ಅಪೆಂಡಿಕ್ಸ್ ಆರೋಗ್ಯ ಸಮಸ್ಯೆ ಕಾರಣ ಆಸ್ಪತ್ರೆ ದಾಖಲಾಗಿರುವ ಕೆಎಲ್ ರಾಹುಲ್ ಚೇತರಿಸಿಕೊಳ್ಳುತ್ತಿದ್ದಾರೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ತಂಡದ ನಾಯಕತ್ವ ಜವ್ದಾರಿಯನ್ನು ಮತ್ತೋರ್ವ ಕನ್ನಡಿಗನಿಗೆ ನೀಡಲಾಗಿದೆ

ಅಹಮ್ಮದಾಬಾದ್(ಮೇ.02): ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆ ದಾಖಲಾಗ ಪಂಜಾಬ್ ಕಿಂಗ್ಸ್ ನಾಯಕ ಕೆಎಲ್ ರಾಹುಲ್ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಅಪೆಂಡಿಕ್ಸ್ ಕಾರಣ ಶಸ್ತ್ರಚಿಕಿತ್ಸೆ ಅವಶ್ಯಕತೆ ಇದೆ. ಹೀಗಾಗಿ ಇಂದಿನ(ಮೇ.02) ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ರಾಹುಲ್ ಅಲಭ್ಯರಾಗಿದ್ದಾರೆ. ಹೀಗಾಗಿ ಮಯಾಂಕ್ ಅಗರ್ವಾಲ್ ತಂಡವನ್ನು ಮುನ್ನಡೆಸಲಿದ್ದಾರೆ.

Add Asianetnews Kannada as a Preferred SourcegooglePreferred

ದಿಢೀರ್ ಆರೋಗ್ಯ ಸಮಸ್ಯೆ, ಆಸ್ಪತ್ರೆ ದಾಖಲಾದ ಪಂಜಾಬ್ ನಾಯಕ ಕೆಎಲ್ ರಾಹುಲ್!.

ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಮತ್ತೊರ್ವ ಕನ್ನಡಿಗ ಮಯಾಂಕ್ ಅಗರ್ವಾಲ್ ನಾಯಕತ್ವ ಜವಾಬ್ದಾರಿ ನೀಡಲಾಗಿದೆ. ಕೆಎಲ್ ರಾಹುಲ್ ಅಲಭ್ಯತೆ ಪಂಜಾಬ್ ಕಿಂಗ್ಸ್ ತಂಡಕ್ಕೆ ಬಹುದೊಡ್ಡ ಹೊಡೆತವಾಗಿದೆ. 7 ಪಂದ್ಯದಲ್ಲಿ 331 ರನ್ ಸಿಡಿಸಿರುವ ರಾಹುಲ್ ಆರೇಂಜ್ ಕ್ಯಾಪ್ ಹೋಲ್ಡರ್ ಆಗಿದ್ದಾರೆ. 

ಕೆಎಲ್ ರಾಹುಲ್ ಶೀಘ್ರದಲ್ಲೇ ಚೇತರಿಸಿಕೊಳ್ಳಲಿದ್ದಾರೆ. ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಹುಲ್ ಚೇತರಿಕೆಗೆ ನಮ್ಮ ಪ್ರಾರ್ಥನೆ ಎಂದು ಪಂಜಾಬ್ ಕಿಂಗ್ಸ್ ಟ್ವೀಟ್ ಮಾಡಿದೆ.