* ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾದ ಮುಂಬೈ ಇಂಡಿಯನ್ಸ್‌-ಪಂಜಾಬ್ ಕಿಂಗ್ಸ್‌* ಈ ಹೈವೋಲ್ಟೇಜ್ ಪಂದ್ಯಕ್ಕೆ ಅಬುಧಾಭಿಯ ಶೇಕ್ ಜಾಯೆದ್ ಮೈದಾನ ಆತಿಥ್ಯ* ಇಂದು ಸೋಲುವ ತಂಡ ಬಹುತೇಕ್‌ ಪ್ಲೇ ಆಫ್‌ ರೇಸ್‌ನಿಂದ ಔಟ್

ಅಬುಧಾಬಿ(ಸೆ.28): ಹ್ಯಾಟ್ರಿಕ್‌ ಸೋಲಿನಿಂದ ಕಂಗೆಟ್ಟಿರುವ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌(Mumbai Indians), ಮಂಗಳವಾರ ಸ್ಥಿರತೆ ಕಾಪಾಡಿಕೊಳ್ಳಲು ಪರದಾಡುತ್ತಿರುವ ಪಂಜಾಬ್‌ ಕಿಂಗ್ಸ್‌(Punjab Kings) ವಿರುದ್ಧ ಸೆಣಸಲಿದೆ. ಯುಎಇ ಚರಣದಲ್ಲಿ ನಡೆಯುತ್ತಿರುವ ಮೂರನೇ ಡಬ್ಬಲ್ ಹೆಡ್ಡರ್ ಪಂದ್ಯ ಇದಾಗಿದೆ

ಇಲ್ಲಿನ ಶೇಕ್‌ ಜಾಯೆದ್ ಮೈದಾನದಲ್ಲಿ ನಡೆಯಲಿರುವ ಪಂದ್ಯವು ಪ್ಲೇ-ಆಫ್‌ ಆಸೆ ಜೀವಂತವಾಗಿರಿಸಿಕೊಳ್ಳುವ ದೃಷ್ಟಿಯಿಂದ ಎರಡೂ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದೆ. ಈ ಪಂದ್ಯದಲ್ಲಿ ಸೋಲುವ ತಂಡ ಪ್ಲೇ-ಆಫ್‌ ರೇಸ್‌ನಿಂದ ಬಹುತೇಕ ಹೊರಬೀಳಲಿದೆ. ರಾಜಸ್ಥಾನ ರಾಯಲ್ಸ್ ಎದುರಿನ ಪಂದ್ಯದಲ್ಲಿ ಅನಾಯಾಸವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ಕೇವಲ 2 ರನ್‌ಗಳಿಂದ ಪಂಜಾಬ್ ಕೈಚೆಲ್ಲಿತ್ತು. ಇದಾದ ಬಳಿಕ ಸನ್‌ರೈಸರ್ಸ್ ಹೈದರಾಬಾದ್ (SRH) ಎದುರು ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ 5 ರನ್‌ಗಳ ರೋಚಕ ಗೆಲುವು ಸಾಧಿಸುವ ಮೂಲಕ ಪ್ಲೇ ಆಫ್‌ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

Scroll to load tweet…

IPL 2021 DC vs KKR ಸತತ 5ನೇ ಗೆಲುವಿನ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್‌..!

ರೋಹಿತ್ ಶರ್ಮಾ (Rohit Sharma) ನೇತೃತ್ವದ ಮುಂಬೈ ಇಂಡಿಯನ್ಸ್‌ ತಂಡವು ಯುಎಇ ಚರಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ (CSK), ಕೋಲ್ಕತ ನೈಟ್‌ ರೈಡರ್ಸ್‌ (KKR) ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಎದುರು ಆಘಾತಕಾರಿ ಸೋಲು ಕಂಡಿದ್ದು, ಪ್ಲೇ ಆಫ್ ಸ್ಥಾನಕ್ಕೇರಲು ಪರದಾಡುತ್ತಿದೆ. ಇನ್ನೊಂದು ಕಡೆ ಕೆ.ಎಲ್‌. ರಾಹುಲ್ (KL Rahul) ನೇತೃತ್ವದ ಪಂಜಾಬ್ ಕಿಂಗ್ಸ್‌ ತಂಡದ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. 

Scroll to load tweet…

ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್‌ ತಂಡಗಳು ಇದುವರೆಗೂ ಒಟ್ಟು 27 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡವು 14 ಬಾರಿ ಗೆಲುವಿನ ನಗೆ ಬೀರಿದ್ದರೆ, ಪಂಜಾಬ್ ಕಿಂಗ್ಸ್‌ ತಂಡವು 13 ಬಾರಿ ಗೆಲುವಿನ ಕೇಕೆ ಹಾಕಿದೆ.

ಮುಂಬೈ ಇಂಡಿಯನ್ಸ್‌: ರೋಹಿತ್‌ ಶರ್ಮಾ(ನಾಯಕ), ಕ್ವಿಂಟನ್ ಡಿ ಕಾಕ್‌, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್‌, ಹಾರ್ದಿಕ್ ಪಾಂಡ್ಯ‌, ಕೃನಾಲ್ ಪಾಂಡ್ಯ‌, ಕೀರನ್ ಪೊಲ್ಲಾರ್ಡ್‌, ರಾಹುಲ್‌ ಚಹರ್‌, ಆಡಂ ಮಿಲ್ನೆ, ಜಸ್ಪ್ರೀತ್‌ ಬುಮ್ರಾ, ಟ್ರೆಂಟ್ ಬೌಲ್ಟ್‌.

ಪಂಜಾಬ್‌ ಕಿಂಗ್ಸ್‌: ಕೆ.ಎಲ್ ರಾಹುಲ್‌(ನಾಯಕ), ಮಯಾಂಕ್ ಅಗರ್‌ವಾಲ್‌‌, ಕ್ರಿಸ್ ಗೇಲ್‌, ಏಡನ್‌ ಮಾರ್ಕ್ರಮ್‌, ನಿಕೋಲಸ್ ಪೂರನ್‌, ದೀಪಕ್ ಹೂಡಾ, ಎಲ್ಲೀಸ್‌, ಹಪ್ರೀರ್ತ್‌‌ ಬ್ರಾರ್, ರವಿ ಬಿಷ್ಣೋಯ್‌, ಮೊಹಮ್ಮದ್ ಶಮಿ, ಅಶ್‌ರ್‍ದೀಪ್ ಸಿಂಗ್‌.

ಸ್ಥಳ: ಅಬುಧಾಬಿ
ಪಂದ್ಯ ಆರಂಭ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌