕ್ ಸ್ಥಾನ ಪಡೆದಿದ್ದಾರೆ. ಇತ್ತ ಕೆಕೆಆರ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಮುಗ್ಗರಿಸಿದ ಮುಂಬೈ ಇಂಡಿಯನ್ಸ್ ಇದೀಗ ಕಮ್‌ಬ್ಯಾಕ್ ವಿಶ್ವಾಸದಲ್ಲಿದೆ. ಇತ್ತ ಶುಭಾರಂಭ ಮಾಡಿರುವ ಕೋಲ್ಕತಾ ನೈಟ್ ರೈಡರ್ಸ್ ಗೆಲುವಿನ ಅಭಿಯಾನ ಮುಂದುವರಿಸಲು ಸಜ್ಜಾಗಿದೆ.