ಕೋವಿಡ್ ಸೋಂಕಿನಿಂದ ಹಸ್ಸಿ ಗುಣಮುಖ, ಸಾಹಗೆ ಮತ್ತೆ ಪಾಸಿಟಿವ್!
* ಕೋವಿಡ್‌ನಿಂದ ಗುಣಮುಖರಾದ ಆಸ್ಟ್ರೇಲಿಯಾ ಕ್ರಿಕೆಟಿಗ ಮೈಕಲ್ ಹಸ್ಸಿ
* ಮೈಕ್ ಹಸ್ಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಕೋಚ್
* ಇನ್ನು ವೃದ್ದಿಮಾನ್ ಸಾಹಗೆ ಮತ್ತೆ ಕೋವಿಡ್ ಪಾಸಿಟಿವ್
ನವದೆಹಲಿ(ಮೇ.15): ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ತಂಡದ ಬ್ಯಾಟಿಂಗ್ ಕೋಚ್ ಮೈಕಲ್ ಹಸ್ಸಿ ಕೊರೋನಾದಿಂದ ಗುಣಮುಖರಾಗಿದ್ದು, ಭಾನುವಾರ ಆಸ್ಪ್ರೇಲಿಯಾಗೆ ಹೊರಡುವ ನಿರೀಕ್ಷೆ ಇದೆ.
ಶುಕ್ರವಾರ ನಡೆಸಿದ ಕೋವಿಡ್ ಪರೀಕ್ಷೆಯ ವರದಿ ನೆಗೆಟಿವ್ ಬಂದಿದೆ. ಭಾರತದಿಂದ ಆಸ್ಟ್ರೇಲಿಯಾಗೆ ವಿಮಾನ ಹಾರಾಟವನ್ನು ಅಸ್ಟ್ರೇಲಿಯಾ ಸರ್ಕಾರ ನಿಷೇಧಿಸಿದೆ. ಹೀಗಾಗಿ ಹಸ್ಸಿ, ಚೆನ್ನೈನಿಂದ ಮಾಲ್ಡೀಲ್ಸ್‌ಗೆ ತೆರಳಿ ಅಲ್ಲಿಂದ ಆಸ್ಪ್ರೇಲಿಯಾಗೆ ಹೋಗುವ ಸಾಧ್ಯತೆ ಇದೆ.
ಐಪಿಎಲ್ 2021: ಮತ್ತೊಮ್ಮೆ ಮೈಕ್ ಹಸ್ಸಿಗೆ ಕೋವಿಡ್ ಪಾಸಿಟಿವ್..!
ಇದೇ ವೇಳೆ ಸನ್ರೈಸರ್ಸ್ ಹೈದರಾಬಾದ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಾಹಗೆ ಶುಕ್ರವಾರ ನಡೆಸಿದ ಪರೀಕ್ಷೆಯಲ್ಲೂ ಕೊರೋನಾ ಪಾಸಿಟಿವ್ ಬಂದಿದ್ದು, ಅವರು ಐಸೋಲೇಷನ್‌ನಲ್ಲಿ ಮುಂದುವರಿಯಲಿದ್ದಾರೆ.
ವೃದ್ದಿಮಾನ್ ಸಾಹ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ಪ್ರವಾಸಕ್ಕೆ ಸ್ಥಾನ ಗಿಟ್ಟಿಸಿಕೊಳ್ಳಬೇಕಿದ್ದರೆ, ತಮ್ಮ ಫಿಟ್‌ನೆಸ್ ಸಾಬೀತುಪಡಿಸಿ ಮೇ.25ರಂದು ಮುಂಬೈನಲ್ಲಿ ಬಯೋ ಬಬಲ್ ಪ್ರವೇಶಿಸಬೇಕಾಗುತ್ತದೆ.
14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕೆಕೆಆರ್ ಆಟಗಾರರಾದ ವರುಣ್ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್‌ಗೆ ಬಯೋ ಬಬಲ್‌ನೊಳಗಿರುವಾಗಲೇ ಕೋವಿಡ್ ಪಾಸಿಟಿವ್ ಬಂದಿತ್ತು. ಮರುದಿನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ಹಾಗೂ ವೃದ್ದಿಮಾನ್ ಸಾಹಗೆ ಕೋವಿಡ್ 19 ಸೋಂಕು ದೃಢಪಡುತ್ತಿದ್ದಂತೆಯೇ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಬಿಸಿಸಿಐ ಅನಿರ್ದಿಷ್ಟಾವಧಿಗೆ ಮುಂದೂಡಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona