Asianet Suvarna News Asianet Suvarna News

IPL 2021: ಚೆನ್ನೈ ಸೂಪರ್‌ ಕಿಂಗ್ಸ್‌ ಎದುರು ಟಾಸ್ ಗೆದ್ದ KKR ಬ್ಯಾಟಿಂಗ್ ಆಯ್ಕೆ

* ಅಬುಧಾಬಿಯಲ್ಲಿಂದು ಚೆನ್ನೈ ವರ್ಸಸ್‌ ಕೋಲ್ಕತ ಫೈಟ್‌

* ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಕನಸು ಕಾಣುತ್ತಿದೆ ಸಿಎಸ್‌ಕೆ

* ಹ್ಯಾಟ್ರಿಕ್ ಗೆಲುವಿನ ಕನವರಿಕೆಯಲ್ಲಿದೆ ಕೋಲ್ಕತ ನೈಟ್‌ ರೈಡರ್ಸ್‌

IPL 2021 Kolkata Knight Riders won the toss and Elected to Bat against Chennai Super Kings in Abu Dhabi kvn
Author
Abu Dhabi - United Arab Emirates, First Published Sep 26, 2021, 3:05 PM IST

ಅಬುಧಾಬಿ(ಸೆ.26): 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ 38ನೇ ಪಂದ್ಯದಲ್ಲಿಂದು ಚೆನ್ನೈ ಸೂಪರ್‌ ಕಿಂಗ್ಸ್(Chennai Super Kings) ಹಾಗೂ ಕೋಲ್ಕತ ನೈಟ್‌ ರೈಡರ್ಸ್‌(Kolkata Knight Riders) ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಕೆಕೆಆರ್ ನಾಯಕ ಇಯಾನ್‌ ಮಾರ್ಗನ್‌ ಬ್ಯಾಟಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ

ಎರಡು ಬಲಿಷ್ಠ ತಂಡಗಳ ನಡುವಿನ ಕಾದಾಟಕ್ಕೆ ಇಲ್ಲಿನ ಶೇಕ್ ಜಾಯೆದ್ ಮೈದಾನ ಆತಿಥ್ಯವನ್ನು ವಹಿಸಿದೆ. ನಿರೀಕ್ಷೆಯಂತೆಯೇ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಡ್ವೇನ್‌ ಬ್ರಾವೋಗೆ ವಿಶ್ರಾಂತಿ ನೀಡಲಾಗಿದೆ. ಬ್ರಾವೋ ಬದಲಿಗೆ ಸ್ಯಾಮ್‌ ಕರ್ರನ್‌ ತಂಡ ಕೂಡಿಕೊಂಡಿದ್ದಾರೆ. ಇನ್ನು ಕೆಕೆಆರ್ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. 

ಭಾರತದಲ್ಲಿ ನಡೆದ ಮೊದಲ ಚರಣದಲ್ಲಿ ನೀರಸ ಪ್ರದರ್ಶನ ತೋರಿದ್ದ ಇಯಾನ್‌ ಮಾರ್ಗನ್‌(Eoin Morgan) ನೇತೃತ್ವದ ಕೋಲ್ಕತ ನೈಟ್‌ ರೈಡರ್ಸ್‌ ಅರಬ್ಬರ ನಾಡಿನಲ್ಲಿ ಅತ್ಯಮೋಘ ಪ್ರದರ್ಶನದ ಮೂಲಕ ಫ್ಲೇ ಆಫ್‌ಗೇರುವತ್ತ ದಿಟ್ಟ ಹೆಜ್ಜೆಯಿಡಲಾರಂಭಿಸಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡವನ್ನು ಅನಾಯಾಸವಾಗಿ ಮಣಿಸಿದ್ದ ಮಾರ್ಗನ್‌ ಪಡೆ ಎರಡನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ಗೆ ಸೋಲಿನ ಶಾಕ್ ನೀಡುವ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ.

IPL 2021: ಚೆನ್ನೈ ಮುಂದೆ ನಡೆಯುತ್ತಾ KKR ಆಕ್ರಮಣಕಾರಿ ಆಟ..?

ಇನ್ನೊಂದೆಡೆ ಆಡಿದ 9 ಪಂದ್ಯಗಳ ಪೈಕಿ 7 ಗೆಲುವು ಹಾಗೂ ಕೇವಲ 2 ಸೋಲುಗಳೊಂದಿಗೆ 14 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಮಹೇಂದ್ರ ಸಿಂಗ್ ಧೋನಿ(MS Dhoni) ಪಡೆ ಕೂಡಾ ಮತ್ತೊಮ್ಮೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲು ಹವಣಿಸುತ್ತಿದೆ. ಸಿಎಸ್‌ಕೆ ತಂಡ ಕೂಡಾ ಸತತ 2 ಗೆಲುವು ದಾಖಲಿಸಿದ್ದು, ಹ್ಯಾಟ್ರಿಕ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಎದುರು ನೋಡುತ್ತಿದೆ. 

ಐಪಿಎಲ್‌ ಇತಿಹಾಸದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ಕೋಲ್ಕತ ನೈಟ್‌ ರೈಡ​ರ್ಸ್ ತಂಡಗಳು ಒಟ್ಟು 23 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಸ್ಪಷ್ಟ ಮೇಲುಗೈ ಸಾಧಿಸಿದೆ. ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು 15 ಬಾರಿ ಗೆಲುವು ದಾಖಲಿಸಿದ್ದರೆ, ಕೋಲ್ಕತ ತಂಡವು 8 ಬಾರಿ ಮಾತ್ರ ಗೆಲುವಿನ ರುಚಿ ಕಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಯಾರು ಗೆಲುವಿನ ನಗೆ ಬೀರುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ತಂಡಗಳು ಹೀಗಿವೆ

ಚೆನ್ನೈ ಸೂಪರ್ ಕಿಂಗ್ಸ್‌:

ಕೋಲ್ಕತ ನೈಟ್‌ ರೈಡರ್ಸ್‌:

 

 

Follow Us:
Download App:
  • android
  • ios