ಸತತ ಸೋಲಿನಿಂದ ಕಂಗೆಟ್ಟಿದ್ದ ಪಂಜಾಬ್ ಕಿಂಗ್ಸ್, ಭರ್ಜರಿ ಕಮ್‌ಬ್ಯಾಕ್ ಮಾಡಿದೆ. ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮಿಂಚಿನ ಪ್ರದರ್ಶನ ನೀಡಿದ ಪಂಜಾಬ್ 9 ವಿಕೆಟ್ ಗೆಲವು ದಾಖಲಿಸಿದೆ.

ಚೆನ್ನೈ(ಏ.23): ಮುಂಬೈ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಿದ ಪಂಜಾಬ್ ಕಿಂಗ್ಸ್, ಯಾವುದೇ ಆತಂಕವಿಲ್ಲದೆ ಗೆಲುವಿನ ದಡ ಸೇರಿತು. ಪಂಜಾಬ್ ಓವರ್‌ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಗೆಲುವು ದಾಖಲಿಸಿತು.

Add Asianetnews Kannada as a Preferred SourcegooglePreferred

ಗೆಲುವಿಗೆ 132 ರನ್ ಟಾರ್ಗೆಟ್ ಪಡದ ಪಂಜಾಬ್ ಕಿಂಗ್ಸ್ ಉತ್ತಮ ಆರಂಭ ಪಡೆಯಿತು. ನಾಯಕ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಮೊದಲ ವಿಕೆಟ್‌ಗೆ 53 ರನ್ ಜೊತೆಯಾಟ ನೀಡಿತು. ಮಯಾಂಕ್ ಅಗರ್ವಾಲ್ 25 ರನ್ ಸಿಡಿಸಿ ಔಟಾದರು.

ಕ್ರಿಸ್ ಗೇಲ್ ಜೊತೆ ಬ್ಯಾಟಿಂಗ್ ಮುಂದುವರಿಸಿದ ಕೆಎಲ್ ರಾಹುಲ್ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು. ಇತ್ತ ಗೇಲ್ ಕೂಡ ಉತ್ತಮ ಸಾಥ್ ನೀಡಿದರು. ರಾಹುಲ್ ಅಜೇಯ 60 ರನ್ ಸಿಡಿಸಿದರು. ಕ್ರಿಸ್ ಗೇಲ್ ಅಜೇಯ 43 ರನ್ ಸಿಡಿಸಿದರು. ಈ ಮೂಲಕ ಪಂಜಾಬ್ 17.4 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗೆಲುವು ದಾಖಲಿಸಿತು. 9 ವಿಕೆಟ್ ಭರ್ಜರಿ ಗೆಲುವು ದಾಖಲಿಸಿದ ಪಂಜಾಬ್ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.