ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಪೋಷಕರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ರಾಂಚಿ(ಏ.22): ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರ ತಂದೆ-ತಾಯಿಗೆ ಬುಧವಾರ(ಏ.21) ಕೊರೋನಾ ಸೋಂಕು ದೃಢಪಟ್ಟಿದೆ. ಅವರನ್ನು ರಾಂಚಿ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಧೋನಿ ತಂದೆ ಪಾನ್‌ ಸಿಂಗ್‌ ಹಾಗೂ ತಾಯಿ ದೇವಕಿ ದೇವಿ ಅವರಿಗೆ ಸೋಂಕು ತಗುಲಿದ ಕಾರಣ ಅವರನ್ನು ರಾಂಚಿಯ ಪಲ್ಸ್‌ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆಮ್ಲಜನಕ ಮಟ್ಟ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಹೇಳಿಕೆ ತಿಳಿಸಿದೆ’ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

Scroll to load tweet…

ಸದ್ಯ ಮಹೇಂದ್ರ ಸಿಂಗ್ ಧೋನಿ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಮುನ್ನಡೆಸುತ್ತಿದ್ದಾರೆ. ಧೋನಿ ನೇತೃತ್ವದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು 3 ಬಾರಿ ಐಪಿಎಲ್ ಚಾಂಪಿಯನ್‌ ಪಟ್ಟ ಅಲಂಕರಿಸಿದೆ. 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ 15 ಪಂದ್ಯಗಳು ಮುಕ್ತಾಯದ ವೇಳೆಗೆ ಚೆನ್ನೈ ಸೂಪರ್‌ ಕಿಂಗ್ಸ್‌ ಒಂದು ಸೋಲು ಹಾಗೂ 3 ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಪ್ಯಾಟ್ ಕಮಿನ್ಸ್ ಹೋರಾಟ ವ್ಯರ್ಥ; ಚೆನ್ನೈ ಸೂಪರ್‌ಕಿಂಗ್ಸ್‌ಗೆ ಹ್ಯಾಟ್ರಿಕ್ ಗೆಲುವು!

ಭಾರತಕ್ಕೆ 3 ಐಸಿಸಿ ಟ್ರೋಫಿ(ಟಿ20 ವಿಶ್ವಕಪ್, ಏಕದಿನ ವಿಶ್ವಕಪ್& ಚಾಂಪಿಯನ್ಸ್‌ ಟ್ರೋಫಿ) ಗೆದ್ದುಕೊಟ್ಟ ವಿಶ್ವದ ಏಕೈಕ ನಾಯಕ ಎನ್ನುವ ವಿಶ್ವದಾಖಲೆ ನಿರ್ಮಿಸಿರುವ ಧೋನಿ 2020ರ ಆಗಸ್ಟ್ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು.